
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಕೊನೆಯ ಟಿ20 ಪಂದ್ಯ ಇಂದು ನಡೆಯಲಿದೆ. ಸರಣಿಯಲ್ಲಿ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದಿರುವ ಕಾರಣ ಸರಣಿ 2-2 ರಿಂದ ಸಮಬಲಗೊಂಡಿದೆ. ಹೀಗಾಗಿ ಇಂದು ನಡೆಯುವ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಲಿದೆ. ಈ ಕಾರಣದಿಂದಾಗಿ ಉಭಯ ತಂಡಗಳು ಶತಾಹಗತಾಯ ಗೆಲ್ಲಲೇಬೇಕಾದ ಒತ್ತಡದಲ್ಲಿ ರಣತಂತ್ರಗಳನ್ನು ರೂಪಿಸಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ. ಈ ಎರಡು ತಂಡಗಳ ನಿರ್ಣಾಯಕ ಕದನಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಆದರೆ ಈ ಪಂದ್ಯ ನಡೆಯುವುದು ಭಾಗಶಃ ಅನುಮಾನವಾಗಿದೆ. ಇದಕ್ಕೆ ಕಾರಣ ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ. ಅಲ್ಲದೆ ಪಂದ್ಯದ ದಿನದಂದು ಕೂಡ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು.
ವಾಸ್ತವವಾಗಿ ಬಹಳ ದಿನಗಳ ಬಳಿಕ ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿರುವುದು ಅಭಿಮಾನಿಗಳ ಮನದಲ್ಲಿ ಸಂತಸ ಮೂಡಿಸಿತ್ತು. ಹೀಗಾಗಿ ಅಭಿಮಾನಿಗಳು ಕೂಡ ಈ ಪಂದ್ಯಕ್ಕಾಗಿ ಕಾದು ಕುಳಿತಿದ್ದರು. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಬೆಂಗಳೂರಿನಲ್ಲಿ ಧಾರಕಾರವಾಗಿ ಮಳೆ ಸುರಿಯಲಾರಂಭಿಸಿದೆ. ಸಂಜೆ 5 ಗಂಟೆ ಆಗುವ ಮುನ್ನವೇ ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ. ಇದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಶನಿವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಅಕ್ಯೂವೆದರ್ ವರದಿ ಮಾಡಿತ್ತು. ಅದರಂತೆ ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ. ಅಲ್ಲದೆ ಪಂದ್ಯದ ಸಮಯದಲ್ಲಿ, ಸಂಜೆ ಮತ್ತು ರಾತ್ರಿ ವೇಳೆಯೂ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಮಳೆಯ ಜೊತೆಗೆ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದು ಪಂದ್ಯಕ್ಕೆ ಅಡ್ಡಿಪಡಿಸಬಹುದು.
ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ಟಿ20 ತಂಡ ಪ್ರಕಟ; 4 ವರ್ಷಗಳ ಬಳಿಕ ಭುವನೇಶ್ವರ್ ಕುಮಾರ್ ಆಯ್ಕೆ
ಆದಾಗ್ಯೂ ಇಲ್ಲೊಂದು ಸಮಾಧಾನಕರ ಸುದ್ದಿಯೆಂದರೆ, ಬೆಂಗಳೂರಿನಲ್ಲಿ ಎಷ್ಟೇ ಮಳೆ ಬಂದರೂ ಮಳೆ ನಿಂತ ಕೇವಲ ಕೆಲವೇ ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಇದಕ್ಕೆ ಕಾರಣ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಅತ್ಯುತ್ತಮ ಒಳಚರಂಡಿ ವ್ಯವಸ್ಥೆ. ಗಂಟೆಗಟ್ಟಲೆ ಮಳೆ ಸುರಿದರೂ, ಅರ್ಧ ಗಂಟೆಯೊಳಗೆ ಪಂದ್ಯವನ್ನು ಪುನರಾರಂಭಗೊಳಿಸಬಹುದು. ಇದು ಅಭಿಮಾನಿಗಳು ಮತ್ತು ತಂಡಗಳಿಗೆ ಸಮಾಧಾನಕರ ಸಂಗತಿಯಾಗಿದೆ. ಆದರೆ ಪಂದ್ಯ ಆರಂಭಕ್ಕೆ ಮಳೆ ಬ್ರೇಕ್ ತೆಗೆದುಕೊಳ್ಳಲೇಬೇಕಾಗಿದೆ.
Published On - 4:58 pm, Sat, 17 October 26