IND vs WI: ವಿಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

India Squad For West Indies Announced: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು ಟೀಂ ಇಂಡಿಯಾವನ್ನು ಪ್ರಕಟಿಸಿದೆ.

IND vs WI: ವಿಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Jun 23, 2023 | 3:46 PM

ವೆಸ್ಟ್ ಇಂಡೀಸ್ ವಿರುದ್ಧದ (India Vs West Indies) ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು ಟೀಂ ಇಂಡಿಯಾವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾಗೆ (Rohit Sharma) ಈ ಪ್ರವಾಸದಿಂದ ವಿಶ್ರಾಂತಿ ನೀಡಲಾಗುವುದು ಎಂಬ ವದಂತಿಗಳಿಗೆ ಮುಕ್ತಿ ಸಿಕ್ಕಿದ್ದು, ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು (Team India) ಮುನ್ನಡೆಸಲಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ (WTC Final 2023) ಟೀಂ ಇಂಡಿಯಾ ಪರ ಕಳಪೆ ಪ್ರದರ್ಶನ ನೀಡಿದ್ದ ಚೇತೇಶ್ವರ ಪೂಜಾರ (Cheteshwar Pujara) ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಈ ಹಿಂದೆಯೇ ಪೂಜಾರ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಬಗ್ಗೆ ವದಂತಿ ಹಬ್ಬಿತ್ತು. ಇದೀಗ ಆ ವದಂತಿ ಸತ್ಯವಾಗಿದೆ. ಇನ್ನು ಪೂಜಾರ ಅವರನ್ನು ಟೆಸ್ಟ್ ತಂಡದಿಂದ  ಹೊರಗಿಟ್ಟಿರುವ ಆಯ್ಕೆ ಮಂಡಳಿ ಅವರ ಸ್ಥಾನಕ್ಕೆ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರನ್ನು ಆಯ್ಕೆ ಮಾಡಿದೆ. ಅದೇ ಸಮಯದಲ್ಲಿ, ವೇಗದ ಬೌಲರ್‌ಗಳಾದ ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿಗೆ ಏಕದಿನ ಹಾಗೂ ಟೆಸ್ಟ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

IND vs WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಹೆಸರಿಸಿದ ಟರ್ಬನೇಟರ್

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಟೆಸ್ಟ್ ಸರಣಿ ವೇಳಾಪಟ್ಟಿ

ಭಾರತದ ವೆಸ್ಟ್ ಇಂಡೀಸ್ ಪ್ರವಾಸ ಮೊದಲಿಗೆ ಟೆಸ್ಟ್ ಸರಣಿಯಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ಜುಲೈ 12 ರಿಂದ ಆರಂಭವಾಗಲಿದೆ. ಜುಲೈ 12 ರಿಂದ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯ 16 ರವರೆಗೆ ನಡೆಯಲಿದೆ. ಈ ಮೊದಲ ಟೆಸ್ಟ್​ಗೆ ಡೊಮಿನಿಕಾ ಆತಿಥ್ಯವಹಿಸಲಿದೆ. 2ನೇ ಟೆಸ್ಟ್ ಪಂದ್ಯವು 4 ದಿನಗಳ ನಂತರ ಅಂದರೆ, ಜುಲೈ 20 ರಿಂದ 24 ರವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಟ್ರಿನಿಡಾಡ್​ನ ಓವಲ್ ಮೈದಾನ ಆತಿಥ್ಯವಹಿಸಲಿದೆ.

ಏಕದಿನ ಸರಣಿ ವೇಳಾಪಟ್ಟಿ

ಟೆಸ್ಟ್ ಸರಣಿ ಮುಗಿದ 3 ದಿನಗಳ ನಂತರ ಅಂದರೆ, ಜುಲೈ 27 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಜುಲೈ 27 ರಂದು ನಡೆಯಲ್ಲಿರುವ ಮೊದಲ ಏಕದಿನ ಪಂದ್ಯಕ್ಕೆ ಬಾರ್ಬಡೋಸ್​ನ ಕಿಂಗ್ಸ್​ಸ್ಟನ್ ಓವಲ್ ಮೈದಾನದ ಆತಿಥ್ಯವಹಿಸಲಿದೆ. ಹಾಗೆಯೇ ಜುಲೈ 29 ರಂದು ನಡೆಯುವ 2ನೇ ಏಕದಿನ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ. ಅಂತಿಮವಾಗಿ ಏಕದಿನ ಸರಣಿಯ ಕೊನೆಯ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಆ ಬಳಿಕ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Fri, 23 June 23

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!