IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?

IND vs WI: ಒಂದೆರಡು ದಿನಗಳಲ್ಲಿ ಫಿಟ್ನೆಸ್ ಪರೀಕ್ಷೆಗೆ ರಾಹುಲ್ ಒಳಗಾಗಬೇಕಿತ್ತು. ಆದರೀಗ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿರುವುದರಿಂದ ಅವರು ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಐಪಿಎಲ್ 2022 ರಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಕೆಎಲ್ ರಾಹುಲ್ ಇಂಗ್ಲೆಂಡ್ ಪ್ರವಾಸದ ಮೊದಲು ಗಾಯಗೊಂಡು ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗಬೇಕಾಯಿತು. ಅದೇ ಸಮಯದಲ್ಲಿ, ಅವರು ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈಗ ಅವರು ಮೊದಲ ಮೂರು T20 ಪಂದ್ಯಗಳಿಗೆ ಅಲಭ್ಯ ಎಂಬ ಸುದ್ದಿ ಹೊರಬಿದ್ದಿದೆ.
Follow us
TV9 Web
| Updated By: ಪೃಥ್ವಿಶಂಕರ

Updated on:Jul 21, 2022 | 9:12 PM

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್​ (KL Rahul)ಗೆ ಕೊರೊನಾ ಸೋಂಕು ತಗುಲಿದೆ. ಮಾಧ್ಯಮ ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಮೊದಲ ನೆಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಅವರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ರಾಹುಲ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಬೆಂಗಳೂರಿನ ಎನ್‌ಸಿಎಯಲ್ಲಿ ತರಬೇತಿಯನ್ನು ಪುನರಾರಂಭಿಸಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಕೆಎಲ್ ರಾಹುಲ್​ಗೆ T20I ತಂಡದಲ್ಲಿ ಅವಕಾಶ ನೀಡಲಾಗಿತ್ತು. ಈಗ ಒಂದೆರಡು ದಿನಗಳಲ್ಲಿ ಫಿಟ್ನೆಸ್ ಪರೀಕ್ಷೆಗೆ ರಾಹುಲ್ ಒಳಗಾಗಬೇಕಿತ್ತು. ಆದರೀಗ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿರುವುದರಿಂದ ಅವರು ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ರಾಹುಲ್‌ ಸೋಂಕಿಗೆ ಒಳಗಾಗಿದ್ದಾರೆ . ರಾಹುಲ್‌ಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದರೂ, ಅವರು ಟಿ20 ಸರಣಿಯ ಭಾಗವಾಗಿದ್ದಾರೆ. ಈ ಎರಡೂ ತಂಡಗಳು ಜುಲೈ 29 ರಿಂದ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿವೆ. ಕೆಎಲ್ ರಾಹುಲ್ ಈ ವಾರ ವೆಸ್ಟ್ ಇಂಡೀಸ್‌ಗೆ ತೆರಳಬೇಕಿತ್ತು, ಆದರೆ ಈಗ ಅವರು ಟಿ 20 ಐ ಸರಣಿಯಿಂದ ಹೊರಗುಳಿಯಬಹುದು ಎಂದು ತೋರುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ರಾಹುಲ್ ಅವರನ್ನು ಟೀಮ್ ಇಂಡಿಯಾದ ನಾಯಕರನ್ನಾಗಿ ಮಾಡಲಾಯಿತು ಆದರೆ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು.

ಈ ಸರಣಿಯಲ್ಲಿ ರಾಹುಲ್ ಆಡಬಹುದು

ಇದನ್ನೂ ಓದಿ
Image
ಬಿಸಿಸಿಐನಲ್ಲಿ ದಾದಾ- ಜೈ ಶಾ ಪಾರುಪತ್ಯ; ಮೇಲ್ಮನವಿ ವಿಚಾರಣೆ ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್
Image
IND vs WI: ಹೊಸಬರಿಗೆ ಹೆಚ್ಚಿನ ಅವಕಾಶ; ಕೆರಿಬಿಯನ್ ದೈತ್ಯರನ್ನು ಮಣಿಸುವ ಧವನ್ ಪಡೆಯ ಸಂಭಾವ್ಯ XI ಹೀಗಿದೆ
Image
WI vs IND: ಭಾರತ-ವಿಂಡೀಸ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ಐಪಿಎಲ್-2022 ರಿಂದ ರಾಹುಲ್ ಕ್ರಿಕೆಟ್ ಆಡಿಲ್ಲ. ಅವರು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದರು. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಸಾಧ್ಯವಾಗಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಆಡಲು ಸಾಧ್ಯವಾಗದಿದ್ದರೆ ಜಿಂಬಾಬ್ವೆ ವಿರುದ್ಧ ಆಡುವುದನ್ನು ಕಾಣಬಹುದು.

5 ಟಿ20 ಪಂದ್ಯಗಳ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲ್ದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

*ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಅವರ ಫಿಟ್‌ನೆಸ್‌ ಮೇಲೆ ಅವಲಂಬಿತವಾಗಿರುತ್ತದೆ.

Published On - 8:35 pm, Thu, 21 July 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ