IND vs WI 1st ODI: ಹೊಸ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

| Updated By: ಝಾಹಿರ್ ಯೂಸುಫ್

Updated on: Jul 27, 2023 | 6:46 PM

IND vs WI 1st ODI: ಭಾರತ-ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯು ಇಂದಿನಿಂದ (ಜುಲೈ 27) ಶುರುವಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 3 ಏಕದಿನ ಪಂದ್ಯಗಳನ್ನಾಡಲಿದೆ.

IND vs WI 1st ODI: ಹೊಸ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India
Follow us on

India vs West Indies 1st ODI: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ-ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. 3 ಪಂದ್ಯಗಳ ಈ ಸರಣಿಯಿಂದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಡಲಾಗಿದೆ. ಪಾದದ ನೋವಿನ ಸಮಸ್ಯೆಗೆ ಒಳಗಾಗಿರುವ ಸಿರಾಜ್ ಅವರು ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ ಮೊದಲ ಏಕದಿನ ಪಂದ್ಯದಲ್ಲಿ ಸಿರಾಜ್ ಕಾಣಿಸಿಕೊಂಡಿಲ್ಲ.

ಇನ್ನು ಮೊಹಮ್ಮದ್ ಸಿರಾಜ್ ಅವರ ಅನುಪಸ್ಥಿತಿಯಲ್ಲಿ ಮುಖೇಶ್ ಕುಮಾರ್​ಗೆ ಅವಕಾಶ ಲಭಿಸಿದೆ. ಈ ಪಂದ್ಯದೊಂದಿಗೆ ಪಶ್ಚಿಮ ಬಂಗಳಾ ವೇಗಿ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದಂತಾಗಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಇಶಾನ್ ಕಿಶನ್ ಕಾಣಿಸಿಕೊಂಡಿದ್ದಾರೆ.

ಇನ್ನುಳಿದಂತೆ ತಂಡದಲ್ಲಿ ಪರಿಪೂರ್ಣ ವೇಗಿಗಳಾಗಿ ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

  1. ರೋಹಿತ್ ಶರ್ಮಾ
  2. ಶುಭ್​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ಇಶಾನ್ ಕಿಶನ್ (ವಿಕೆಟ್ ಕೀಪರ್)
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ಶಾರ್ದೂಲ್ ಠಾಕೂರ್
  9. ಕುಲ್ದೀಪ್ ಯಾದವ್
  10. ಉಮ್ರಾನ್ ಮಲಿಕ್
  11. ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11:

  1. ಶಾಯ್ ಹೋಪ್ (ನಾಯಕ)
  2. ಕೈಲ್ ಮೇಯರ್ಸ್
  3. ಬ್ರಾಂಡನ್ ಕಿಂಗ್
  4. ಅಲಿಕ್ ಅಥಾನಾಝ್
  5. ಶಿಮ್ರಾನ್ ಹೆಟ್ಮೆಯರ್
  6. ರೋವ್‌ಮನ್ ಪೊವೆಲ್
  7. ರೊಮಾರಿಯೊ ಶೆಫರ್ಡ್
  8. ಯಾನಿಕ್ ಕ್ಯಾರಿಯಾ
  9. ಡೊಮಿನಿಕ್ ಡ್ರೇಕ್ಸ್
  10. ಜೇಡನ್ ಸೀಲ್ಸ್
  11. ಗುಡಕೇಶ್ ಮೋಟಿ

ಭಾರತ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

  • ಜುಲೈ 27: ಭಾರತ vs ವೆಸ್ಟ್ ಇಂಡೀಸ್- ಮೊದಲ ಏಕದಿನ ಪಂದ್ಯ- ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  • ಜುಲೈ 29: ಭಾರತ vs ವೆಸ್ಟ್ ಇಂಡೀಸ್- ಎರಡನೇ ಏಕದಿನ ಪಂದ್ಯ – ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  • ಆಗಸ್ಟ್ 1: ಭಾರತ vs ವೆಸ್ಟ್ ಇಂಡೀಸ್- ಮೂರನೇ ಏಕದಿನ ಪಂದ್ಯ- ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್

 

Published On - 6:40 pm, Thu, 27 July 23