Virat Kohli: ಮೂರನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಡೌಟ್..!

| Updated By: ಝಾಹಿರ್ ಯೂಸುಫ್

Updated on: Jul 31, 2023 | 10:29 PM

IND vs WI 3rd ODI: ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಜಯ ಸಾಧಿಸಿತ್ತು.

Virat Kohli: ಮೂರನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಡೌಟ್..!
Virat Kohli
Follow us on

India vs West Indies 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಏಕದಿನ ಪಂದ್ಯ ನಾಳೆ (ಆಗಸ್ಟ್ 1) ನಡೆಯಲಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ. 2ನೇ ಏಕದಿನ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಕೊಹ್ಲಿ 3ನೇ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

ಪೋರ್ಟ್​ ಆಫ್ ಸ್ಪೇನ್​ನಿಂದ ಈಗಾಗಲೇ ಟೀಮ್ ಇಂಡಿಯಾ ಟ್ರಿನಿಡಾಡ್​ಗೆ ಬಂದಿಳಿದಿದೆ. ಆದರೆ ವಿರಾಟ್ ಕೊಹ್ಲಿ ಭಾರತ ತಂಡದೊಂದಿಗೆ ಪ್ರಯಾಣಿಸಿಲ್ಲ. ಇದೇ ಕಾರಣದಿಂದಾಗಿ ಮೂರನೇ ಏಕದಿನ ಪಂದ್ಯದಿಂದಲೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಡೌಟ್ ಎನ್ನಲಾಗಿದೆ.

ಸೋಮವಾರ ಸಂಜೆ ಟ್ರಿನಿಡಾಡ್​ಗೆ ಆಗಮಿಸಿದ ಭಾರತೀಯ ಆಟಗಾರರು ಮಂಗಳವಾರದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ ಆಗಮಿಸಿದಿರುವ ಕಾರಣ ಸರಣಿಯ ನಿರ್ಣಾಯ ಪಂದ್ಯಕ್ಕೆ ಅವರ ಲಭ್ಯತೆಯ ಬಗ್ಗೆ ಊಹಾಪೋಹಗಳು ಹುಟ್ಟಿಕೊಂಡಿವೆ.

ಸರಣಿ ನಿರ್ಣಾಯಕ ಪಂದ್ಯ:

ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಆದರೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 6 ವಿಕೆಟ್​ಗಳ ಗೆಲುವು ದಾಖಲಿಸಿ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.

ಇದರೊಂದಿಗೆ ಮಂಗಳವಾರ ನಡೆಯಲಿರುವ ಕಡೆಯ ಏಕದಿನ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.