IND vs WI 2nd Test: ಟೀಮ್ ಇಂಡಿಯಾ ಪರ ಸತತವಾಗಿ ಅಭ್ಯಾಸ ನಡೆಸುತ್ತಿರುವ ಹೊಸ ಆಟಗಾರ: ಇಂದು ಆಡುವ ಸಾಧ್ಯತೆ

Mukesh Kumar: ಎರಡನೇ ಟೆಸ್ಟ್​ಗೆ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾದಲ್ಲಿ ನಿರತರಾಗಿದ್ದಾರೆ. ಮುಖ್ಯವಾಗಿ ಯುವ ವೇಗಿ ಮುಖೇಶ್ ಕುಮಾರ್ ನೆಟ್​ನಲ್ಲಿ ಸತತವಾಗಿ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. ಇವರು ಇಂದು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

IND vs WI 2nd Test: ಟೀಮ್ ಇಂಡಿಯಾ ಪರ ಸತತವಾಗಿ ಅಭ್ಯಾಸ ನಡೆಸುತ್ತಿರುವ ಹೊಸ ಆಟಗಾರ: ಇಂದು ಆಡುವ ಸಾಧ್ಯತೆ
Team India Practice
Follow us
Vinay Bhat
|

Updated on:Jul 20, 2023 | 11:22 AM

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಪೋರ್ಟ್‌ ಆಫ್‌ ಸ್ಪೇನ್‌ನಲ್ಲಿರುವ ಕ್ವೀನ್ಸ್‌ ಪಾರ್ಕ್‌ ಓವಲ್ ಕ್ರೀಡಾಂಗಣದಲ್ಲಿ ಇಂಡೋ-ವಿಂಡೀಸ್ ದ್ವಿತೀಯ ಟೆಸ್ಟ್ ಪಂದ್ಯ ಶುರುವಾಗಲಿದೆ. ಡೊಮಿನಿಕಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 141 ರನ್​ಗಳ ಇನ್ನಿಂಗ್ಸ್ ಜಯ ಸಾಧಿಸಿತ್ತು. ಹೀಗಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ವಿಶೇಷ ಎಂದರೆ ಇದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ 100ನೇ ಟೆಸ್ಟ್ ಪಂದ್ಯವಾಗಿದೆ. ಇದರಲ್ಲಿ ಮುಖೇಶ್ ಕುಮಾರ್ (Mukesh Kumar) ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

ಎರಡನೇ ಟೆಸ್ಟ್​ಗೆ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾದಲ್ಲಿ ನಿರತರಾಗಿದ್ದಾರೆ. ಮುಖ್ಯವಾಗಿ ಯುವ ವೇಗಿ ಮುಖೇಶ್ ಕುಮಾರ್ ನೆಟ್​ನಲ್ಲಿ ಸತತವಾಗಿ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. ಇವರು ಇಂದು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಜಯದೇವ್ ಉನಾದ್ಕಟ್ ಜಾಗದಲ್ಲಿ ಇವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಇಶಾನ್ ಕಿಶನ್ ಪದಾರ್ಪಣೆ ಮಾಡಿದ್ದರು. ಇವರಲ್ಲಿ ಜೈಸ್ವಾಲ್ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಅಬ್ಬರಿಸಿದ್ದರು.

ಇದನ್ನೂ ಓದಿ
Image
Asia Cup 2023 schedule: ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಲೋಪ; ಹೀಗಾದರೆ ಪಾಕಿಸ್ತಾನಕ್ಕೆ ಕಾಲಿಡಬೇಕಿದೆ ಟೀಂ ಇಂಡಿಯಾ..!
Image
Women FIFA World Cup 2023: 32 ತಂಡಗಳ ನಡುವೆ ಫುಟ್ಬಾಲ್ ಕದನ; ವಿಜೇತರಿಗೆ ₹86 ಕೋಟಿ ಬಹುಮಾನ..!
Image
IND vs WI: ಕಿಂಗ್ ಕೊಹ್ಲಿಯ 500ನೇ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಪೂರ್ಣ ಮಾಹಿತಿ
Image
IND vs WI 2nd Test Weather Report: ಭಾರತ-ವೆಸ್ಟ್ ಇಂಡೀಸ್ 100ನೇ ಟೆಸ್ಟ್​ಗೆ ಕ್ಷಣಗಣನೆ: ಆದರೆ, ಪಂದ್ಯ ಆರಂಭವಾಗುವುದು ಅನುಮಾನ

Asia Cup 2023: ಭಾರತ- ಪಾಕ್ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ

ಪಂದ್ಯ ಎಷ್ಟು ಗಂಟೆಗೆ ಆರಂಭ?:

ಇಂಡೋ- ವಿಂಡೀಸ್ ಎರಡನೇ ಟೆಸ್ಟ್ ಪಂದ್ಯ ಅಲ್ಲಿನ ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 9:30ಕ್ಕೆ ಶುರುವಾಗಲಿದೆ. ಹಾಗೆಯೆ ಇದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30 ರಿಂದ ಪ್ರಾರಂಭವಾಗಲಿದೆ. ದೂರದರ್ಶನ (ಡಿಡಿ) ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್​ಗಳಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.

ಮಳೆಯ ಕಾಟ ಇದೆಯೇ?:

ಪೋರ್ಟ್ ಆಫ್ ಸ್ಪೇನ್​ನಲ್ಲಿ ಬಿಸಿಲಿನ ಲಕ್ಷಣ ಕಾಣಿಸುತ್ತಿಲ್ಲ. ಟೆಸ್ಟ್ ಪಂದ್ಯದ ಎಲ್ಲಾ ಐದು ದಿನಗಳು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. weather.com ಪ್ರಕಾರ, ಪಂದ್ಯದ ಐದು ದಿನಗಳಲ್ಲಿ ಶೇ. 52 ರಷ್ಟು, ಶೇ. 49 ರಷ್ಟು, ಶೇ. 51 ರಷ್ಟು, ಶೇ. 47 ರಷ್ಟು, ಮತ್ತು ಶೇ. 41 ರಷ್ಟು ಮಳೆ ಬೀಳಲಿದೆ. ಪಂದ್ಯ ನಡೆಯುವ ಸಂಪೂರ್ಣ ಐದು ದಿನಗಳ ಅವಧಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.

ಪಿಚ್ ಹೇಗಿದೆ?:

ಪಿಚ್ ಬಗ್ಗೆ ನೋಡುವುದಾದರೆ, ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಮೊದಲ ಎರಡು ಇನ್ನಿಂಗ್ಸ್‌ಗಳಲ್ಲಿ ಬ್ಯಾಟರ್‌ಗಳು ಯಶಸ್ಸು ಸಾಧಿಸಲಿದ್ದಾರೆ. ಆದರೆ, ಪಂದ್ಯವು ಮುಂದುವರೆದಂತೆ ಪಿಚ್ ನಿಧಾನವಾಗುತ್ತದೆ. ವೇಗಿಗಳು ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡುವುದನ್ನು ಆನಂದಿಸಬಹುದು. ಈ ಪಿಚ್​ನಲ್ಲಿ ಅಂತಿಮ ಎರಡು ದಿನಗಳಲ್ಲಿ ಸ್ಪಿನ್ನರ್‌ಗಳು ಪರಿಣಾಮಕಾರಿ ಆಗಲಿದ್ದಾರೆ. ಇಲ್ಲಿ ಆಡಿದ 61 ಟೆಸ್ಟ್‌ಗಳಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ತಂಡವು 20 ಪಂದ್ಯಗಳನ್ನು ಗೆದ್ದಿದೆ, ಚೇಸಿಂಗ್ ತಂಡವು 18 ರಲ್ಲಿ ವಿಜಯಶಾಲಿಯಾಗಿದೆ. ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 300 ಕ್ಕಿಂತ ಅಧಿಕವಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Thu, 20 July 23

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ