AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ

India vs Sri Lanka Test: ಭಾರತ-ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಗೆ ಮುನ್ನ ಅಭ್ಯಾಸ ಪಂದ್ಯದ ವೇಳಾಪಟ್ಟಿ ಬದಲಾಗಿದೆ. ಮೊದಲು 4 ದಿನಗಳಿದ್ದ ಪಂದ್ಯವನ್ನು ಈಗ 3 ದಿನಕ್ಕೆ ಇಳಿಸಲಾಗಿದೆ (ಆಗಸ್ಟ್ 7-9, ಕೊಲಂಬೊ). ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡಕ್ಕೆ ಇದು ನಿರ್ಣಾಯಕ ತಯಾರಿ ಪಂದ್ಯವಾಗಿದ್ದು, ನೇರ ಪ್ರಸಾರ ಲಭ್ಯವಿದೆ. ಆಗಸ್ಟ್ 15 ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ತಂಡದ ಸಿದ್ಧತೆಗೆ ಇದು ಅತ್ಯಗತ್ಯ.

IND vs SL: ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ
Team India
ಪೃಥ್ವಿಶಂಕರ
|

Updated on:Aug 01, 2026 | 4:04 PM

Share

ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯಲಿದೆ. ಇದೀಗ ಈ ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಟೀಂ ಇಂಡಿಯಾ ಹಾಗೂ ಶ್ರೀಲಂಕಾ ಸ್ಥಳೀಯ 11 ನಡುವೆ 4 ದಿನಗಳ ಅಭ್ಯಾಸ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೀಗ ಈ ಅಭ್ಯಾಸ ಪಂದ್ಯದಲ್ಲಿ ಒಂದು ದಿನವನ್ನು ಖಡಿತಗೊಳಿಸಲಾಗಿದೆ. ಅಂದರೆ ಈ ಅಭ್ಯಾಸ ಪಂದ್ಯ 4 ದಿನಗಳ ಬದಲಿಗೆ ಮೂರು ದಿನ ನಡೆಯಲಿದೆ.

ಅದರಂತೆ ಇದೀಗ ಈ ಅಭ್ಯಾಸ ಪಂದ್ಯವು ಆಗಸ್ಟ್ 7 ರಿಂದ 9 ರವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿರುವ SSC ಕ್ರೀಡಾಂಗಣದ ಬಳಿ ಇರುವ ಕೊಲಂಬೊದ NCC ಮೈದಾನದಲ್ಲಿ ನಡೆಯಲಿದೆ. ಈ ಪ್ರವಾಸಕ್ಕಾಗಿ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಿದ್ದು, ಈ ಸರಣಿಗಾಗಿ ಟೀಂ ಇಂಡಿಯಾ ಆಗಸ್ಟ್ 4 ರಂದು ಕೊಲಂಬೊಗೆ ತೆರಳಲಿದೆ.

4 ದಿನಗಳ ಬದಲಿಗೆ 3 ದಿನ

ತಂಡದ ಆಯ್ಕೆಯ ಸಮಯದಲ್ಲಿ ಬಿಸಿಸಿಐ ನಾಲ್ಕು ದಿನಗಳ ಅಭ್ಯಾಸ ಪಂದ್ಯದ ಬಗ್ಗೆ ಮಾಹಿತಿ ನೀಡಿತ್ತು. ಆದರೀಗ ಈ ಅಭ್ಯಾಸ ಪಂದ್ಯದಲ್ಲಾಗಿರುವ ಬದಲಾವಣೆಯ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ ಒಂದು ದಿನವನ್ನು ಕಡಿಮೆ ಮಾಡಲು ನಿಖರವಾದ ಕಾರಣ ಬಹಿರಂಗವಾಗಿಲ್ಲವಾದರೂ, ಬಿಸಿಸಿಐ ಮತ್ತು ತಂಡದ ಆಡಳಿತ ಮಂಡಳಿಯ ಮೂಲಗಳು ಈ ಬದಲಾವಣೆಯನ್ನು ದೃಢಪಡಿಸಿವೆ. ಜೂನ್‌ನಿಂದ ಭಾರತ ಯಾವುದೇ ಟೆಸ್ಟ್ ಪಂದ್ಯವನ್ನು ಆಡಿಲ್ಲ, ಆದ್ದರಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ನ ಪ್ರಸ್ತುತ ಆವೃತ್ತಿಯ ಭಾಗವಾಗಿ ಆಡಲಾಗುತ್ತಿರುವ ಈ ಸರಣಿಗೆ ಮುಂಚಿತವಾಗಿ ತಯಾರಿಯ ವಿಷಯದಲ್ಲಿ ಶುಭ್​ಮನ್ ಗಿಲ್ ನೇತೃತ್ವದ ತಂಡಕ್ಕೆ ಈ ಪಂದ್ಯವು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಏನೆಂದರೆ ಈ ಅಭ್ಯಾಸ ಪಂದ್ಯವನ್ನು ನೇರ ಪ್ರಸಾರ ಮಾಡಲಾಗುತ್ತದೆ.

ಟೆಸ್ಟ್ ಸರಣಿಯ ವೇಳಾಪಟ್ಟಿ

  • 3 ದಿನಗಳ ಅಭ್ಯಾಸ ಪಂದ್ಯ: ಆಗಸ್ಟ್ 7 ರಿಂದ 9 (ಎನ್‌ಸಿಸಿ ಮೈದಾನ, ಕೊಲಂಬೊ)
  • ಮೊದಲ ಟೆಸ್ಟ್: ಆಗಸ್ಟ್ 15 ರಿಂದ ಆರಂಭ (ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣ)
  • ಎರಡನೇ ಟೆಸ್ಟ್: ಆಗಸ್ಟ್ 23 ರಿಂದ ಆರಂಭ (SSC ಕ್ರೀಡಾಂಗಣ, ಕೊಲಂಬೊ)

IND vs SL: ಲಂಕಾ ವಿರುದ್ಧ ಟೆಸ್ಟ್ ಸರಣಿ ಆಡ್ತಾರಾ ಬುಮ್ರಾ? ಫಿಟ್ನೆಸ್ ವರದಿಯಲ್ಲಿ ಏನಿದೆ?

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಸರನ್ಶ್ ಜೈನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Sat, 1 August 26

Follow Us
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ