AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ- ವಿಂಡೀಸ್ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ? ಇಲ್ಲಿದೆ ಹವಾಮಾನ ವರದಿ

India vs West Indies 1st Test Weather Report: ಡೊಮಿನಿಕಾದಲ್ಲಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

IND vs WI: ಭಾರತ- ವಿಂಡೀಸ್ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ? ಇಲ್ಲಿದೆ ಹವಾಮಾನ ವರದಿ
ಭಾರತ- ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಹವಾಮಾನ ವರದಿ
ಪೃಥ್ವಿಶಂಕರ
|

Updated on:Jul 12, 2023 | 8:51 AM

Share

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಮೊದಲ ಟೆಸ್ಟ್ ಪಂದ್ಯ ಡೊಮಿನಿಕಾದಲ್ಲಿ (Dominca) ನಡೆಯಲಿದೆ. ಈ ಸರಣಿಯೊಂದಿಗೆ ಉಭಯ ತಂಡಗಳ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಭಿಯಾನ ಆರಂಭವಾಗಲಿದೆ. ಹಾಗೆಯೇ ಉಭಯ ತಂಡಗಳು ಸೋಲಿನೊಂದಿಗೆ ಈ ಸರಣಿಗೆ ಕಾಲಿಡುತ್ತಿರುವುದರಿಂದ ಎರಡೂ ತಂಡಗಳಿಗೂ ಈ ಸರಣಿಯ ಗೆಲುವು ಬಹಳ ಮುಖ್ಯವಾಗಿದೆ. ಟೀಂ ಇಂಡಿಯಾ (Team India) ಡಬ್ಲ್ಯುಟಿಸಿ ಫೈನಲ್​ನಲ್ಲಿ (WTC Final) ಆಸ್ಟ್ರೇಲಿಯಾ ಎದುರು ಸೋತ ನಿರಾಶೆಯಲ್ಲಿದ್ದರೆ, ಇತ್ತ ಆತಿಥೇಯ ವೆಸ್ಟ್ ಇಂಡೀಸ್ ಪ್ರತಿಷ್ಠಿತ ಏಕದಿನ ವಿಶ್ವಕಪ್​ಗೆ ಸ್ಥಾನ ಗಿಟ್ಟಿಸಿಕೊಳ್ಳದ ನೋವಿನಲ್ಲಿದೆ. ಹೀಗಾಗಿ ಉಭಯ ತಂಡಗಳು ಈ ಸರಣಿಯನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಲು ಯತ್ನಿಸಲಿವೆ. ಆದರೆ ಅದಕ್ಕೂ ಮುನ್ನ ಈ ಟೆಸ್ಟ್ ಸರಣಿಗೆ ವರುಣ ರಾಯನ (Weather Report) ಅವಕೃಪೆ ಎದುರಾಗಲಿದೆಯ ಎಂಬುದನ್ನು ನೋಡಬೇಕಿದೆ.

ಇಲ್ಲಿದೆ ಹವಾಮಾನ ವರದಿ

ಡೊಮಿನಿಕಾದಲ್ಲಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. weather.com ನೀಡಿರುವ ಹವಾಮಾನ ಮುನ್ಸೂಚನೆಯ ಪ್ರಕಾರ, ಮೊದಲ ದಿನದಲ್ಲಿ ಸುಮಾರು 24 ಶೇಕಡ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಎರಡನೇ, ಮೂರನೇ ಮತ್ತು ನಾಲ್ಕನೇ ದಿನಗಳಲ್ಲಿ ಅನುಕ್ರಮವಾಗಿ 17, 17, ಮತ್ತು 15 ಶೇಕಡ ಮಳೆಯಾಗುವ ಸಾಧ್ಯತೆಯಿದೆ. ಆದರೆ ಐದನೇ ದಿನ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಶೇಕಡ 42ರಷ್ಟು ತುಂತುರು ಮಳೆಯಾಗುವ ಸಾಧ್ಯತೆ ಇದೆ.

IND vs WI: ಮೊದಲು ತಂದೆ, ಈಗ ಮಗ; ಮೊದಲ ಟೆಸ್ಟ್​ನಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್ ಕೊಹ್ಲಿ..!

ತಂಡದಲ್ಲಿ ಯಾರಿಗೆಲ್ಲ ಅವಕಾಶ?

ಈ ಸರಣಿಗೆ ಟೀಂ ಇಂಡಿಯಾದಲ್ಲಿ ಹಲವು ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಯುವ ಆಟಗಾರರಾದ ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಮುಖೇಶ್ ಕುಮಾರ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇಂದು ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​ಗೆ ಅವಕಾಶ ಸಿಗುವುದು ಖಚಿತವಾಗಿದೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಇನ್ನು ಕಾಯಬೇಕಾಗಿದೆ.

ಬ್ಯಾಟಿಂಗ್ ಕ್ರಮಾಂಕ ಹೀಗಿದೆ

ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಚೇತೇಶ್ವರ ಪೂಜಾರ ಬದಲಿಗೆ ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಇನ್ನುಳಿದಂತೆ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.

ಮೊದಲ ಟೆಸ್ಟ್​ಗೆ ಉಭಯ ತಂಡಗಳು

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್.

ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲಿಕ್ ಅಥಾನಾಜೆ, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಝಾರಿ ಜೋಸೆಫ್, ರೇಮನ್ ರೈಫರ್, ಕೆಮರ್ ರೋಚ್, ತೇಜ್​ನಾರಾಯಣ್ ಚಂದ್ರಪಾಲ್, ಕಿರ್ಕ್ ಮೆಕ್​ಕೆಂಝಿ, ಜೊಮೆಲ್ ವಾರ್ರಿಕನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 am, Wed, 12 July 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ