IND vs WI: ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಮಿಂಚಿಂಗ್; ಕೊಹ್ಲಿ- ಸೆಹ್ವಾಗ್ ದಾಖಲೆಯೂ ಉಡೀಸ್

Rohit Sharma: 1000 ಏಕದಿನ ಪಂದ್ಯದಲ್ಲಿ ಭಾರತದ ಗೆಲುವು ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಂಬತ್ತನೇ ಗೆಲುವು. ನಾಯಕನಾದ ನಂತರ ಮೊದಲ 11 ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

IND vs WI: ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಮಿಂಚಿಂಗ್; ಕೊಹ್ಲಿ- ಸೆಹ್ವಾಗ್ ದಾಖಲೆಯೂ ಉಡೀಸ್
ರೋಹಿತ್ ಶರ್ಮಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 07, 2022 | 2:58 PM

ವೆಸ್ಟ್ ಇಂಡೀಸ್ ವಿರುದ್ಧದ ODI ಸರಣಿಯೊಂದಿಗೆ ರೋಹಿತ್ ಶರ್ಮಾ (Rohit Sharma) ತಮ್ಮ ನಾಯಕತ್ವದ ವೃತ್ತಿಜೀವನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿದ್ದಾರೆ. ಮೊದಲ ಪಂದ್ಯ ಭಾರತದ 1000ನೇ ಏಕದಿನ ಪಂದ್ಯವೂ ಆಗಿತ್ತು. ಐತಿಹಾಸಿಕ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ರೋಹಿತ್ ಶರ್ಮಾ 60 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು. ಈ ಇನ್ನಿಂಗ್ಸ್‌ನ ಪವರ್‌ಪ್ಲೇನಲ್ಲಿ ರೋಹಿತ್ ಒಬ್ಬರೇ 46 ರನ್ ಗಳಿಸಿದರು. ಭಾರತದ ಐತಿಹಾಸಿಕ ವಿಜಯದಲ್ಲಿ ರೋಹಿತ್ ಶರ್ಮಾ ಪಾತ್ರ ಮುಖ್ಯವಾಗಿದ್ದಲ್ಲದೆ ಅವರು ವಿರಾಟ್ ಕೊಹ್ಲಿ ದಾಖಲೆಯನ್ನು ಸಹ ಮುರಿದರು. ಇದರೊಂದಿಗೆ ರನ್ ಗಳಿಕೆಯಲ್ಲಿ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದರು.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ 60 ರನ್​ಗಳಲ್ಲಿ ಒಂದು ಸಿಕ್ಸರ್ ಸಹ ಬಾರಿಸಿದ್ದರು. ಈ ಏಕೈಕ ಸಿಕ್ಸರ್‌ನೊಂದಿಗೆ ಅವರು ಭಾರತ ಗೆದ್ದ ಪಂದ್ಯಗಳಲ್ಲಿ 77 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. 1000 ಏಕದಿನ ಪಂದ್ಯದಲ್ಲಿ ಭಾರತದ ಗೆಲುವು ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಂಬತ್ತನೇ ಗೆಲುವು. ನಾಯಕನಾದ ನಂತರ ಮೊದಲ 11 ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ನಾಯಕನಾಗಿ ODIಗಳ ಮೊದಲ 11 ಇನ್ನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್‌ನನ್ನೂ ಮೀರಿಸಿದರು. ರೋಹಿತ್ ಶರ್ಮಾ ಸದ್ಯ 600ಕ್ಕೂ ಅಧಿಕ ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಗಳಿಸಿದ್ದು 592 ರನ್ ಮಾತ್ರ.

ಸೆಹ್ವಾಗ್ ದಾಖಲೆ ಉಡೀಸ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ODI ಪಂದ್ಯದಲ್ಲಿ 60 ರನ್‌ಗಳ ಇನ್ನಿಂಗ್ಸ್‌ ಆಡಿದ ರೋಹಿತ್ ಶರ್ಮಾ ODIಗಳಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ಭಾರತೀಯ ಆರಂಭಿಕರ ಪಟ್ಟಿಗೆ ಸೇರಿದ್ದಾರೆ. ಸೆಹ್ವಾಗ್ 7240 ರನ್ ಗಳಿಸಿದ್ದರು. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ. ಜೊತೆಗೆ ಅಹಮದಾಬಾದ್‌ನಲ್ಲಿ ನಡೆದ ಮೊದಲ ODI ನಲ್ಲಿ ಭಾರತ ಪರ 200 ನೇ ಬಾರಿ ಆರಂಭಿಕರಾಗಿ ಕಣಕ್ಕಿಳಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ರೋಹಿತ್​ಗಿಂತ 238 ಬಾರಿ ಆರಂಭಿಕರಾಗಿ ಕಣಕ್ಕಿಳಿದಿರುವ ಸುನಿಲ್ ಗವಾಸ್ಕರ್ ಮೊದಲಿಗರಾಗಿದ್ದಾರೆ.

ಇದನ್ನೂ ಓದಿ:India vs West Indies: 1000ನೇ ಏಕದಿನ ಪಂದ್ಯದಲ್ಲಿ ಗೆದ್ದು ದಾಖಲೆ ಬರೆದ ಭಾರತ: ರೋಹಿತ್ ಪಡೆ ಭರ್ಜರಿ ಶುಭಾರಂಭ

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’