IND vs WI: ಸೂರ್ಯ, ಸಂಜುಗೆ ಮತ್ತೊಂದು ಅವಕಾಶ? ಸರಣಿ ನಿರ್ಧಾರಕ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಇಲ್ಲಿದೆ
IND vs WI: ಮಂಗಳವಾರ ನಡೆಯಲ್ಲಿರುವ ಸರಣಿ ನಿರ್ಧಾರಕ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನ್ಯಾವ ಹೊಸ ಪ್ರಯೋಗಕ್ಕೆ ಕೈಹಾಕಲಿದೆ ಎಂಬುದು ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದಕ್ಕೆ ಉತ್ತರ ಇಲ್ಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯೊಂದಿಗೆ 2023 ರ ವಿಶ್ವಕಪ್‌ಗೆ ತಯಾರಿ ಆರಂಭಿಸಿರುವ ಟೀಂ ಇಂಡಿಯಾಕ್ಕೆ (India vs West Indies) ನಿರೀಕ್ಷಿತ ಫಲಿತಾಂಶಗಳು ಸಿಗುತ್ತಿಲ್ಲ. ತಂಡವನ್ನು ಬಲಿಷ್ಠಗೊಳಿಸಲು ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಕೋಚ್ ರಾಹುಲ್ ದ್ರಾವಿಡ್ (Rahul Dravid) ಹೊಸ ಪ್ರಯೋಗಗಳನ್ನು ಮಾಡುತ್ತಿದ್ದರಾದರೂ ಅದರಲ್ಲಿ ಯಶ ಸಿಗುತ್ತಿಲ್ಲ. ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ಗಳ ಕ್ರಮಾಂಕವನ್ನೇ ಬದಲಿಸಿದ ಭಾರತ ತಂಡ ಅಂತಿಮವಾಗಿ ಪಂದ್ಯವನ್ನು ಗೆದ್ದುಬೀಗಿತ್ತು. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಅನುಭವಿ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿದ ಪ್ರಯೋಗ ವಿಫಲವಾಗಿ, ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ಮಂಗಳವಾರ ನಡೆಯಲ್ಲಿರುವ ಸರಣಿ ನಿರ್ಧಾರಕ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಇನ್ನ್ಯಾವ ಹೊಸ ಪ್ರಯೋಗಕ್ಕೆ ಕೈಹಾಕಲಿದೆ ಎಂಬುದು ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.
ಎರಡನೇ ಏಕದಿನ ಪಂದ್ಯವನ್ನು ಗೆದ್ದಿರುವ ವೆಸ್ಟ್ ಇಂಡೀಸ್ ಪಡೆ ಸರಣಿಯನ್ನು 1-1 ರಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಮೂರನೇ ಏಕದಿನ ಪಂದ್ಯವನ್ನು ವಿಂಡೀಸ್ ಗೆದ್ದರೆ, ಅದು ದಾಖಲೆಯಾಗಲಿದೆ. ಏಕೆಂದರೆ ಕಳೆದ 17 ವರ್ಷಗಳಿಂದ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಒಂದೇ ಒಂದು ಏಕದಿನ ಸರಣಿಯನ್ನು ಸೋತಿಲ್ಲ. ಇದೀಗ ಮೂರನೇ ಪಂದ್ಯದಲ್ಲಿ ಭಾರತ ಸೋತರೆ, ಏಕದಿನ ಸರಣಿ ವಿಂಡೀಸ್ ಪಾಲಾಗಲಿದೆ. ಇದರೊಂದಿಗೆ ಭಾರತದ 17 ವರ್ಷಗಳ ಅಜೇಯ ಓಟಕ್ಕೆ ತೆರೆ ಬೀಳಲಿದೆ. ಹೀಗಾಗಿ ನಿರ್ಣಾಯಕ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಟೀಂ ಇಂಡಿಯಾ ಹೆಚ್ಚಿನ ಪ್ರಯೋಗಗಳಿಗೆ ಹೋಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ
ಕೊಹ್ಲಿ- ರೋಹಿತ್ ರಿಟರ್ನ್
2ನೇ ಏಕದಿನ ಪಂದ್ಯಕ್ಕೆ ಭಾರತ ತನ್ನ ಇಬ್ಬರು ಅನುಭವಿ ಬ್ಯಾಟರ್‌ಗಳಿಗೆ ವಿಶ್ರಾಂತಿ ನೀಡಿತ್ತು. ಆದರೆ ಆಟವು ಯೋಜಿಸಿದಂತೆ ಸಾಗಲಿಲ್ಲ. ಆರಂಭಿಕರಿಬ್ಬರು ಮುರಿಯದ ವಿಕೆಟ್ಗೆ 90 ರನ್ ಜೊತೆಯಾಟ ನಡೆಸಿದ್ದನ್ನು ಬಿಟ್ಟರೆ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಹೀಗಾಗಿ ತಂಡ ಉಳಿದ 91 ರನ್ ಕಲೆಹಾಕುವಷ್ಟರಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡಿತ್ತು. ಹೀಗಾಗಿ ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್- ಕೊಹ್ಲಿ ಮರಳುವುದು ಖಚಿತವಾಗಿದೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲೂ ಬದಲಾವಣೆಯಾಗುವ ಸಾಧ್ಯತೆಗಳಿವೆ.
ಸಂಜುಗೆ ಕೋಕ್?
ರೋಹಿತ್ ಮತ್ತು ವಿರಾಟ್ ಮರಳಿದರೆ ಸೂರ್ಯಕುಮಾರ್ ಯಾದವ್ ಅಥವಾ ಸಂಜು ಸ್ಯಾಮ್ಸನ್ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಸೂರ್ಯಕುಮಾರ್ ಯಾದವ್ಗೆ ಗೇಮ್ ಫಿನಿಶರ್ ಪಾತ್ರವನ್ನು ನೀಡಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಸ್ಯಾಮ್ಸನ್ ಮತ್ತೆ ಬೆಂಚ್ನತ್ತ ಮುಖ ಮಾಡಬೇಕಿದೆ.
ಮೂರನೇ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್/ಮುಕೇಶ್ ಕುಮಾರ್, ಉಮ್ರಾನ್ ಮಲಿಕ್.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಮುಖೇಶ್ ಕುಮಾರ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:09 am, Mon, 31 July 23