AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs WI, 2nd ODI: ಕೆಎಲ್ ರಾಹುಲ್ ಕಂಬ್ಯಾಕ್: ಇಬ್ಬರಲ್ಲಿ ಒಬ್ಬರು ಔಟ್

Ind vs WI, 2nd ODI: ಎರಡನೇ ಪಂದ್ಯದಲ್ಲಿ ಇಶಾನ್ ಬದಲು ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಒಂದು ವೇಳೆ ರಾಹುಲ್ ಓಪನರ್​ ಆಗಿ ಆಡಿದ್ರೆ ಇಶಾನ್ ಕಿಶನ್ ಸ್ಥಾನ ಕಳೆದುಕೊಳ್ಳಬಹುದು.

Ind vs WI, 2nd ODI: ಕೆಎಲ್ ರಾಹುಲ್ ಕಂಬ್ಯಾಕ್: ಇಬ್ಬರಲ್ಲಿ ಒಬ್ಬರು ಔಟ್
KL Rahul
TV9 Web
| Updated By: ಝಾಹಿರ್ ಯೂಸುಫ್|

Updated on: Feb 08, 2022 | 10:02 PM

Share

ವೆಸ್ಟ್ ಇಂಡೀಸ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಸರಣಿಯ ಮೊದಲ ಪಂದ್ಯವನ್ನು ಭಾರತ (India vs West Indies) ತಂಡವು 6 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದಿತು. ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಬೌಲಿಂಗ್​ನಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಉತ್ತಮ ದಾಳಿ ಸಂಘಟಿಸಿದ್ದರು. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಆಡಿರಲಿಲ್ಲ. ಇದೀಗ ಕೆಎಲ್​ಆರ್​ ತಂಡವನ್ನು ಸೇರಿಕೊಂಡಿದ್ದಾರೆ. ಫೆಬ್ರವರಿ 9 ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಹೀಗಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ಪ್ಲೇಯಿಂಗ್​ 11 ನಲ್ಲಿ ಬದಲಾವಣೆ ಕಂಡು ಬರಲಿದೆ.

ಮೊದಲ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ನಾಯಕ ರೋಹಿತ್ ಶರ್ಮಾ ಆರಂಭಿಕರಾಗಿ ಆಡಿದ್ದರು . ಇಬ್ಬರೂ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಇಶಾನ್ ಬದಲು ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಒಂದು ವೇಳೆ ರಾಹುಲ್ ಓಪನರ್​ ಆಗಿ ಆಡಿದ್ರೆ ಇಶಾನ್ ಕಿಶನ್ ಸ್ಥಾನ ಕಳೆದುಕೊಳ್ಳಬಹುದು. ಒಂದು ವೇಳೆ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಿದ್ರೆ, ದೀಪಕ್ ಹೂಡಾ ಪ್ಲೇಯಿಂಗ್ 11 ನಿಂದ ಹೊರಬೀಳಬಹುದು.

ಇನ್ನು ಬೌಲಿಂಗ್ ವಿಭಾಗದಲ್ಲಿ ಯುಜ್ವೇಂದ್ರ ಚಹಾಲ್ ಮತ್ತು ವಾಷಿಂಗ್ಟನ್ ಸುಂದರ್ ಹೊರತುಪಡಿಸಿ, ವೇಗದ ಬೌಲರ್‌ಗಳು ಸಹ ಉತ್ತಮ ಪ್ರದರ್ಶನ ನೀಡಿದ್ದರು. ಪ್ರಸಿದ್ಧ್ ಕೃಷ್ಣ 2, ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದು ಮಿಂಚಿದರು. ಆದರೆ, ಶಾರ್ದೂಲ್ ಠಾಕೂರ್ ವಿಕೆಟ್ ಪಡೆಯಲು ವಿಫಲರಾಗಿದ್ದರು. ಹೀಗಾಗಿ ಟೀಮ್ ಮ್ಯಾನೇಜ್ ಮೆಂಟ್ ಎರಡನೇ ಪಂದ್ಯದಲ್ಲಿ ಅವಕಾಶ ನೀಡಬಹುದು. ಹೀಗಾಗಿ ಕೆಎಲ್ ರಾಹುಲ್ ಎಂಟ್ರಿಯಿಂದಾಗಿ ಇಶಾನ್ ಕಿಶನ್ ಅಥವಾ ದೀಪಕ್ ಹೂಡಾ, ಇಬ್ಬರಲ್ಲಿ ಒಬ್ಬರು ತಂಡದಿಂದ ಹೊರಬೀಳುವುದು ಖಚಿತ ಎಂದೇ ಹೇಳಬಹುದು.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(Ind vs WI, 2nd ODI: India’s Predicted Playing XI)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ