AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಲಂಕಾ 3ನೇ ಟಿ20 ಪಂದ್ಯ; ಬೆಂಚ್ ಕಾದವರಿಗೆ ಸಿಗುತ್ತಾ ಅವಕಾಶ?

IND vs SL: ಮೂರನೇ ಟಿ20 ಪಂದ್ಯಕ್ಕೆ ಗಂಭೀರ್ ಯಾವ ತಂಡವನ್ನು ಕಣಕ್ಕಿಳಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಇಡೀ ಸರಣಿಯಲ್ಲಿ ಅವಕಾಶ ಸಿಗದ ಕೆಲವು ಆಟಗಾರರು ತಂಡದಲ್ಲಿದ್ದಾರೆ. ಹೀಗಾಗಿ ಈಗಾಗಲೇ ಸರಣಿ ಗೆದ್ದಿರುವುದರಿಂದ ಬೆಂಚ್ ಕಾದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ.

IND vs SL: ಭಾರತ- ಲಂಕಾ 3ನೇ ಟಿ20 ಪಂದ್ಯ; ಬೆಂಚ್ ಕಾದವರಿಗೆ ಸಿಗುತ್ತಾ ಅವಕಾಶ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jul 29, 2024 | 6:19 PM

Share

ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಮಂಗಳವಾರ (ಜುಲೈ 30) ನಡೆಯಲಿದೆ. ಈಗಾಗಲೇ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನೂ ಗೆದ್ದು ಆತಿಥೇಯರಿಗೆ ಕ್ಲೀನ್ ಸ್ವೀಪ್ ಶಾಕ್ ನೀಡುವ ಗುರಿ ಇಟ್ಟುಕೊಂಡಿದೆ. ಇತ್ತ ತವರಿನಲ್ಲಿ ಟಿ20 ಸರಣಿ ಸೋತಿರುವ ಶ್ರೀಲಂಕಾ ತಂಡ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು 2-1 ಅಂತರದಿಂದ ಕೊನೆಗೊಳಿಸಲು ಪ್ರಯತ್ನಿಸಲಿದೆ. ಇನ್ನು ಮೂರನೇ ಟಿ20 ಪಂದ್ಯಕ್ಕೆ ಗಂಭೀರ್ ಯಾವ ತಂಡವನ್ನು ಕಣಕ್ಕಿಳಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಇಡೀ ಸರಣಿಯಲ್ಲಿ ಅವಕಾಶ ಸಿಗದ ಕೆಲವು ಆಟಗಾರರು ತಂಡದಲ್ಲಿದ್ದಾರೆ. ಹೀಗಾಗಿ ಈಗಾಗಲೇ ಸರಣಿ ಗೆದ್ದಿರುವುದರಿಂದ ಬೆಂಚ್ ಕಾದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ.

ಸಂಜುಗೆ ಮತ್ತೊಂದು ಅವಕಾಶ?

ಟಾಪ್ ಆರ್ಡರ್ ವಿಚಾರಕ್ಕೆ ಬರುವುದಾದರೆ, ಅನಾರೋಗ್ಯಕ್ಕೀಡಾಗಿರುವ ಶುಭ್​ಮನ್ ಗಿಲ್, ಮೂರನೇ ಟಿ20 ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಗಳಿವೆ. ಹೀಗಾಗಿ 2ನೇ ಟಿ20 ಪಂದ್ಯದಲ್ಲಿ ಅವರ ಬದಲಿಯಾಗಿ ತಂಡ ಸೇರಿಕೊಂಡಿದ್ದ ಸಂಜು ಸ್ಯಾಮ್ಸನ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಗಳಿವೆ. ಆದರೆ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸೊನ್ನೆ ಸುತ್ತಿರುವುದರಿಂದ ಅವರ ಸ್ಥಾನಕ್ಕೆ ಅಪಾಯ ಎದುರಾಗಿದೆ. ಅದಾಗ್ಯೂ ಟೀಂ ಮ್ಯಾನೇಜ್ಮೆಂಟ್ ಈಗಾಗಲೇ ಸಂಜುಗೆ ಮತ್ತೊಂದು ಅವಕಾಶ ನೀಡುವುದಾಗಿ ಹೇಳಿದೆ. ಈ ಕಾರಣಕ್ಕಾಗಿ, ಅವರು ಮತ್ತೊಮ್ಮೆ ಟೀಮ್ ಇಂಡಿಯಾದ ಆಡುವ ಹನ್ನೊಂದರಲ್ಲಿ ಕಾಣಿಸಿಕೊಳ್ಳಬಹುದು.

ಖಲೀಲ್​ಗೆ ಅವಕಾಶ ಸಿಗಬಹುದು

ಇದುವರೆಗಿನ ಈ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ ಪ್ರದರ್ಶನ ವಿಶೇಷವೇನೂ ಆಗಿಲ್ಲ. ಎರಡು ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಮ್ಯಾನೇಜ್​ಮೆಂಟ್ ಸಿರಾಜ್​ಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಬಹುದು. ಅವರ ಜಾಗದಲ್ಲಿ ಮತ್ತೊಬ್ಬ ವೇಗಿ ಖಲೀಲ್ ಅಹ್ಮದ್‌ಗೆ ಅವಕಾಶ ನೀಡಬಹುದು.

ಸುಂದರ್​ಗೂ ಅವಕಾಶ?

ಇದುವರೆಗಿನ ಈ ಸರಣಿಯಲ್ಲಿ ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಗತ್ಯ ಸಮಯದಲ್ಲಿ ಟೀಂ ಇಂಡಿಯಾಗೆ ವಿಕೆಟ್ ತದ್ದುಕೊಟ್ಟಿದ್ದಾರೆ. ಆದಾಗ್ಯೂ ಸರಣಿ ಕೈವಶವಾಗಿರುವುದರಿಂದ ಬೆಂಚ್ ಕಾಯ್ದಿರುವ ಸುಂದರ್​ಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇದಕ್ಕೆ ಪೂರವಾಗಿ ಸುಂದರ್ ಅವರನ್ನು ಉತ್ತಮ ಆಲ್‌ರೌಂಡರ್ ಆಗಿ ರೂಪಿಸುವುದು ಆಡಳಿತ ಮಂಡಳಿಯ ಮಹತ್ವದ ಗುರಿಯಾಗಿರುವುದರಿಂದ ಸುಂದರ್​ಗೂ ಅವಕಾಶ ಸಿಗಬಹುದು.

ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ