IND vs WI: ಸಿರಾಜ್, ಬುಮ್ರಾ ಬೆಂಕಿ ಬೌಲಿಂಗ್: 265 ಎಸೆತಗಳಲ್ಲಿ ವಿಂಡೀಸ್ ಆಲೌಟ್

India vs West Indies, 1st Test: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಭರ್ಜರಿ ಬೌಲಿಂಗ್ ಪ್ರದರ್ಶನದೊಂದಿಗೆ ಕೇವಲ 265  ಎಸೆತಗಳಲ್ಲಿ ವಿಂಡೀಸ್ ಪಡೆಯನ್ನು ಆಲೌಟ್ ಮಾಡಿದೆ.

IND vs WI: ಸಿರಾಜ್, ಬುಮ್ರಾ ಬೆಂಕಿ ಬೌಲಿಂಗ್: 265 ಎಸೆತಗಳಲ್ಲಿ ವಿಂಡೀಸ್ ಆಲೌಟ್
Ind Vs Wi

Updated on: Oct 02, 2025 | 2:04 PM

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ವೆಸ್ಟ್ ಇಂಡೀಸ್ ತಂಡವು ಅಲ್ಪ ಮೊತ್ತಕ್ಕೆ ಕುಸಿದಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ‌.

ಆರಂಭಿಕ ಆಟಗಾರ ತೇಜ್​ನರೈನ್ ಚಂದ್ರಪಾಲ್ (0) ರನ್ನು ಶೂನ್ಯಕ್ಕೆ ಔಟ್ ಮಾಡಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಜಾನ್ ಕ್ಯಾಂಪ್​ಬೆಲ್ (8) ವಿಕೆಟ್ ಕಬಳಿಸುವಲ್ಲಿ ಬುಮ್ರಾ ಯಶಸ್ವಿಯಾದರು.

ಆ ಬಳಿಕ ಬಂದ ಬ್ರಾಂಡನ್ ಕಿಂಗ್ (13) ಹಾಗೂ ಅಲಿಕ್ ಅಥನಾಝ್​ಗೆ (12) ಮೊಹಮ್ಮದ್ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಶೈ ಹೋಪ್ (26) ವಿಕೆಟ್ ಪಡೆಯುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು.

ಈ ಹಂತದಲ್ಲಿ ಜಸ್ಟಿನ್ ಗ್ರೀವ್ಸ್ 32 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಇದಾಗ್ಯೂ ವೆಸ್ಟ್ ಇಂಡೀಸ್ ಪಡೆಯನ್ನು 44.1 ಓವರ್​​ಗಳಲ್ಲಿ 162 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಪರ 14 ಓವರ್‌ಗಳಲ್ಲಿ 40 ರನ್ ನೀಡಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದರೆ, ಜಸ್ ಪ್ರೀತ್ ಬುಮ್ರಾ 14 ಓವರ್‌ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಇನ್ನು ಕುಲ್ದೀಪ್ ಯಾದವ್ 2 ವಿಕೆಟ್ ಕಬಳಿಸಿದರು.

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಅಭಿಷೇಕ್ ಅಬ್ಬರಕ್ಕೆ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ರ‍್ಯಾಂಕಿಂಗ್ ಷೇಕ್ ಷೇಕ್ 

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ತೇಜ್ನರೈನ್ ಚಂದ್ರಪಾಲ್, ಜಾನ್​ ಕ್ಯಾಂಪ್​ಬೆಲ್, ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶೈ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ನಾಯಕ), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್, ಜೇಡನ್ ಸೀಲ್ಸ್.