India Playing XI: ಮೊದಲ ಏಕದಿನ ಪಂದ್ಯದಲ್ಲಿ ಯಾರಿಗೆಲ್ಲ ಅವಕಾಶ?: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

India’s Predicted Playing XI Against West Indies: ಮಯಾಂಕ್ ಅಗರ್ವಾಲ್, ಇಶಾನ್‌ ಕಿಶನ್‌ ಹಾಗೂ ಆಲ್‌ರೌಂಡರ್‌ ಶಾರುಖ್‌ ಖಾನ್‌ ಅವರನ್ನು ಏಕದಿನ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಹೀಗಿದ್ದರೂ ಮ್ಯಾನೇಜ್ಮೆಂಟ್​ಗೆ ಆಡುವ ಬಳಗದ್ದೇ ದೊಡ್ಡ ಚಿಂತೆಯಾಗಿದೆ.

India Playing XI: ಮೊದಲ ಏಕದಿನ ಪಂದ್ಯದಲ್ಲಿ ಯಾರಿಗೆಲ್ಲ ಅವಕಾಶ?: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ
IND vs WI Playing XI
Follow us
TV9 Web
| Updated By: Vinay Bhat

Updated on: Feb 06, 2022 | 9:41 AM

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಂದು ಭಾರತ ಹಾಗೂ ವೆಸ್ಟ್ ಇಂಡೀಸ್ (IND vs WI) ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಆಫ್ರಿಕಾ ಪ್ರವಾಸದಲ್ಲಿ ಅನುಭವಿಸಿದ ಹೀನಾಯ ಸೋಲಿನಿಂದ ಹೊರಬರಲು ಭಾರತಕ್ಕಿದು ಮಹತ್ವದ ಸರಣಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ (Team India) ಮುನ್ನಡಯುತ್ತಿದ್ದು, ರಾಹುಲ್ ದ್ರಾವಿಡ್ ಕೋಚಿಂಗ್ ಪ್ಲಾನ್ ಏನಿದೆ ಎಂಬುದು ನೋಡಬೇಕಿದೆ. ಪ್ರಮುಖ ಆಟಗಾರರಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ಋತುರಾಜ್ ಗಾಯಕ್ವಾಡ್ ಕೋವಿಡ್ ಬಂದ ಕಾರಣ ಪಂದ್ಯಕ್ಕೆ ಅಲಭ್ಯರಾಗಿರುವುದು ಹಿನ್ನಡೆಯಾಗುವುದು ಖಚಿತ. ಮಯಾಂಕ್ ಅಗರ್ವಾಲ್, ಇಶಾನ್‌ ಕಿಶನ್‌ ಹಾಗೂ ಆಲ್‌ರೌಂಡರ್‌ ಶಾರುಖ್‌ ಖಾನ್‌ ಅವರನ್ನು ಏಕದಿನ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಹೀಗಿದ್ದರೂ ಮ್ಯಾನೇಜ್ಮೆಂಟ್​ಗೆ ಆಡುವ ಬಳಗದ್ದೇ ದೊಡ್ಡ ಚಿಂತೆಯಾಗಿದೆ. ಮುಂದಿನ ವರ್ಷ ವಿಶ್ವಕಪ್ ಕೂಡ ಇರುವುದರಿಂದ ಈಗಲೇ ತಯಾರಿ ನಡೆಸಬೇಕಾದ ಒತ್ತಡದಲ್ಲಿ ಟೀಮ್ ಇಂಡಿಯಾವಿದೆ. ಹಾಗಾದ್ರೆ ಇಂದಿನ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI (India Playing XI) ಹೇಗಿರಬಹುದು ಎಂಬುದನ್ನು ನೋಡೋಣ.

ರೋಹಿತ್ ಶರ್ಮಾ ಜೊತೆ ಓಪನಿಂಗ್ ಯಾರು?:

ಶಿಖರ್ ಧವನ್ ಇಲ್ಲದ ಕಾರಣ ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಕೆಎಲ್ ರಾಹುಲ್ ಕೂಡ ಮೊದಲ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಇವರು ಸಹೋದರಿಯ ವಿವಾಹದ ಕಾರಣದಿಂದ ಹೊರಗುಳಿದಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ಲಭ್ಯರಿಲ್ಲ. ಇತ್ತ ಮಯಾಂಕ್ ಅಗರ್ವಾಲ್ ಕ್ವಾರಂಟೈನ್‌ನಲ್ಲಿದ್ದಾರೆ. ಹೀಗಾಗಿ ರೋಹಿತ್‌ ಶರ್ಮ ಅವರೊಂದಿಗೆ ಯುವ ಕ್ರಿಕೆಟಿಗ ಇಶಾನ್‌ ಕಿಶನ್‌ ಭಾರತದ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಈ ಬಗ್ಗೆ ಸ್ವತಃ ನಾಯಕನೇ ಖಚಿತ ಪಡಿಸಿದ್ದಾರೆ.

ದೀಪಕ್ ಹೂಡ ಪದಾರ್ಪಣೆ:

ದೀಪಕ್ ಹೂಡ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇಲ್ಲದ ಕಾರಣ ಇವರು ಸ್ಥಾನ ಪಡೆಯಬಹುದು. ಈ ಹಿಂದೆ ಇವರು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೂ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಯಾವರೀತಿ ಉಪಯೋಗಿಸಿಕೊಳ್ಳುತ್ತಾರೆ ಎಂಬುದು ನೋಡಬೇಕಿದೆ.

ಕುಲ್ದೀಪ್-ಚಹಾಲ್ ಕಮ್​ಬ್ಯಾಕ್?:

ಟೀಮ್ ಇಂಡಿಯಾದ ಎವರ್​ಗ್ರೀನ್ ಸ್ಪಿನ್ ಜೋಡಿ ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್ ಕಣಕ್ಕಿಳಿಯುತ್ತಾರ ಎಂಬುದು ಕುತೂಹಲ.

ರೋಹಿತ್ ನಾಯಕತ್ವದಡಿಯಲ್ಲಿ ಕೊಹ್ಲಿ:

ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಅವರು ರೋಹಿತ್ ಶರ್ಮಾ ನಾಯಕತ್ವದಡಿಯಲ್ಲಿ ಸಂಪೂರ್ಣ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬೌಲಿಂಗ್ ಹೇಗರಲಿದೆ?:

ಮೊಹಮ್ಮದ್ ಸಿರಾಜ್ ಪ್ರಮುಖ ಬೌಲರ್ ಆಗಿ ಕಣಕ್ಕಿಳಿಯಲಿದ್ದಾರೆ. ಇವರಿಗೆ ಪ್ರಸಿದ್ಧ್ ಕೃಷ್ಣ ಸಾಥ್ ನೀಡಲಿದ್ದಾರೆ. ಆದರೆ, ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ಪೈಕಿ ಯಾರಿಗೆ ಸ್ಥಾನ ಎಂಬುದು ಕುತೂಹಲ ಮೂಡಿಸಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡ, ಶಾರ್ದೂಲ್ ಠಾಕೂರ್/ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್/ ವಾಷಿಂಗ್ಟನ್ ಸುಂದರ್.

Ind vs WI: ಇಂದು ಭಾರತ- ವೆಸ್ಟ್ ಇಂಡೀಸ್ ಮೊದಲ ಏಕದಿನ: ರೋಹಿತ್-ಕೊಹ್ಲಿ ಮೇಲೆ ಎಲ್ಲರ ಕಣ್ಣು

India vs England U19 World Cup: ದಾಖಲೆಯ 5ನೇ ಬಾರಿ ಅಂಡರ್19 ವಿಶ್ವಕಪ್ ಪ್ರಶಸ್ತಿ ಗೆದ್ದ ಭಾರತ: ಇಂಗ್ಲೆಂಡ್ ವಿರುದ್ಧ ಗೆಲುವು

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?