AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಭಾರತ- ವಿಂಡೀಸ್ ಪಂದ್ಯಕ್ಕೆ ಅಡ್ಡಿ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5ನೇ ಟಿ20 ಸರಣಿ ನಿರ್ಣಾಯಕ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ 2-2 ರಿಂದ ಸಮಬಲಗೊಂಡಿದ್ದು, ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ. ಆದರೆ, ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಪಂದ್ಯಕ್ಕೆ ಅಡ್ಡಿಪಡಿಸುವ ಭೀತಿ ಸೃಷ್ಟಿಸಿದೆ. ಚಿನ್ನಸ್ವಾಮಿ ಮೈದಾನದ ಅತ್ಯುತ್ತಮ ಒಳಚರಂಡಿ ವ್ಯವಸ್ಥೆ ಪಂದ್ಯವನ್ನು ಮಳೆ ನಿಂತ ತಕ್ಷಣ ಪುನರಾರಂಭಿಸಲು ನೆರವಾಗಲಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಭಾರತ- ವಿಂಡೀಸ್ ಪಂದ್ಯಕ್ಕೆ ಅಡ್ಡಿ
ಚಿನ್ನಸ್ವಾಮಿ ಕ್ರೀಡಾಂಗಣ
ಪೃಥ್ವಿಶಂಕರ
|

Updated on:Oct 17, 2026 | 5:05 PM

Share

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಕೊನೆಯ ಟಿ20 ಪಂದ್ಯ ಇಂದು ನಡೆಯಲಿದೆ. ಸರಣಿಯಲ್ಲಿ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದಿರುವ ಕಾರಣ ಸರಣಿ 2-2 ರಿಂದ ಸಮಬಲಗೊಂಡಿದೆ. ಹೀಗಾಗಿ ಇಂದು ನಡೆಯುವ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಈ ಕಾರಣದಿಂದಾಗಿ ಉಭಯ ತಂಡಗಳು ಶತಾಹಗತಾಯ ಗೆಲ್ಲಲೇಬೇಕಾದ ಒತ್ತಡದಲ್ಲಿ ರಣತಂತ್ರಗಳನ್ನು ರೂಪಿಸಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ. ಈ ಎರಡು ತಂಡಗಳ ನಿರ್ಣಾಯಕ ಕದನಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಆದರೆ ಈ ಪಂದ್ಯ ನಡೆಯುವುದು ಭಾಗಶಃ ಅನುಮಾನವಾಗಿದೆ. ಇದಕ್ಕೆ ಕಾರಣ ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ. ಅಲ್ಲದೆ ಪಂದ್ಯದ ದಿನದಂದು ಕೂಡ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು.

ಬೆಂಗಳೂರಿನಲ್ಲಿ ಧಾರಕಾರ ಮಳೆ

ವಾಸ್ತವವಾಗಿ ಬಹಳ ದಿನಗಳ ಬಳಿಕ ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿರುವುದು ಅಭಿಮಾನಿಗಳ ಮನದಲ್ಲಿ ಸಂತಸ ಮೂಡಿಸಿತ್ತು. ಹೀಗಾಗಿ ಅಭಿಮಾನಿಗಳು ಕೂಡ ಈ ಪಂದ್ಯಕ್ಕಾಗಿ ಕಾದು ಕುಳಿತಿದ್ದರು. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಬೆಂಗಳೂರಿನಲ್ಲಿ ಧಾರಕಾರವಾಗಿ ಮಳೆ ಸುರಿಯಲಾರಂಭಿಸಿದೆ. ಸಂಜೆ 5 ಗಂಟೆ ಆಗುವ ಮುನ್ನವೇ ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ. ಇದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಶನಿವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಅಕ್ಯೂವೆದರ್ ವರದಿ ಮಾಡಿತ್ತು. ಅದರಂತೆ ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ. ಅಲ್ಲದೆ ಪಂದ್ಯದ ಸಮಯದಲ್ಲಿ, ಸಂಜೆ ಮತ್ತು ರಾತ್ರಿ ವೇಳೆಯೂ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಮಳೆಯ ಜೊತೆಗೆ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದು ಪಂದ್ಯಕ್ಕೆ ಅಡ್ಡಿಪಡಿಸಬಹುದು.

ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ಟಿ20 ತಂಡ ಪ್ರಕಟ; 4 ವರ್ಷಗಳ ಬಳಿಕ ಭುವನೇಶ್ವರ್ ಕುಮಾರ್ ಆಯ್ಕೆ

ಅರ್ಧ ಗಂಟೆಯೊಳಗೆ ಪಂದ್ಯ ಆರಂಭ

ಆದಾಗ್ಯೂ ಇಲ್ಲೊಂದು ಸಮಾಧಾನಕರ ಸುದ್ದಿಯೆಂದರೆ, ಬೆಂಗಳೂರಿನಲ್ಲಿ ಎಷ್ಟೇ ಮಳೆ ಬಂದರೂ ಮಳೆ ನಿಂತ ಕೇವಲ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಇದಕ್ಕೆ ಕಾರಣ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಅತ್ಯುತ್ತಮ ಒಳಚರಂಡಿ ವ್ಯವಸ್ಥೆ. ಗಂಟೆಗಟ್ಟಲೆ ಮಳೆ ಸುರಿದರೂ, ಅರ್ಧ ಗಂಟೆಯೊಳಗೆ ಪಂದ್ಯವನ್ನು ಪುನರಾರಂಭಗೊಳಿಸಬಹುದು. ಇದು ಅಭಿಮಾನಿಗಳು ಮತ್ತು ತಂಡಗಳಿಗೆ ಸಮಾಧಾನಕರ ಸಂಗತಿಯಾಗಿದೆ. ಆದರೆ ಪಂದ್ಯ ಆರಂಭಕ್ಕೆ ಮಳೆ ಬ್ರೇಕ್ ತೆಗೆದುಕೊಳ್ಳಲೇಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Sat, 17 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ