IND vs WI 2nd Test Day 1: 3 ಅರ್ಧಶತಕ, ಹೋರಾಟ ನೀಡಿದ ವಿಂಡೀಸ್; ದಿನದಾಟದಂತ್ಯಕ್ಕೆ ಭಾರತ 288/4

IND vs WI 2nd Test Day 1: ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐತಿಹಾಸಿಕ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡು ಬಂದಿದೆ.

IND vs WI 2nd Test Day 1: 3 ಅರ್ಧಶತಕ, ಹೋರಾಟ ನೀಡಿದ ವಿಂಡೀಸ್; ದಿನದಾಟದಂತ್ಯಕ್ಕೆ ಭಾರತ 288/4
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jul 21, 2023 | 5:42 AM

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಿನ ಐತಿಹಾಸಿಕ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡು ಬಂದಿದೆ. ದಿನದಾಟದಂತ್ಯಕ್ಕೆ ಟೀಂ ಇಂಡಿಯಾ (Team India) 4 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕರಾದ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal ) ತಲಾ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ವಿರಾಟ್ ಕೊಹ್ಲಿ (Virat Kohli) 87 ರನ್ ಬಾರಿಸಿದ್ದರೆ, ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) 36 ರನ್ ಕಲೆಹಾಕಿದ್ದಾರೆ. ಇನ್ನು ಡೊಮಿನಿಕಾ ಟೆಸ್ಟ್​ನಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಟೀಂ ಇಂಡಿಯಾದೆದುರು ಶರಣಾಗಿದ್ದ ವಿಂಡೀಸ್ ತಂಡ, ಪೋರ್ಟ್ ಆಫ್ ಸ್ಪೇನ್​ನಲ್ಲಿ ರೋಹಿತ್ ಬಳಗಕ್ಕೆ ಸವಾಲು ಮತ್ತು ಎಚ್ಚರಿಕೆ ಎರಡನ್ನೂ ನೀಡಿದೆ.

ರೋಹಿತ್-ಯಶಸ್ವಿ ಉತ್ತಮ ಆರಂಭ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್‌ಗೆ ಮತ್ತೊಮ್ಮೆ ಆರಂಭ ಉತ್ತಮವಾಗಿರಲಿಲ್ಲ. ಇದಕ್ಕೆ ಕಾರಣ ಆರಂಭಿಕ ಜೋಡಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್. ಮೊದಲ ಟೆಸ್ಟ್‌ನಲ್ಲಿ ಇಬ್ಬರೂ ಏಕಾಂಗಿಯಾಗಿ 221 ರನ್‌ಗಳ ಅದ್ಭುತ ಜೊತೆಯಾಟದೊಂದಿಗೆ ವೆಸ್ಟ್ ಇಂಡೀಸ್ ತಂಡವನ್ನು ಪಂದ್ಯದಿಂದ ಹೊರಗಟ್ಟಿದರು. ಈ ಬಾರಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದರೂ ಇಬ್ಬರ ವರ್ತನೆ ಬದಲಾಗಿಲ್ಲ. ಇಬ್ಬರೂ ಮೊದಲ ಸೆಷನ್‌ನಲ್ಲಿಯೇ ತಮ್ಮ ಅರ್ಧಶತಕಗಳನ್ನು ಪೂರ್ಣಗೊಳಿಸಿ, 121 ರನ್ ಜೊತೆಯಾಟ ಹಂಚಿಕೊಂಡರು.

SL vs PAK: ಬರೋಬ್ಬರಿ 1 ವರ್ಷದ ಬಳಿಕ ಟೆಸ್ಟ್ ಪಂದ್ಯ ಗೆದ್ದ ಪಾಕಿಸ್ತಾನ..!

ನಾಯಕ ರೋಹಿತ್ ಮೊದಲು ಅರ್ಧಶತಕ ಪೂರೈಸಿದರೆ, ಹಿಂದಿನ ಪಂದ್ಯಕ್ಕಿಂತ ಈ ಬಾರಿ ವೇಗವಾಗಿ ಆಡಿದ ಜೈಸ್ವಾಲ್, 49 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಆದರೆ ಊಟದ ವಿರಾಮದ ನಂತರ ಬ್ಯಾಟಿಂಗ್​ಗೆ ಇಳಿದ ಇಬ್ಬರೂ ಮೈದಾನದಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ.

ವಿಂಡೀಸ್ ಅದ್ಭುತ ಪುನರಾಗಮನ

ಎರಡನೇ ಸೆಷನ್ ಸಂಪೂರ್ಣವಾಗಿ ವಿಂಡೀಸ್ ಬೌಲರ್‌ಗಳ ಹೆಸರಿನಲ್ಲಿತ್ತು. ಜೇಸನ್ ಹೋಲ್ಡರ್​ಗೆ ಯಶಸ್ವಿ ಬಲಿಯಾದರೆ, ಶುಭ್​ಮನ್ ಗಿಲ್ ಮತ್ತೊಮ್ಮೆ ಮೂರನೇ ಕ್ರಮಾಂಕದಲ್ಲಿ ವಿಫಲರಾದರು. ಈ ಬಾರಿ ಅವರು ಕೆಮರ್ ರೋಚ್​ಗೆ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ತಮ್ಮ ಸತತ ಎರಡನೇ ಶತಕದಿಂದ ವಂಚಿತರಾಗಿ, ಸ್ಪಿನ್ನರ್ ಜೋಮೆಲ್ ವಾರಿಕನ್ ಅವರ ಅದ್ಭುತ ಎಸೆತದಲ್ಲಿ ಬೌಲ್ಡ್ ಆದರು. ಆ ಬಳಿಕ ಬಂದ ಅಜಿಂಕ್ಯ ರಹಾನೆ ಕೂಡ ಎರಡನೇ ಸೆಷನ್​ನ ಕೊನೆಯ ಓವರ್‌ನಲ್ಲಿ ಬೌಲ್ಡ್ ಆದರು. ಹೀಗಾಗಿ 2ನೇ ಸೆಷನ್​ನಲ್ಲಿ ಟೀಂ ಇಂಡಿಯಾ ಕೇವಲ 61 ರನ್ ಕಲೆಹಾಕಿ 4 ವಿಕೆಟ್‌ ಕಳೆದುಕೊಂಡಿತು.

ಕೊಹ್ಲಿ-ಜಡೇಜಾ ಜೊತೆಯಾಟ

ಕಳೆದ ಪಂದ್ಯದಲ್ಲಿ ಅತ್ಯಂತ ಸಂಕಷ್ಟದ ಬ್ಯಾಟಿಂಗ್ ನಡುವೆಯೂ ಶತಕ ವಂಚಿತರಾಗಿದ್ದ ಕೊಹ್ಲಿ, ಈ ಬಾರಿ ದೊಡ್ಡ ಇನ್ನಿಂಗ್ಸ್ ಆಡುವ ನಿರೀಕ್ಷೆಯಷ್ಟೇ ಅಲ್ಲ, ಅಗತ್ಯವೂ ಇತ್ತು. 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಕೊಹ್ಲಿ ಮೊದಲ ರನ್ ಗಳಿಸಲು ಸಾಕಷ್ಟು ಸಮಯ ತೆಗೆದುಕೊಂಡರು. ಕೊಹ್ಲಿ ತಮ್ಮ 21ನೇ ಎಸೆತದಲ್ಲಿ ಬೌಂಡರಿ ಬಾರಿಸಿ ಖಾತೆ ತೆರೆದರು. ಆ ನಂತರ ಕೊಹ್ಲಿ ಸಂಪೂರ್ಣವಾಗಿ ನೆಲೆಯೂರಿ ರವೀಂದ್ರ ಜಡೇಜಾ ಅವರೊಂದಿಗೆ ಉತ್ತಮ ಜೊತೆಯಾಟ ಹಂಚಿಕೊಂಡರು.

ಕೆಲವು ಸುಂದರವಾದ ಕವರ್ ಡ್ರೈವ್‌ಗಳನ್ನು ಆಡುವ ಮೂಲಕ ಕೊಹ್ಲಿ ಬೌಂಡರಿಗಳನ್ನು ಕಲೆಹಾಕಿದರು. ಕಳೆದ ಪಂದ್ಯದಲ್ಲಿ ಕೊಹ್ಲಿ 147 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರೆ, ಈ ಬಾರಿ ಅವರು 97 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇದು ಕೊಹ್ಲಿಯ 30 ನೇ ಅರ್ಧಶತಕವಾಗಿದ್ದು, ಇವರಿಬ್ಬರು ಮೂರನೇ ಸೆಷನ್‌ನಲ್ಲಿ ರನ್ ವೇಗ ಹೆಚ್ಚಿಸಿ ತಂಡವನ್ನು 288 ರನ್‌ಗಳಿಗೆ ಕೊಂಡೊಯ್ದರು. ಅಲ್ಲದೆ ಕೊಹ್ಲಿ (87) ಮತ್ತು ಜಡೇಜಾ (36) ನಡುವೆ ಶತಕದ ಜೊತೆಯಾಟವಿದ್ದು, ಇಬ್ಬರೂ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:39 am, Fri, 21 July 23

ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ