ಭಾರತ- ವಿಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯದ ನಂತರ, ಎರಡನೇ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ. ಸರಣಿ ವಶಪಡಿಸಿಕೊಳ್ಳಲು ಭಾರತ ತುದಿಗಾಲಲ್ಲಿದ್ದರೆ, ವಿಂಡೀಸ್ ತಿರುಗೇಟು ನೀಡಲು ಸಜ್ಜಾಗಿದೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲೈವ್ ವೀಕ್ಷಿಸಿ. ತಂಡಗಳ ವಿವರ ಇಲ್ಲಿದೆ.

ಭಾರತ- ವಿಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ Vs ವೆಸ್ಟ್ ಇಂಡೀಸ್
Image Credit source: PTI

Updated on: Sep 28, 2026 | 10:34 PM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ತಿರುವನಂತಪುರಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಸಾಂಘೀಕ ಪ್ರದರ್ಶನ ನೀಡಿ ವಿಂಡೀಸ್ ಪಡೆಯನ್ನು 8 ವಿಕೆಟ್​ಗಳಿಂದ ಮಣಿಸಿತು. ಇದೀಗ ಸರಣಿಯ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಪ್ರಯತ್ನಿಸಲಿದೆ. ಇತ್ತ ವಿಂಡೀಸ್ ಮೊದಲ ಪಂದ್ಯದಲ್ಲಾದ ತಪ್ಪುಗಳನ್ನು ತಿದ್ದಿಕೊಂಡು ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಹಾಗಿದ್ದರೆ, ಸರಣಿಯ ಎರಡನೇ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯುತ್ತದೆ ಎಂಬುದರ ಪೂರ್ಣ ವಿವರವನ್ನು ನೋಡುವ ಬನ್ನಿ.

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಸೆಪ್ಟೆಂಬರ್ 30 ರಂದು ನಡೆಯಲಿದೆ.

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ.

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ- ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಕಿಬ್ ನಬಿ, ಯಶಸ್ವಿ ಜೈಸ್ವಾಲ್ ಮತ್ತು ನಮನ್ ಧೀರ್.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ, ವಿಕೆಟ್ ಕೀಪರ್), ಜ್ಯುವೆಲ್ ಆಂಡ್ರ್ಯೂ, ಜಾನ್ ಕ್ಯಾಂಪ್‌ಬೆಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಂಗೂ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ವಿಟೆಲ್ ಲಾವ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ಶೆರ್ಫೇನ್ ರುದರ್‌ಫೋರ್ಡ್ ಮತ್ತು ಜೇಡನ್ ಸೀಲ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Mon, 28 September 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us