IND vs WI ODI: ಟೀಮ್ ಇಂಡಿಯಾದಲ್ಲಿ ಕೊರೋನಾತಂಕ: ತಂಡಕ್ಕೆ ಮತ್ತಿಬ್ಬರು ಆಟಗಾರರ ಆಯ್ಕೆ

| Updated By: ಝಾಹಿರ್ ಯೂಸುಫ್

Updated on: Feb 03, 2022 | 7:49 PM

IND vs WI ODI: ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್

IND vs WI ODI: ಟೀಮ್ ಇಂಡಿಯಾದಲ್ಲಿ ಕೊರೋನಾತಂಕ: ತಂಡಕ್ಕೆ ಮತ್ತಿಬ್ಬರು ಆಟಗಾರರ ಆಯ್ಕೆ
IND vs WI
Follow us on

ವೆಸ್ಟ್​ ಇಂಡೀಸ್ ವಿರುದ್ದದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ತಂಡದಲ್ಲಿದ್ದ ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶಿಖರ್ ಧವನ್ ಹಾಗೂ ನವದೀಪ್ ಸೈನಿ ಸೋಂಕಿಗೆ ತುತ್ತಾಗಿದ್ದರು. ಏಕದಿನ ಸರಣಿಗಾಗಿ ಅಹಮದಾಬಾದ್​ಗೆ ಬಂದಿದ್ದ ಆಟಗಾರರಿಗೆ ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು ಈ ವೇಳೆ ಈ ಆಟಗಾರರಲ್ಲಿ ಹಾಗೂ ಕೆಲ ಸಿಬ್ಬಂದಿಗಳಲ್ಲಿ ಸೋಂಕು ಇರುವುದು ಕಂಡು ಬಂದಿದೆ. ಹೀಗಾಗಿ ಈ ಆಟಗಾರರನ್ನು ಇದೀಗ ಐಸೊಲೇಟ್ ಮಾಡಲಾಗಿದೆ. ಇತ್ತ ಆರಂಭಿಕ ಆಟಗಾರ ಶಿಖರ್ ಧವನ್ ಕೊರೋನಾ ಸೋಂಕಿಗೆ ಒಳಗಾಗಿರುವ ಕಾರಣ ಟೀಮ್ ಇಂಡಿಯಾ ಓಪನರ್ ಕೊರತೆಯನ್ನು ಎದುರಿಸಿದೆ. ಏಕೆಂದರೆ ಕೆಎಲ್ ರಾಹುಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್​​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇದರೊಂದಿಗೆ ಮಯಾಂಕ್ ಮತ್ತೊಮ್ಮೆ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಇದೀಗ ಮತ್ತೋರ್ವ ಆರಂಭಿಕ ಆಟಗಾರನಿಗೂ ಬಿಸಿಸಿಐ ಬುಲಾವ್ ನೀಡಿದೆ.

ಅದರಂತೆ ಟೀಮ್ ಇಂಡಿಯಾ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಏಕದಿನ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈಗಾಗಲೇ ತಂಡವನ್ನು ಸೇರಿಕೊಳ್ಳುವಂತೆ ಇಶಾನ್ ಕಿಶನ್​ಗೆ ತಿಳಿಸಲಾಗಿದ್ದು, ಅದರಂತೆ ಯುವ ವಿಕೆಟ್ ಕೀಪರ್ ಶೀಘ್ರದಲ್ಲೇ ಅಹಮದಾಬಾದ್​ಗೆ ತಲುಪಲಿದ್ದಾರೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಕೇವಲ ಟಿ20 ತಂಡಕ್ಕೆ ಮಾತ್ರ ಆಯ್ಕೆಯಾಗಿದ್ದರು. ಇದೀಗ ಏಕದಿನ ತಂಡವನ್ನು ಸೇರಿಕೊಳ್ಳುವಂತೆ ತಿಳಿಸಲಾಗಿದೆ. ಇನ್ನು ತಂಡಕ್ಕೆ ಆಯ್ಕೆಯಾಗಿರುವ ಮಯಾಂಕ್ ಅಗರ್ವಾಲ್ ಸದ್ಯ ಕ್ವಾರಂಟೈನ್​ನಲ್ಲಿದ್ದು, ಮೊದಲ ಪಂದ್ಯದ ವೇಳೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇತ್ತ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದರೂ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಏಕೆಂದರೆ ಮೂರು ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯವಾಗಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಬಳಗವನ್ನು ಸೇರಿಕೊಳ್ಳಬಹುದು.

ಇನ್ನು ಗುರುವಾರ ಟೀಮ್ ಇಂಡಿಯಾ ಆಟಗಾರರಿಗೆ ನಡೆಸಿದ ರ್ಯಾಪಿಸ್ಟ್ ಕೊರೋನಾ ಟೆಸ್ಟ್​ನಲ್ಲಿ ಎಲ್ಲರ ಫಲಿತಾಂಶ ನೆಗೆಟಿವ್ ಬಂದಿದ್ದು, ಹೀಗಾಗಿ ರೋಹಿತ್ ಶರ್ಮಾ, ದೀಪಕ್ ಚಹರ್ ಸೇರಿದಂತೆ ಕೆಲ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಇನ್ನು ಪಾಸಿಟಿವ್ ಬಂದಿರುವ ಆಟಗಾರರನ್ನು 7 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಲಾಗಿದ್ದು, ಆ ಬಳಿಕ ನಡೆಸಲಾಗುವ ಕೊರೋನಾ ಟೆಸ್ಟ್​ನಲ್ಲಿ ನೆಗೆಟಿವ್ ಬಂದರೆ ಮಾತ್ರ ತಂಡವನ್ನು ಕೂಡಿಕೊಳ್ಳಬಹುದು.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 6 – 1 ನೇ ODI, ಅಹಮದಾಬಾದ್

ಫೆಬ್ರವರಿ 9 – 2 ನೇ ODI, ಅಹಮದಾಬಾದ್

ಫೆಬ್ರವರಿ 11 – 3 ನೇ ODI, ಅಹಮದಾಬಾದ್

ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.

ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.

ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:

ಫೆಬ್ರವರಿ 16 – 1 ನೇ T20, ಕೋಲ್ಕತ್ತಾ

ಫೆಬ್ರವರಿ 18 – 2 ನೇ T20, ಕೋಲ್ಕತ್ತಾ

ಫೆಬ್ರವರಿ 20 – 3 ನೇ T20, ಕೋಲ್ಕತ್ತಾ

ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.

ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(IND vs WI ODI: Ishan Kishan added to ODI squad amid openers’ crisis)