AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ ಭಾರತ

India vs Sri Lanka 2nd Test Day 1 highlights: ಭಾರತ-ಶ್ರೀಲಂಕಾ 2ನೇ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿದೆ. ಕೊಲಂಬೊದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ 300/5 ರನ್ ಗಳಿಸಿದೆ. ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ ಅರ್ಧಶತಕ ಗಳಿಸಿದರು. ದಿನದ ಕೊನೆಯಲ್ಲಿ ಜಡೇಜಾ ವಿಕೆಟ್ ಪತನ ತಂಡಕ್ಕೆ ಸಣ್ಣ ಹಿನ್ನಡೆ ನೀಡಿದೆ.

IND vs SL: ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ ಭಾರತ
Ind Vs Sl
ಪೃಥ್ವಿಶಂಕರ
|

Updated on:Aug 23, 2026 | 6:46 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ಪ್ರಾಬಲ್ಯ ಮೆರೆಯಿತು. ಆದಾಗ್ಯೂ ತಂಡ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದೆ. ತಂಡದ ಪರ ಕನ್ನಡಿಗ ದೇವದತ್ ಪಡಿಕ್ಕಲ್ (Devdutt Padikkal) ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ (Shubman Gill) ಅರ್ಧಶತಕ ಬಾರಿಸಿದರು. ದಿನದಾಟದ ಕೊನೆಯ ಓವರ್​ನಲ್ಲಿ ರವೀಂದ್ರ ಜಡೇಜಾ ವಿಕೆಟ್ ಕೈಚೆಲ್ಲಿದ್ದು ತಂಡವನ್ನು ಕೊಂಚ ಹಿನ್ನಡೆಗೆ ತಳ್ಳಿದೆ. ಉಳಿದಂತೆ ಧ್ರುವ್ ಜುರೆಲ್ 7 ರನ್ ಮತ್ತು ಸರಾಂಶ್ ಜೈನ್ 4 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಗಿಲ್- ಪಡಿಕ್ಕಲ್ ಜೊತೆಯಾಟ

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. 37 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಕೆಎಲ್ ರಾಹುಲ್ 18 ರನ್‌ಗಳಿಗೆ ಔಟ್ ಆದರು. ನಂತರ ಯಶಸ್ವಿ ಜೈಸ್ವಾಲ್ 45 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ನಂತರ ಜೊತೆಯಾದ ನಾಯಕ ಶುಭ್​ಮನ್ ಗಿಲ್ ಮತ್ತು ದೇವದತ್ ಪಡಿಕ್ಕಲ್ ಶತಕದ ಜೊತೆಯಾಟವನ್ನು ನೀಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು.

ಶತಕ ಬಾರಿಸಿದ ಪಡಿಕ್ಕಲ್

ನಾಯಕ ಶುಭ್​ಮನ್ ಗಿಲ್ 108 ಎಸೆತಗಳಲ್ಲಿ ಆರು ಬೌಂಡರಿಗಳೊಂದಿಗೆ 50 ರನ್​ಗಳ ಇನ್ನಿಂಗ್ಸ್ ಆಡಿದರು. ಇದು ಶ್ರೀಲಂಕಾದಲ್ಲಿ ಗಿಲ್ ಅವರ ಮೊದಲ ಟೆಸ್ಟ್ ಅರ್ಧಶತಕವೂ ಆಗಿತ್ತು. ಆದರೆ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಗಿಲ್ ಔಟಾದರು. ಆ ನಂತರ ತಂಡದ ಇನ್ನಿಂಗ್ಸ್ ನಿಭಾಯಿಸಿದ ದೇವದತ್ ಪಡಿಕ್ಕಲ್ 193 ಎಸೆತಗಳಲ್ಲಿ 117 ರನ್ ಬಾರಿಸುವ ಮೂಲಕ ಈ ಸರಣಿಯಲ್ಲಿ ಸತತ ಎರಡನೇ ಶತಕ ಬಾರಿಸಿದರು.

43 ರನ್ ಬಾರಿಸಿ ಜಡೇಜಾ ಔಟ್

ಆದರೆ ರಿಷಭ್ ಪಂತ್ ಗಾಯಗೊಂಡು ನಿವೃತ್ತರಾಗಿರುವುದು ತಂಡಕ್ಕೆ ದೊಡ್ಡ ಹೊಡೆತವಾಗಿದೆ. ಪಂತ್ ಗಾಯದಿಂದಾಗಿ ಬ್ಯಾಟಿಂಗ್​ಗೆ ಬಂದ ರವೀಂದ್ರ ಜಡೇಜಾ 83 ಎಸೆತಗಳಲ್ಲಿ 43 ರನ್ ಗಳಿಸಿ ದಿನದಾಟದ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. ಧ್ರುವ್ ಜುರೆಲ್ 7 ರನ್ ಮತ್ತು ಸರಾಂಶ್ ಜೈನ್ 4 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

IND vs SL: ಪಡಿಕ್ಕಲ್​ಗೆ 2 ಜೀವದಾನ ನೀಡಿದ ಶ್ರೀಲಂಕಾಕ್ಕೆ ಬರೋಬ್ಬರಿ 117 ರನ್ ದಂಡ

ಮೂರು ವಿಕೆಟ್ ಪಡೆದ ಫೆರ್ನಾಂಡೊ

ಮತ್ತೊಂದೆಡೆ, ಶ್ರೀಲಂಕಾ ಪರ ಅಸಿತಾ ಫೆರ್ನಾಂಡೊ ಅದ್ಭುತ ಬೌಲಿಂಗ್ ಮಾಡಿ ಮೂರು ವಿಕೆಟ್ ಪಡೆದರೆ, ಲಹಿರು ಕುಮಾರ ಮತ್ತು ಕೇಶರ ನುವಂತ ತಲಾ ಒಂದು ವಿಕೆಟ್ ಪಡೆದರು. ಇತರ ಬೌಲರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಇದರ ಲಾಭ ಪಡೆದ ಭಾರತದ ಬ್ಯಾಟರ್​ಗಳು ತಂಡವನ್ನು 300 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Sun, 23 August 26

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ