ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs West Indies), ಎರಡನೇ ಏಕದಿನ ಪಂದ್ಯದಲ್ಲಿ ಸೋಲು ಕಂಡಿದೆ . ಟೀಂ ಇಂಡಿಯಾ (Team India) ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿದ ವೆಸ್ಟ್ ಇಂಡೀಸ್ ತಂಡ ಏಕದಿನ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಹೀಗಾಗಿ ಸರಣಿ ನಿರ್ಧಾರಕ ಪಂದ್ಯವಾದ 3ನೇ ಏಕದಿನ ಪಂದ್ಯದತ್ತ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ ಮೂರನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ. ವಾಸ್ತವವಾಗಿ ಬಾರ್ಬಡೋಸ್‌ನಲ್ಲಿ (Barbados) ನಡೆದ 2 ನೇ ಏಕದಿನ ಪಂದ್ಯದಲ್ಲೂ ಮಳೆಯ ಹಸ್ತಕ್ಷೇಪವಿತ್ತು. ಹೀಗಾಗಿ ಎರಡು ಬಾರಿ ಪಂದ್ಯವನ್ನು ಸ್ಥಗಿತಗೊಳಿಸಬೇಕಾಯಿತು. ಇದೀಗ ಮಂಗಳವಾರ ಟ್ರಿನಿಡಾಡ್‌ನಲ್ಲಿ (Tarouba Trinidad) ನಡೆಯಲ್ಲಿರುವ ಮೂರನೇ ಏಕದಿನ ಪಂದ್ಯದಲ್ಲೂ ಅದೇ ರೀತಿಯ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ.
ಆಗಸ್ಟ್ 01 ರಂದು, ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಟ್ರಿನಿಡಾಡ್‌ನ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸರಣಿಯನ್ನು ತನ್ನದಾಗಿಸಿಕೊಳ್ಳಬೇಕೆಂದರೆ ಉಭಯ ತಂಡಗಳಿಗೂ ಈ ಗೆಲುವು ಅವಶ್ಯಕವಾಗಿದೆ. ವಿಶ್ವಕಪ್ಗೂ ಮುನ್ನ ಈ ಸರಣಿಯನ್ನು ಸಿದ್ಧತೆಯಾಗಿ ಪರಿಗಣಿಸಿರುವ ಟೀಂ ಇಂಡಿಯಾಕ್ಕೆ ಈ ಸರಣಿ ಗೆಲುವು ಬಹಳ ಮಹತ್ವದ್ದಾಗಿದೆ. ಇತ್ತ ಏಕದಿನ ವಿಶ್ವಕಪ್ನಿಂದ ಹೊರಬಿದ್ದಿರುವ ವಿಂಡೀಸ್ ತಂಡಕ್ಕೆ ತವರಿನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ನಿರಾಳತೆ ಸಿಗಲಿದೆ.
IND vs WI: ಸೂರ್ಯ, ಸಂಜುಗೆ ಮತ್ತೊಂದು ಅವಕಾಶ? ಸರಣಿ ನಿರ್ಧಾರಕ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಇಲ್ಲಿದೆ
ಆದರೆ ಈ ಮಹತ್ವದ ಪಂದ್ಯಕ್ಕೂ ಮುನ್ನ ಟ್ರಿನಿಡಾಡ್‌ನ ಹವಾಮಾನ ವರದಿ ಹೊರಬಿದ್ದಿದ್ದು, ಪಂದ್ಯದ ದಿನ ಅಂದರೆ ಆಗಸ್ಟ್ 1 ರ ಮಂಗಳವಾರದಂದು ದಿನವಿಡಿ ಮೋಡ ಕವಿದ ವಾತಾವರಣ ಇರಲಿದೆ. ಹಾಗೆಯೇ 34ºC ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಲಾಗಿದೆ. ರಾತ್ರಿ ವೇಳೆಗೆ 25ºC ನ ಕಡಿಮೆ ತಾಪಮಾನದೊಂದಿಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಆದಾಗ್ಯೂ, ಸಂಜೆ ಸಮಯದಲ್ಲಿ 24 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದರೂ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಹೆಚ್ಚಿದೆ ಎಂದು ವರದಿಯಾಗಿದೆ.
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಜಯದೇವ್ ಉನದ್ಕಟ್, ಮುಖೇಶ್ ಕುಮಾರ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್
ವೆಸ್ಟ್ ಇಂಡೀಸ್: ಶಾಯ್ ಹೋಪ್ (ನಾಯಕ), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಶಿಮ್ರಾನ್ ಹೆಟ್ಮೆಯರ್, ಅಲಿಕ್ ಅಥಾನಾಜೆ, ರೋವ್‌ಮನ್ ಪೊವೆಲ್, ಕೀಸಿ ಕಾರ್ಟಿ, ರೊಮಾರಿಯೊ ಶೆಫರ್ಡ್, ಗುಡಕೇಶ್ ಮೋಥಿ, ಅಲ್ಜಾರಿ ಜೋಸೆಫ್, ಒಶಾನೆ ಥಾಮಸ್, ಜೇಡನ್ ಸೀಲ್ಸ್, ಕೆವಿನ್ ಸಿಂಕ್ಲೇರ್, ಡೊಮಿನಿಕ್ ಡ್ರೇಕ್ಸ್, ಯಾನಿಕ್ ಕ್ಯಾರಿಯಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:24 pm, Mon, 31 July 23