AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ವಿಂಡೀಸ್ 2ನೇ ಟಿ20 ಪಂದ್ಯ; ತಂಡದಲ್ಲಿ 1 ಬದಲಾವಣೆ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ, ಸರಣಿ ಮುನ್ನಡೆಗೆ ಯತ್ನಿಸುತ್ತಿದೆ. ವೆಸ್ಟ್ ಇಂಡೀಸ್ ಸರಣಿ ಸಮಬಲಗೊಳಿಸಲು ಹೋರಾಡಲಿದೆ. ಇತ್ತಂಡಗಳ ಅಂತಿಮ ಪ್ಲೇಯಿಂಗ್ 11 ಘೋಷಣೆಯಾಗಿದೆ.

ಭಾರತ- ವಿಂಡೀಸ್ 2ನೇ ಟಿ20 ಪಂದ್ಯ; ತಂಡದಲ್ಲಿ 1 ಬದಲಾವಣೆ
ಭಾರತ Vs ವೆಸ್ಟ್ ಇಂಡೀಸ್Image Credit source: PTI
ಪೃಥ್ವಿಶಂಕರ
|

Updated on:Oct 09, 2026 | 6:47 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ರಾಂಚಿಯಲ್ಲಿ ಆರಂಭವಾಗಿದೆ. ಮೂರುವರೆ ವರ್ಷಗಳ ನಂತರ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಭಾರತದ ಮೊದಲ ಟಿ20 ಪಂದ್ಯ ಇದಾಗಿದೆ. ಕಳೆದ ಬಾರಿ ಈ ಮೈದಾನದಲ್ಲಿ ಟೀಂ ಇಂಡಿಯಾ ಸೋಲನ್ನು ಎದುರಿಸಿತು. ಆದ್ದರಿಂದ, ಈ ಬಾರಿ, ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡವು ಜಾಗರೂಕರಾಗಿ ಆಡಬೇಕಾಗಿದೆ. ಆದಾಗ್ಯೂ, ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದಿರುವ ಭಾರತ ತಂಡ ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ವೆಸ್ಟ್ ಇಂಡೀಸ್ ಸರಣಿ ಸಮಬಲಗೊಳಿಸಲು ಪ್ರಯತ್ನಿಸಲಿದೆ.

ಟಾಸ್ ಗೆದ್ದ ವೆಸ್ಟ್ ಇಂಡೀಸ್

ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ವೆಸ್ಟ್ ಇಂಡೀಸ್ ತನ್ನ ಪ್ಲೇಯಿಂಗ್ 11 ರಲ್ಲಿ ಒಂದು ಬದಲಾವಣೆ ಮಾಡಿದೆ. ಇತ್ತ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಬೆಂಚ್‌ ಕಾಯಬೇಕಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ನಮನ್ ಧೀರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮಯಾಂಕ್ ಯಾದವ್.

ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ಕಮಿಲ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಗುಡಾಕೇಶ್ ಮೋಟಿ, ಶಮರ್ ಸ್ಪ್ರಿಂಗರ್, ಅಕೇಲ್ ಹೋಸೇನ್, ಶಮರ್ ಜೋಸೆಫ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 9 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ