ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ (KL Rahul)ಗೆ ಕೊರೊನಾ ಸೋಂಕು ತಗುಲಿದೆ. ಮಾಧ್ಯಮ ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಮೊದಲ ನೆಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಅವರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ರಾಹುಲ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಬೆಂಗಳೂರಿನ ಎನ್‌ಸಿಎಯಲ್ಲಿ ತರಬೇತಿಯನ್ನು ಪುನರಾರಂಭಿಸಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಕೆಎಲ್ ರಾಹುಲ್‌ಗೆ T20I ತಂಡದಲ್ಲಿ ಅವಕಾಶ ನೀಡಲಾಗಿತ್ತು. ಈಗ ಒಂದೆರಡು ದಿನಗಳಲ್ಲಿ ಫಿಟ್ನೆಸ್ ಪರೀಕ್ಷೆಗೆ ರಾಹುಲ್ ಒಳಗಾಗಬೇಕಿತ್ತು. ಆದರೀಗ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿರುವುದರಿಂದ ಅವರು ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ರಾಹುಲ್ ಸೋಂಕಿಗೆ ಒಳಗಾಗಿದ್ದಾರೆ . ರಾಹುಲ್‌ಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದರೂ, ಅವರು ಟಿ20 ಸರಣಿಯ ಭಾಗವಾಗಿದ್ದಾರೆ. ಈ ಎರಡೂ ತಂಡಗಳು ಜುಲೈ 29 ರಿಂದ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿವೆ. ಕೆಎಲ್ ರಾಹುಲ್ ಈ ವಾರ ವೆಸ್ಟ್ ಇಂಡೀಸ್‌ಗೆ ತೆರಳಬೇಕಿತ್ತು, ಆದರೆ ಈಗ ಅವರು ಟಿ 20 ಐ ಸರಣಿಯಿಂದ ಹೊರಗುಳಿಯಬಹುದು ಎಂದು ತೋರುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ರಾಹುಲ್ ಅವರನ್ನು ಟೀಮ್ ಇಂಡಿಯಾದ ನಾಯಕರನ್ನಾಗಿ ಮಾಡಲಾಯಿತು ಆದರೆ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು.
ಈ ಸರಣಿಯಲ್ಲಿ ರಾಹುಲ್ ಆಡಬಹುದು
ಐಪಿಎಲ್-2022 ರಿಂದ ರಾಹುಲ್ ಕ್ರಿಕೆಟ್ ಆಡಿಲ್ಲ. ಅವರು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದರು. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಸಾಧ್ಯವಾಗಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಆಡಲು ಸಾಧ್ಯವಾಗದಿದ್ದರೆ ಜಿಂಬಾಬ್ವೆ ವಿರುದ್ಧ ಆಡುವುದನ್ನು ಕಾಣಬಹುದು.
5 ಟಿ20 ಪಂದ್ಯಗಳ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲ್ದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
*ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಅವರ ಫಿಟ್‌ನೆಸ್ ಮೇಲೆ ಅವಲಂಬಿತವಾಗಿರುತ್ತದೆ.
Published On - 8:35 pm, Thu, 21 July 22