IND vs WI: ಭಾರತ- ವಿಂಡೀಸ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಮಳೆ ಕಾಟ..?

|

Updated on: Jul 26, 2023 | 1:33 PM

IND vs WI Bridgetown Weather Forecast: ವಾಸ್ತವವಾಗಿ ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಮಳೆಯಿಂದ ರದ್ದಾಯಿತು. ಇದೀಗ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲ್ಲಿರುವ ಮೊದಲ ಏಕದಿನ ಪಂದ್ಯದ ಮೇಲು ಮಳೆಯ ಛಾಯೆ ಇದೆ.

IND vs WI: ಭಾರತ- ವಿಂಡೀಸ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಮಳೆ ಕಾಟ..?
ಬ್ರಿಡ್ಜ್‌ಟೌನ್ ಹವಾಮಾನ ವರದಿ
Image Credit source: insidesport
Follow us on

ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿ ಮುಗಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ (India and West Indies) ತಂಡಗಳು ಈಗ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲು ತಯಾರಿ ನಡೆಸುತ್ತಿವೆ. ಮೂರು ಪಂದ್ಯಗಳ ಏಕದಿನ ಸರಣಿಯೂ ಇದೇ ಗುರುವಾರ ಅಂದರೆ ಜುಲೈ 27 ರಂದು ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ (Kensington Oval in Bridgetown, Barbados) ನಡೆಯಲ್ಲಿರುವ ಮೊದಲ ಏಕದಿನ ಪಂದ್ಯದೊಂದಿಗೆ ಆರಂಭವಾಗಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿರುವ ವೆಸ್ಟ್ ಇಂಡೀಸ್ ತಂಡ, ಏಕದಿನ ಸರಣಿಯನ್ನು ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ವಿಶ್ವಕಪ್ ತಯಾರಿಯಾಗಿ ಈ ಸರಣಿಯನ್ನು ನೋಡುತ್ತಿರುವ ಟೀಂ ಇಂಡಿಯಾಕ್ಕೆ (Team India) ಈ ಏಕದಿನ ಸರಣಿಯ ಗೆಲುವು ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ.

ವಾಸ್ತವವಾಗಿ ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಮಳೆಯಿಂದ ರದ್ದಾಯಿತು. ಇದೀಗ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲ್ಲಿರುವ ಮೊದಲ ಏಕದಿನ ಪಂದ್ಯದ ಮೇಲು ಮಳೆಯ ಛಾಯೆ ಇದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಬ್ರಿಡ್ಜ್‌ಟೌನ್‌ನಲ್ಲಿ ಮಧ್ಯಂತರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

IND vs WI: ಮೊದಲ ಏಕದಿನ ಪಂದ್ಯಕ್ಕೆ ಶಾರ್ದೂಲ್ ಬದಲು ಮತ್ತೊಬ್ಬ ಆಲ್​ರೌಂಡರ್​ಗೆ ಅವಕಾಶ?

ಬ್ರಿಡ್ಜ್‌ಟೌನ್ ಹವಾಮಾನ ವರದಿ

AccuWeather ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಗುರುವಾರದಂದು ಬ್ರಿಡ್ಜ್‌ಟೌನ್​ನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ವರದಿಯಾಗಿದೆ. ಅಲ್ಲದೆ ಪಂದ್ಯದುದ್ದಕ್ಕೂ, ಸ್ವಲ್ಪಮಟ್ಟಿಗೆ ಅಂದರೆ ಶೇಕಡ 7ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮೋಡ ಕವಿದ ವಾತಾವರಣವಿರಲಿದೆ ಎಂದು ವರದಿಯಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್.

ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋತಿ, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್ ಮತ್ತು ಓಶೇನ್ ಥಾಮಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Wed, 26 July 23