AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs USA Playing XI: ಭಾರತ ಮೊದಲು ಬ್ಯಾಟಿಂಗ್; ಮೊದಲ ಪಂದ್ಯದಿಂದ ಸಂಜು, ಬುಮ್ರಾ ಔಟ್

ICC T20 World Cup India vs USA in Kannada Playing XI: 2026ರ ಟಿ20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ತನ್ನ ಮೊದಲ ಪಂದ್ಯವನ್ನು ಅಮೆರಿಕ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿದೆ. ಟಾಸ್ ಗೆದ್ದ ಯುಎಸ್‌ಎ ಬೌಲಿಂಗ್ ಆಯ್ಕೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದು, ಜ್ವರದಿಂದ ಬಳಲುತ್ತಿರುವ ಬುಮ್ರಾ ಆಡುತ್ತಿಲ್ಲ. ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಹನ್ನೊಂದರಲ್ಲಿ ಸ್ಥಾನ ಪಡೆದಿದ್ದಾರೆ.

IND vs USA Playing XI: ಭಾರತ ಮೊದಲು ಬ್ಯಾಟಿಂಗ್; ಮೊದಲ ಪಂದ್ಯದಿಂದ ಸಂಜು, ಬುಮ್ರಾ ಔಟ್
Ind Vs Usa Toss
ಪೃಥ್ವಿಶಂಕರ
|

Updated on:Feb 07, 2026 | 6:55 PM

Share

2026 ರ ಟಿ20 ವಿಶ್ವಕಪ್ (T20 World Cup 2026) ಪ್ರಾರಂಭವಾಗಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಯುನೈಟೆಡ್ ಸ್ಟೇಟ್ಸ್ (India vs USA) ವಿರುದ್ಧ ಆಡುತ್ತಿದೆ. ಈ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ನಾಯಕರಾಗಿದ್ದಾರೆ. ಮೂಲತಃ ಗುಜರಾತ್‌ನವರಾದ ಮೋನಾಂಕ್ ಪಟೇಲ್ ಯುಎಸ್ಎ ತಂಡದ ನಾಯಕರಾಗಿದ್ದಾರೆ. ಟೀಂ ಇಂಡಿಯಾ ಕಳೆದ ವಿಶ್ವಕಪ್‌ನಲ್ಲಿ ಯುಎಸ್ಎಯನ್ನು ಸೋಲಿಸಿತ್ತು. ಅಲ್ಲದೆ, ಯುಎಸ್ಎ ಉತ್ತಮ ಹೋರಾಟ ನೀಡಿತ್ತು. ಇದೀಗ ಎರಡನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಯಾರದ್ದು ಮೇಲುಗೈಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ ತಂಡದಲ್ಲಿ 3 ಬದಲಾವಣೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಮೆರಿಕ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಬಳಿಕ ಮಾತನಾಡಿದ ಅಮೆರಿಕದ ನಾಯಕ ಮೋನಾಂಕ್ ಪಟೇಲ್ ತಮ್ಮ ಪ್ಲೇಯಿಂಗ್ ಹನ್ನೊಂದರಲ್ಲಿ ಆರು ಬ್ಯಾಟ್ಸ್‌ಮನ್‌ಗಳು, ಇಬ್ಬರು ಆಲ್‌ರೌಂಡರ್‌ಗಳು ಮತ್ತು ಮೂವರು ಬೌಲರ್‌ಗಳು ಸೇರಿದ್ದಾರೆ ಎಂದರು. ಇತ್ತ ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್ ಹಾಗೂ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎಂದರು. ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಹರ್ಷಿತ್ ರಾಣಾ ಬದಲಿಗೆ ಬಂದಿರುವ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್​ 11 ನಲ್ಲಿ ಸ್ಥಾನ ಪಡೆದಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್.

ಯುಎಸ್​ಎ ತಂಡ: ಸೈತೇಜ ಮುಕ್ಕಮಲ್ಲ, ಆಂಡ್ರೀಸ್ ಗಾಸ್ (ವಿಕೆಟ್ ಕೀಪರ್), ಮೊನಾಂಕ್ ಪಟೇಲ್ (ನಾಯಕ), ಮಿಲಿಂದ್ ಕುಮಾರ್, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ಶುಭಂ ರಂಜನೆ, ಮೊಹಮ್ಮದ್ ಮೊಹ್ಸಿನ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್.

Published On - 6:52 pm, Sat, 7 February 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ