ಯುವ ಆಟಗಾರರಿಗೆ ಮತ್ತೊಂದು ಅವಕಾಶ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs West Indies 2nd T20: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗಿದ್ದರು. ಪರಿಣಾಮ 150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ 4 ರನ್​ಗಳಿಂದ ಸೋಲನುಭವಿಸಿತು.

ಯುವ ಆಟಗಾರರಿಗೆ ಮತ್ತೊಂದು ಅವಕಾಶ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us
| Updated By: ಝಾಹಿರ್ ಯೂಸುಫ್

Updated on:Aug 05, 2023 | 10:58 PM

India vs West Indies 2nd T20: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 2ನೇ ಟಿ20 ಪಂದ್ಯ ಭಾನುವಾರ (ಆಗಸ್ಟ್ 6) ನಡೆಯಲಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಟೀಮ್ ಇಂಡಿಯಾ (Team India) ಪರ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ಮೊದಲ ಪಂದ್ಯದಲ್ಲಿ ಮುಖೇಶ್ ಕುಮಾರ್ ಹಾಗೂ ತಿಲಕ್ ವರ್ಮಾ ಪಾದಾರ್ಪಣೆ ಮಾಡಿದ್ದರು. ಇದರಲ್ಲಿ ತಿಲಕ್ ವರ್ಮಾ ಅತ್ಯುತ್ತಮ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದರು. ಆದರೆ 3 ಓವರ್ ಬೌಲಿಂಗ್ ಮಾಡಿದ್ದ ಮುಖೇಶ್ ಕುಮಾರ್ 24 ರನ್ ನೀಡಿದರೂ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ.

ಇನ್ನು ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್ ಕಿಶನ್ (6) ಹಾಗೂ ಶುಭ್​ಮನ್ ಗಿಲ್ (3) ವಿಫಲರಾಗಿದ್ದರು. ಇತ್ತ ತಂಡದಲ್ಲಿ ಸ್ಪೋಟಕ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಬೆಂಚ್ ಕಾಯುತ್ತಿದ್ದಾರೆ. ಹೀಗಾಗಿ 2ನೇ ಪಂದ್ಯದಲ್ಲಿ ಜೈಸ್ವಾಲ್​ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಹಾಗೆಯೇ ವೇಗಿಗಳಾಗಿ ತಂಡದಲ್ಲಿ ಅವೇಶ್ ಖಾನ್ ಹಾಗೂ ಉಮ್ರಾನ್ ಮಲಿಕ್ ಇದ್ದು, ಇವರಿಬ್ಬರಲ್ಲಿ ಒಬ್ಬರನ್ನು ಹಾರ್ದಿಕ್ ಪಾಂಡ್ಯ ಕಣಕ್ಕಿಳಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ. ಇಲ್ಲಿ ಉಮ್ರಾನ್ ಮಲಿಕ್​ರನ್ನು ಕಣಕ್ಕಿಳಿಸಬೇಕಿದ್ದರೆ, ಮುಖೇಶ್ ಕುಮಾರ್​ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಬೇಕಾಗುತ್ತದೆ.

ಆದರೆ ಏಕೈಕ ಟಿ20 ಪಂದ್ಯವಾಡಿದ ಮುಖೇಶ್ ಕುಮಾರ್​ ಅವರನ್ನು ಮೊದಲ ಪಂದ್ಯದ ಬೆನ್ನಲ್ಲೇ ಹೊರಗಿಡುವ ಸಾಧ್ಯತೆಯಿಲ್ಲ. ಹೀಗಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ. ಏಕೆಂದರೆ ಐದು ಪಂದ್ಯಗಳ ಸರಣಿಯಲ್ಲಿ ಸಾಮಾನ್ಯವಾಗಿ 3ನೇ ಪಂದ್ಯದ ಬಳಿಕವಷ್ಟೇ ಪ್ಲೇಯಿಂಗ್ ಇಲೆವೆನ್​​ ಬದಲಿಸಲಾಗುತ್ತದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ಆಡುವ ಬಳಗವೇ 2ನೇ ಟಿ20 ಪಂದ್ಯದಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡ ಸಂಭವನೀಯ ಪ್ಲೇಯಿಂಗ್ 11 ಹೀಗಿರಲಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11:

  1. ಶುಭ್​ಮನ್ ಗಿಲ್
  2. ಇಶಾನ್ ಕಿಶನ್ (ವಿಕೆಟ್ ಕೀಪರ್)
  3. ಸೂರ್ಯಕುಮಾರ್ ಯಾದವ್
  4. ತಿಲಕ್ ವರ್ಮಾ
  5. ಹಾರ್ದಿಕ್ ಪಾಂಡ್ಯ (ನಾಯಕ) ,
  6. ಸಂಜು ಸ್ಯಾಮ್ಸನ್
  7. ಅಕ್ಷರ್ ಪಟೇಲ್
  8. ಕುಲ್ದೀಪ್ ಯಾದವ್
  9. ಯುಜ್ವೇಂದ್ರ ಚಾಹಲ್
  10. ಅರ್ಷದೀಪ್ ಸಿಂಗ್
  11. ಮುಖೇಶ್ ಕುಮಾರ್.

ಇದನ್ನೂ ಓದಿ: ಏಕದಿನ ವಿಶ್ವಕಪ್​ ಸೆಮಿಫೈನಲ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಗ್ಲೆನ್ ಮೆಕ್​ಗ್ರಾಥ್

ಕಂಬ್ಯಾಕ್ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗಿದ್ದರು. ಪರಿಣಾಮ 150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ 4 ರನ್​ಗಳಿಂದ ಸೋಲನುಭವಿಸಿತು. ಇದೀಗ ಭಾನುವಾರ ನಡೆಯಲಿರುವ 2ನೇ ಟಿ20 ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ ಟೀಮ್ ಇಂಡಿಯಾ.

ಭಾರತ ಟಿ20 ತಂಡ:

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

Published On - 10:57 pm, Sat, 5 August 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ