IND vs WI: ಭಾರತ- ವೆಸ್ಟ್ ಇಂಡೀಸ್ ಎರಡನೇ ಏಕದಿನ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ

India vs West Indies 2nd ODI: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಹಾಗಾದ್ರೆ ದ್ವಿತೀಯ ಏಕದಿನ (IND vs WI, 2nd ODI) ಯಾವಾಗ?, ಪಂದ್ಯ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

IND vs WI: ಭಾರತ- ವೆಸ್ಟ್ ಇಂಡೀಸ್ ಎರಡನೇ ಏಕದಿನ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ
IND vs WI 2nd ODI
Follow us
TV9 Web
| Updated By: Vinay Bhat

Updated on: Feb 08, 2022 | 8:37 AM

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಮೊದಲ ಏಕದಿನ ಪಂದ್ಯ ಮುಗಿದಿದ್ದು ಇದೀಗ ಉಭಯ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾದಲ್ಲಿ ಪ್ರಾಭಲ್ಯ ಸಾಧಿಸಿದ್ದ ಟೀಮ್ ಇಂಡಿಯಾ 6 ವಿಕೆಟ್​ಗಳ ಅಮೋಘ ಗೆಲುವು ಕಂಡಿತ್ತು. ಪರಿಪೂರ್ಣ ನಾಯಕನಾಗಿ ತಂಡವನ್ನು ಚೊಚ್ಚಲ ಬಾರಿಗೆ ಏಕದಿನದಲ್ಲಿ ಮುನ್ನಡೆಸಿದ ರೋಹಿತ್ ಶರ್ಮಾ (Rohit Sharma) ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಯುಜ್ವೇಂದ್ರ ಚಹಲ್ ಮತ್ತು ವಾಷಿಂಗ್ಟನ್ ಸುಂದರ್ ಬೌಲಿಂಗ್​ನಲ್ಲಿ ಸಂಚಲಸ ಸೃಷ್ಟಿಸಿದರು. ಪದಾರ್ಪಣೆ ಪಂದ್ಯವನ್ನು ಆಡಿದ ದೀಪಕ್ ಹೂಡ ಭರವಸೆ ಮೂಡಿಸಿದರು. ಹೀಗಾಗಿ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಹಾಗಾದ್ರೆ ದ್ವಿತೀಯ ಏಕದಿನ (IND vs WI 2nd ODI) ಯಾವಾಗ?, ಪಂದ್ಯ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಫೆಬ್ರವರಿ 9 ರಂದು ನಡೆಯಲಿದೆ.

ಮೊದಲ ಪಂದ್ಯ ನಡೆದ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ 2ನೇ ಏಕದಿನ ಕೂಡ ಜರುಗಲಿದೆ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ತಂಡಕ್ಕೆ ರಾಹುಲ್​ ಕಮ್​ಬ್ಯಾಕ್:

ವೈಯಕ್ತಿಕ ಕಾರಣಗಳಿಂದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್‌ ರಾಹುಲ್‌ ಸೋಮವಾರ ತಂಡವನ್ನು ಸೇರಿಕೊಂಡಿದ್ದಾರೆ.ಆದರೆ, ಅವರು 3 ದಿನಗಳ ಕ್ವಾರಂಟೈನ್‌ನಲ್ಲಿ ಇರುವುದರಿಂದ ದ್ವಿತೀಯ ಪಂದ್ಯದಲ್ಲೂ ಆಡುವುದು ಅನುಮಾನ. ಇತ್ತ ಮಾಯಾಂಕ್‌ ಅಗರ್ವಾಲ್‌ ಅವರ ಕ್ವಾರಂಟೈನ್‌ ಅವಧಿ ಕೂಡ ಮುಗಿದಿದೆ. ಹಾಗೆಯೇ ನವದೀಪ್‌ ಸೈನಿ ಕೋವಿಡ್‌ ಪಾಸಿಟಿವ್‌ನಿಂದ ಚೇತರಿಸಿಕೊಂಡಿದ್ದಾರೆ. ಇವರಿಬ್ಬರೂ ತಂಡವನ್ನು ಸೇರಿಕೊಂಡಿದ್ದಾರೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಏಕದಿನ ಸರಣಿ ಮುಗಿದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಿದೆ. ಇದು ಕ್ರಮವಾಗಿ ಫೆಬ್ರವರಿ 16, ಫೆ. 18 ಮತ್ತು ಫೆ. 20 ರಂದು ನಡೆಯಲಿದೆ.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್‌ ಪಂತ್(ವಿ.ಕೀ), ದೀಪಕ್‌ ಚಹರ್‌, ಶಾರ್ದುಲ್‌ ಠಾಕೂರ್‌, ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್‌, ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯ್‌, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಆವೇಶ್‌ ಖಾನ್‌, ಇಶಾನ್‌ ಕಿಶನ್‌, ಶಾರುಖ್‌ ಖಾನ್‌, ಮಯಾಂಕ್ ಅಗರ್ವಾಲ್.

ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್​​ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.

ಎಲ್​ಇಡಿ ಸ್ಟಂಪ್ಸ್​ಗಳನ್ನು ಮೊದಲ ಬಾರಿಗೆ ಬಳಸಿದ ದೇಶ ಯಾವುದು ಗೊತ್ತಾ? ಇವುಗಳ ಬೆಲೆ ಭಾರತದಲ್ಲಿ ಎಷ್ಟಿದೆ?

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ