AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 4ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ಫ್ಲೋರಿಡಾದ ಹವಾಮಾನ ವರದಿ

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯವು ಶನಿವಾರ, ಆಗಸ್ಟ್ 12 ರಂದು ನಡೆಯಲಿದ್ದು, ಅಮೆರಿಕಾದ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಸೆಂಟ್ರಲ್ ಬ್ರೋವರ್ಡ್ ಪ್ರಾದೇಶಿಕ ಪಾರ್ಕ್ ಸ್ಟೇಡಿಯಂ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಪಂದ್ಯದ ದಿನ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ದಿನ ಪ್ರಾರಂಭವಾಗುವ ನಿರೀಕ್ಷೆಯಿದೆ. ದಿನ ಕಳೆದಂತೆ ಮಧ್ಯಾಹ್ನದ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

IND vs WI: 4ನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ಫ್ಲೋರಿಡಾದ ಹವಾಮಾನ ವರದಿ
ಲಾಡರ್ಹಿಲ್ ಹವಾಮಾನ ವರದಿImage Credit source: insidesport
ಪೃಥ್ವಿಶಂಕರ
|

Updated on:Aug 12, 2023 | 1:17 PM

Share

ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ (India and West Indies) ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ಆಗಸ್ಟ್ 12 ರ ಶನಿವಾರದಂದು ಫ್ಲೋರಿಡಾದಲ್ಲಿ (Lauderhill, Florida) ನಡೆಯಲಿದೆ. ಈ ಸರಣಿಯ ಕೊನೆಯ ಎರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿದೆ. ಸರಣಿಯ ಮೊದಲ 2 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್, ಟೀಂ ಇಂಡಿಯಾ (Team India) ವಿರುದ್ಧ ಸತತ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿರಿಸಿದೆ. ಇದೀಗ ಸರಣಿ ಸಮಬಲ ಸಾಧಿಸುವ ಗುರಿಯೊಂದಿಗೆ ಟೀಂ ಇಂಡಿಯಾ ನಾಲ್ಕನೇ ಪಂದ್ಯದಲ್ಲಿ ಮೈದಾನಕ್ಕಿಳಿಯಲಿದೆ.

ಇನ್ನು ನಾಲ್ಕನೇ ಟಿ20 ಪಂದ್ಯ ನಡೆಯುತ್ತಿರುವ ಫ್ಲೋರಿಡಾದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 6 ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ 4 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದರೆ, ಒಂದು ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದಿದೆ. ಇನ್ನೊಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗಾಗಿ ಫ್ಲೋರಿಡಾದಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾವೇ ನಾಲ್ಕನೇ ಟಿ20 ಪಂದ್ಯದ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಈ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿದೆ ಎಂದು ಹವಾಮಾನ ವರದಿಯಲ್ಲಿ ಹೇಳಲಾಗಿದೆ.

IND vs WI: ಭಾರತ ಗೆದ್ದರೆ ಟಿ20 ಸರಣಿ ಜೀವಂತ; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ

ಲಾಡರ್ಹಿಲ್ ಹವಾಮಾನ ವರದಿ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯವು ಶನಿವಾರ, ಆಗಸ್ಟ್ 12 ರಂದು ನಡೆಯಲಿದ್ದು, ಅಮೆರಿಕಾದ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಸೆಂಟ್ರಲ್ ಬ್ರೋವರ್ಡ್ ಪ್ರಾದೇಶಿಕ ಪಾರ್ಕ್ ಸ್ಟೇಡಿಯಂ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಪಂದ್ಯದ ದಿನ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ದಿನ ಪ್ರಾರಂಭವಾಗುವ ನಿರೀಕ್ಷೆಯಿದೆ. ದಿನ ಕಳೆದಂತೆ ಮಧ್ಯಾಹ್ನದ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಅಲ್ಲದೆ ಹಗಲಿನಲ್ಲಿ 40% ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಆದಾಗ್ಯೂ, ಪಂದ್ಯದ ಸಮಯ ಸಮೀಪಿಸುತ್ತಿದ್ದಂತೆ, ಮಳೆಯ ಸಾಧ್ಯತೆಗಳು ಸುಮಾರು 24% ಕ್ಕೆ ಕಡಿಮೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿಯೂ, ಆಗಾಗ ಆಕಾಶದಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಪಂದ್ಯದ ಸಮಯದಲ್ಲಿ ತಾಪಮಾನವು ಸುಮಾರು 27 ಡಿಗ್ರಿ ಸೆ. ಇರಲಿದೆ ಎಂದು ಅಂದಾಜಿಸಲಾಗಿದೆ.

4ನೇ ಪಂದ್ಯಕ್ಕೆ ಸಂಭಾವ್ಯ ತಂಡಗಳು

ಟೀಂ ಇಂಡಿಯಾ: ಶುಭ್​ಮನ್ ಗಿಲ್/ ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆದ್ ಮೆಕಾಯ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sat, 12 August 23