AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: 2ನೇ ಪಂದ್ಯಕ್ಕೂ ಕೆಎಲ್ ರಾಹುಲ್ ಅನುಮಾನ..!

IND vs WI: ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್‌ ಪಂತ್(ವಿಕೆಟ್ ಕೀಪರ್), ದೀಪಕ್‌ ಚಹರ್‌, ಶಾರ್ದುಲ್‌ ಠಾಕೂರ್‌, ಯುಜ್ವೇಂದ್ರ ಚಹಲ್‌.

KL Rahul: 2ನೇ ಪಂದ್ಯಕ್ಕೂ ಕೆಎಲ್ ರಾಹುಲ್ ಅನುಮಾನ..!
KL Rahul
TV9 Web
| Updated By: ಝಾಹಿರ್ ಯೂಸುಫ್|

Updated on: Feb 07, 2022 | 4:34 PM

Share

ಭಾರತ-ವೆಸ್ಟ್ ಇಂಡೀಸ್ (India vs West Indies 2nd Odi) ನಡುವಣ 3 ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ (KL Rahul) ಕಣಕ್ಕಿಳಿದಿರಲಿಲ್ಲ ಎಂಬುದು ವಿಶೇಷ. ಸಹೋದರಿಯ ವಿವಾಹದ ನಿಮಿತ್ತ ರಾಹುಲ್ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಹೀಗಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇನ್ನು ಈ ಹಿಂದೆ ಟೀಮ್ ಇಂಡಿಯಾವನ್ನು ಘೋಷಿಸಿದಾಗ, ಕೆಎಲ್ ರಾಹುಲ್ ಎರಡನೇ ಏಕದಿನ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು. ಆದರೀಗ ರಾಹುಲ್ 2ನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಕೆಎಲ್ ರಾಹುಲ್ ಇದೀಗ ಟೀಮ್ ಇಂಡಿಯಾ ಬಳಗವನ್ನು ಸೇರಿಕೊಳ್ಳಬೇಕಿದ್ದರೆ ಕ್ವಾರಂಟೈನ್​ನಲ್ಲಿ ಇರಬೇಕಾಗುತ್ತದೆ. ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ನವದೀಪ್ ಸೈನಿ, ಶ್ರೇಯಸ್ ಅಯ್ಯರ್ ಸೇರಿದಂತೆ ಟೀಮ್ ಇಂಡಿಯಾದ ಕೆಲ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಕ್ವಾರಂಟೈನ್ ಅನ್ನು ಕಡ್ಡಾಯಗೊಳಿಸಿದೆ. ಅದರಂತೆ ರಾಹುಲ್ ಇದೀಗ ತಂಡಕ್ಕೆ ಮರಳಬೇಕಾದರೆ ಕ್ವಾರಂಟೈನ್​ ಮುಗಿಸಬೇಕು. ಇದಾದ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಬಹುದು.

ಕೆಎಲ್ಆರ್​ ಸೋಮವಾರ ಅಹಮದಾಬಾದ್​ಗೆ ಆಗಮಿಸಿದರೂ, ಮೂರು ದಿನಗಳ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಅದರಂತೆ ಅವರು ಬುಧವಾರ ನಡೆಯಲಿರುವ 2 ನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ದದ ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್ ಟೀಮ್ ಇಂಡಿಯಾವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. ಇನ್ನು ಬದಲಿ ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿರುವ ಮಯಾಂಕ್ ಅಗರ್ವಾಲ್ ಅವರ ಕ್ವಾರಂಟೈನ್ ಮುಗಿಯಲಿದ್ದು, ಹೀಗಾಗಿ 2ನೇ ಪಂದ್ಯದ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್‌ ಪಂತ್(ವಿಕೆಟ್ ಕೀಪರ್), ದೀಪಕ್‌ ಚಹರ್‌, ಶಾರ್ದುಲ್‌ ಠಾಕೂರ್‌, ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್‌, ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯ್‌, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ, ಆವೇಶ್‌ ಖಾನ್‌, ಇಶಾನ್‌ ಕಿಶನ್‌, ಶಾರುಖ್‌ ಖಾನ್‌.

ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್​​ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 9 – 2 ನೇ ODI, ಅಹಮದಾಬಾದ್

ಫೆಬ್ರವರಿ 11 – 3 ನೇ ODI, ಅಹಮದಾಬಾದ್

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(IND vs WI: KL Rahul unavailable for 2nd ODI)

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ