Virat Kohli: ಮೂರನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಡೌಟ್..!
IND vs WI 3rd ODI: ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಜಯ ಸಾಧಿಸಿತ್ತು.
India vs West Indies 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಏಕದಿನ ಪಂದ್ಯ ನಾಳೆ (ಆಗಸ್ಟ್ 1) ನಡೆಯಲಿದೆ. ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ. 2ನೇ ಏಕದಿನ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಕೊಹ್ಲಿ 3ನೇ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.
ಪೋರ್ಟ್ ಆಫ್ ಸ್ಪೇನ್ನಿಂದ ಈಗಾಗಲೇ ಟೀಮ್ ಇಂಡಿಯಾ ಟ್ರಿನಿಡಾಡ್ಗೆ ಬಂದಿಳಿದಿದೆ. ಆದರೆ ವಿರಾಟ್ ಕೊಹ್ಲಿ ಭಾರತ ತಂಡದೊಂದಿಗೆ ಪ್ರಯಾಣಿಸಿಲ್ಲ. ಇದೇ ಕಾರಣದಿಂದಾಗಿ ಮೂರನೇ ಏಕದಿನ ಪಂದ್ಯದಿಂದಲೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಡೌಟ್ ಎನ್ನಲಾಗಿದೆ.
ಸೋಮವಾರ ಸಂಜೆ ಟ್ರಿನಿಡಾಡ್ಗೆ ಆಗಮಿಸಿದ ಭಾರತೀಯ ಆಟಗಾರರು ಮಂಗಳವಾರದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ ಆಗಮಿಸಿದಿರುವ ಕಾರಣ ಸರಣಿಯ ನಿರ್ಣಾಯ ಪಂದ್ಯಕ್ಕೆ ಅವರ ಲಭ್ಯತೆಯ ಬಗ್ಗೆ ಊಹಾಪೋಹಗಳು ಹುಟ್ಟಿಕೊಂಡಿವೆ.
Virat Kohli did not travel with the Indian team to Port of Spain on Monday evening, raising speculations about his availability for Tuesday’s ODI series decider.#WIvsIND pic.twitter.com/HujFF51VJH
— RevSportz (@RevSportz) July 31, 2023
ಸರಣಿ ನಿರ್ಣಾಯಕ ಪಂದ್ಯ:
ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳಿಂದ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಆದರೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 6 ವಿಕೆಟ್ಗಳ ಗೆಲುವು ದಾಖಲಿಸಿ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.
ಇದರೊಂದಿಗೆ ಮಂಗಳವಾರ ನಡೆಯಲಿರುವ ಕಡೆಯ ಏಕದಿನ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.
ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.
ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.