ಇಂಡೊ-ವಿಂಡೀಸ್ 2ನೇ ಟಿ20: ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Aug 05, 2023 | 8:49 PM

IND vs WI 2nd T20: ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಭಾರತಕ್ಕೆ ಸೋಲುಣಿಸಿತ್ತು. ಇದೀಗ ದ್ವಿತೀಯ ಪಂದ್ಯದ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ.

ಇಂಡೊ-ವಿಂಡೀಸ್ 2ನೇ ಟಿ20: ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ
India vs West Indies
Follow us on

India vs West Indies 2nd T20: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ನಾಳೆ (ಆಗಸ್ಟ್ 6) ನಡೆಯಲಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಟ್ರಿನಿಡಾಡ್​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು.

ಇದೀಗ ಎರಡನೇ ಪಂದ್ಯದಲ್ಲಿ ಗೆಲ್ಲುವ ವೆಸ್ಟ್ ಇಂಡೀಸ್ ವಿರುದ್ಧ ಸೇಡು ತವಕದಲ್ಲಿದೆ ಹಾರ್ದಿಕ್ ಪಾಂಡ್ಯ  ಪಡೆ. ಇನ್ನು ಈ ಮ್ಯಾಚ್​ ಕೂಡ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಟಾಸ್ ಪ್ರಕ್ರಿಯೆ ಎಷ್ಟು ಗಂಟೆ?

ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ನಡೆಯಲಿದೆ. ಹಾಗೆಯೇ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ.

ಪಂದ್ಯ ನಡೆಯುತ್ತಿರುವುದೆಲ್ಲಿ?

ಈ ಪಂದ್ಯಕ್ಕೆ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. 2019 ರಲ್ಲಿ ಟೀಮ್ ಇಂಡಿಯಾ ಆಡಿದ ಏಕೈಕ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಬಾರಿ ಕೂಡ ಗೆಲುವು ನಿರೀಕ್ಷಿಸಬಹುದು.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಭಾರತದಲ್ಲಿ ಡಿಡಿ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ವೀಕ್ಷಿಸಬಹುದು.

ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಫ್ಯಾನ್​ಕೋಡ್ ಆ್ಯಪ್​ನಲ್ಲಿ ಈ ಪಂದ್ಯದ ಲೈವ್ ಸ್ಟೀಮಿಂಗ್ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲಿ ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.