IND vs SL T20: ಇಂದು ಭಾರತ- ಶ್ರೀಲಂಕಾ 2ನೇ ಟಿ20 ಪಂದ್ಯ ನಡೆಯುವುದು ಅನುಮಾನ: ಯಾಕೆ ಗೊತ್ತೇ?

Dharamshala Weather Update: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ಶ್ರೀಲಂಕಾ ನಡುವೆ ಬಹುನಿರೀಕ್ಷಿತ ಎರಡನೇ ಟಿ20 ಪಂದ್ಯ ಆಯೋಜನೆಯಾಗಿದೆ. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

IND vs SL T20: ಇಂದು ಭಾರತ- ಶ್ರೀಲಂಕಾ 2ನೇ ಟಿ20 ಪಂದ್ಯ ನಡೆಯುವುದು ಅನುಮಾನ: ಯಾಕೆ ಗೊತ್ತೇ?
Dharamshala Weather IND vs SL
Follow us
TV9 Web
| Updated By: Vinay Bhat

Updated on: Feb 26, 2022 | 10:48 AM

ಇಂದು ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವೆ ಬಹುನಿರೀಕ್ಷಿತ ಎರಡನೇ ಟಿ20 ಪಂದ್ಯ ಆಯೋಜನೆಯಾಗಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣ (Himachal Pradesh Cricket Association Stadium, Dharamsala) ಈ ರೋಚಕ ಕದನಕ್ಕೆ ಸಾಕ್ಷಿಯಾಗಲಿದೆ. ಮೊದಲ ಟಿ20 ಯಲ್ಲಿ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿದ ಟೀಮ್ ಇಂಡಿಯಾ (Team India) 62 ರನ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಬೊಂಬಾಟ್ ಬ್ಯಾಟಿಂಗ್ ನಡೆಸಿದ್ದರಿಂದ ತಂಡದ ಮೊತ್ತ 200ರ ಅಂಚಿಗೆ ತಲುಪಿತ್ತು. ಭಾರತವೀಗ ನಯನಮನೋಹರ ಧರ್ಮಶಾಲಾ ಅಂಗಳದಲ್ಲಿ ಇಂದಿನ ಎರಡನೇ ಕದನ ಕೂಡ ಗೆದ್ದು ಸರಣಿ ವಶಪಡಿಸಿಕೊಳ್ಳಲು ಹೊರಟಿದೆ. ಇತ್ತ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿರುವ ಶ್ರೀಲಂಕಾ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡಲು ಎಲ್ಲ ಯೋಜನೆ ಮಾಡಿಕೊಂಡಿದೆ. ಆದರೆ, ಇದಕ್ಕೂ ಮುನ್ನ ಉಭಯ ತಂಡಗಳು ದೊಡ್ಡ ಆಘಾತ ಉಂಟಾಗಿದೆ. ಭಾರತ- ಶ್ರೀಲಂಕಾ ಎರಡನೇ ಟಿ20 ಪಂದ್ಯ ನಡೆಯುವುದೇ ಅನುಮಾನ ಎಂಬಂತಾಗಿದೆ.

ಹೌದು, ಹೈವೋಲ್ಟೇಜ್ ಪಂದ್ಯ ಎಂದೇ ನಿರೀಕ್ಷಿಸಲಾಗಿದ್ದ ಇಂಡೋ-ಲಂಕಾ ದ್ವಿತೀಯ ಟಿ20 ಕದನಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಹಿಮಾಚಲ ಪ್ರದೇಶದ ನಗರವಾಗಿರುವ ಧರ್ಮಶಾಲಾ ಟಿ20 ಸರಣಿಯ ಅಂತಿಮ ಎರಡು ಪಂದ್ಯಗಳು ಆಯೋಜನೆಯಾಗಿದ್ದು ಶನಿವಾರ ಹಾಗೂ ಭಾನುವಾರ ಈ ಪಂದ್ಯಗಳು ನಡೆಯಲಿದೆ. ಆದರೆ ಈಗಿನ ಹವಾಮಾನ ವರದಿಯ ಪ್ರಕಾರ, ಇಂದು ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆಯಿದೆಯಂತೆ.

ಹಿಮಾಚಲ ಪ್ರದೇಶದ ಧರ್ಮ ಶಾಲಾದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಂಜೆ ಮಳೆಯಾಗುತ್ತಿದೆ. ಶನಿವಾರವೂ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಲ್ಲಿ ಮಳೆಯ ಕಾರಣದಿಂದಲೇ ದಕ್ಷಿಣ ಆಫ್ರಿಕಾ ಎದುರಿನ 2019ರ ಟಿ20 ಪಂದ್ಯ ಹಾಗೂ 2020ರ ಏಕದಿನ ಪಂದ್ಯಗಳೆರಡೂ ಒಂದೂ ಎಸೆತ ಕಾಣದೆ ಕೊಚ್ಚಿಹೋಗಿದ್ದು ಮರೆಯುವಂತಿಲ್ಲ. ಇಂದಿನ ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಟಿ20 ಪಂದ್ಯಕ್ಕೂ ಇದೇ ಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾದಲ್ಲಿ ಪಂದ್ಯ ನಡೆಯುವುದು ಅನುಮಾನ.

ಧರ್ಮ ಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣ ವೇಗದ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುವ ಸಾಧ್ಯತೆಯಿದೆ. ಇದಕ್ಕೆ ಹವಾಮಾನ ಕೂಡ ಕಾರಣವಾಗಬಹುದು ಎನ್ನಲಾಗಿದೆ. ಆದರೆ ದೊಡ್ಡ ಮೊತ್ತದ ಪಂದ್ಯ ನಡೆಯುವ ಸಾಧ್ಯತೆ ಕಡಿಮೆಯಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ 160 ರನ್‌ಗಳಿಸಿದರೆ ರಕ್ಷಣೆ ಮಾಡಿಕೊಳ್ಳುವ ಅವಕಾಶ ದೊರೆಯಬಹುದು. ಈ ಪಿಚ್​ನಲ್ಲಿ ಜಾಣ್ಮೆಯ ಆಟವಾಡಿದರೆ ಬ್ಯಾಟಿಂಗ್‌ಗೂ ಯೋಗ್ಯ.

ಈ ಕ್ರೀಡಾಂಗಣದ ಅಂಕಿಅಂಶಗಳನ್ನು ನೋಡುವುದಾದರೆ ಈವರೆಗೆ ಒಟ್ಟು 7 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ತಂಡ 4 ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ಮಾಡಿದ ತಂಡ ಎರಡು ಬಾರಿಷ್ಟೆ ಜಯ ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಮುಗಿದಿದೆ. ಇಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 140 ಆಗಿದ್ದರೆ, ಎರಡನೇ ಇನಿಂಗ್ಸ್‌ನ ಸರಾಸರಿ ಸ್ಕೋರ್ 124 ರನ್. ಈ ಕ್ರೀಡಾಂಗಣದಲ್ಲಿ ದಾಖಲಾದ ಗರಿಷ್ಠ ಮೊತ್ತ ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧ 3 ವಿಕೆಟ್ ನಷ್ಟಕ್ಕೆ 200 ರನ್ ಚಚ್ಚಿರುವುದು.

IND vs SL 2nd T20: ಈ ಪಂದ್ಯದಲ್ಲಾದರೂ ಇದೆಯೇ ಅವಕಾಶ?: ಎರಡನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI

Pro Kabaddi League: ರಣ ರೋಚಕ ಫೈನಲ್: ಚೊಚ್ಚಲ ಬಾರಿಗೆ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಗೆದ್ದ ದಬಾಂಗ್ ಡೆಲ್ಲಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ