IND vs WI: ಭಾರತ vs ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ

India vs West Indies 3rd ODI: ಭಾರತ ಉಳಿದಿರುವ ಒಂದು ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಸಾಧನೆಯನ್ನು ಎದುರು ನೋಡುತ್ತಿದ್ದರೆ, ಇತ್ತ ವೆಸ್ಟ್ ಇಂಡೀಸ್ ಅಂತಿಮ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​​ನಲ್ಲಿದೆ. ಹಾಗಾದ್ರೆ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭ? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

IND vs WI: ಭಾರತ vs ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ
Ind vs WI
Follow us
TV9 Web
| Updated By: Vinay Bhat

Updated on: Feb 10, 2022 | 11:19 AM

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಪೈಕಿ ಎರಡು ಪಂದ್ಯ ಮುಕ್ತಾಯಗೊಂಡಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್​ಗಳಿಂದ ಗೆದ್ದರೆ, ಬುಧವಾರ ಮುಕ್ತಾಯಗೊಂಡ ಎರಡನೇ ಕದನಲ್ಲಿ 44 ರನ್​ಗಳಿಂದ ಜಯಿಸಿತು. ಹೀಗೆ ಎರಡೂ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದು ಬೀಗಿದ್ದು ಸರಣಿ ವಶಪಡಿಸಿಕೊಂಡಿದೆ. ಬೌಲಿಂಗ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರಿದ್ದು, ಭಾರತೀಯ ಯುವ ಪಡೆ ಮಾರಕವಾಗಿದೆ. ಎರಡನೇ ಏಕದಿನ ಮುಗಿದ ಬಳಿಕ ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ಬೌಲಿಂಗ್ ಪಡೆಯನ್ನು ಹಾಡಿಹೊಗಳಿಸಿದರು. ಇದೀಗ ಅಂತಿಮ ಏಕದಿನದತ್ತ ಎಲ್ಲ ಚಿತ್ತ ಬಿದ್ದಿದೆ. ಭಾರತ ಉಳಿದಿರುವ ಒಂದು ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಸಾಧನೆಯನ್ನು ಎದುರು ನೋಡುತ್ತಿದ್ದರೆ, ಇತ್ತ ವೆಸ್ಟ್ ಇಂಡೀಸ್ ಅಂತಿಮ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​​ನಲ್ಲಿದೆ.

ಹಾಗಾದ್ರೆ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ ಆರಂಭ? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಫೆಬ್ರವರಿ 11ರಂದು ನಡೆಯಲಿದೆ.

ಪ್ರಥಮ ಮತ್ತು ದ್ವಿತೀಯ ಪಂದ್ಯ ನಡೆದ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ 3ನೇ ಏಕದಿನ ಕೂಡ ಜರುಗಲಿದೆ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

2ನೇ ಏಕದಿನ ಹೇಗಿತ್ತು?:

ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭಿಕ ಆಘಾತದ ನಡುವೆ ಕನ್ನಡಿಗ ಕೆಎಲ್ ರಾಹುಲ್ (49 ರನ್, 48 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಸೂರ್ಯಕುಮಾರ್ ಯಾದವ್ (64ರನ್, 83 ಎಸೆತ, 5 ಬೌಂಡರಿ) ಆಸರೆಯಿಂದ 9 ವಿಕೆಟ್‌ಗೆ 237 ರನ್ ಪೇರಿಸಿತು. ಪ್ರತಿಯಾಗಿ ವಿಂಡೀಸ್ ತಂಡ ಪ್ರಸಿದ್ಧ್ ಕೃಷ್ಣ ಸಾರಥ್ಯದಲ್ಲಿ ಸಂಘಟಿಸಿದ ದಾಳಿಗೆ ನಲುಗಿ 46 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು. 9 ಓವರ್ ಬೌಲಿಂಗ್ ಮಾಡಿ 3 ಮೇಡನ್ ಓವರ್ ಜೊತೆಗೆ ಕೇವಲ 12 ರನ್ ನೀಡಿದ ಪ್ರಸಿದ್ಧ್ ಕೃಷ್ಣ ವೆಸ್ಟ್ ಇಂಡೀಸ್ ತಂಡದ 4 ವಿಕೆಟ್ ಪಡೆದು ಮಿಂಚಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್‌ ಪಂತ್(ವಿ.ಕೀ), ದೀಪಕ್‌ ಚಹರ್‌, ಶಾರ್ದುಲ್‌ ಠಾಕೂರ್‌, ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್‌, ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯ್‌, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಆವೇಶ್‌ ಖಾನ್‌, ಇಶಾನ್‌ ಕಿಶನ್‌, ಶಾರುಖ್‌ ಖಾನ್‌, ಮಯಾಂಕ್ ಅಗರ್ವಾಲ್.

ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್​​ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.

Virat Kohli Catch: ವಿರಾಟ್ ಕೊಹ್ಲಿ ಹಿಡಿದ ಸ್ಟನ್ನಿಂಗ್ ಕ್ಯಾಚ್​ ಕಂಡು ದಂಗಾದ ರೋಹಿತ್ ಮಾಡಿದ್ದೇನು ನೋಡಿ

Rohit Sharma: ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಹೊಗಳಿದ್ದು ಯಾರನ್ನ ನೋಡಿ

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ