India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯ ನಾಳೆ (ಜುಲೈ 27) ನಡೆಯಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ತಯಾರಿಯನ್ನು ಆರಂಭಿಸಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬ ಕುತೂಹಲ ಏರ್ಪಟ್ಟಿದೆ. ಏಕೆಂದರೆ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಇವರಲ್ಲಿ 11 ಆಟಗಾರರನ್ನು ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಮುಂದಿರುವ ದೊಡ್ಡ ಸವಾಲು. ಹೀಗಾಗಿಯೇ ಮೊದಲ ಪಂದ್ಯದಿಂದ ಕೆಲ ಸ್ಟಾರ್ ಆಟಗಾರರು ಹೊರಗುಳಿದರೂ ಅಚ್ಚರಿ ಪಡಬೇಕಿಲ್ಲ.
ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಮೂರನೇ ಸ್ಥಾನ ವಿರಾಟ್ ಕೊಹ್ಲಿಗೆ ಖಾಯಂ. 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಕಣಕ್ಕಿಳಿಯಲಿದ್ದಾರೆ.
ಐದನೇ ಕ್ರಮಾಂಕಕ್ಕಾಗಿ ವಿಕೆಟ್ ಕೀಪರ್ ಬ್ಯಾಟರ್ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ನಡುವೆ ಪೈಪೋಟಿ ಇದೆ. ಇಲ್ಲಿ ಹಿರಿತನಕ್ಕೆ ಮಣೆ ಹಾಕಿದರೆ ಸ್ಯಾಮ್ಸನ್ಗೆ ಅವಕಾಶ ಸಿಗಬಹುದು. ಹಾಗೆಯೇ 6ನೇ ಕ್ರಮಾಂಕದಲ್ಲಿ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
ಸ್ಪಿನ್ ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಖಚಿತ. ಇನ್ನು ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಉಮ್ರಾನ್ ಮಲಿಕ್ಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿದೆ.
ಇದನ್ನೂ ಓದಿ: IND vs WI: ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ: ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.