ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ರುತುರಾಜ್, ಕಿಶನ್​; ಭಾರತ ತಂಡದಲ್ಲಿ ಸಿಗುತ್ತಾ ಅವಕಾಶ?

India tour of West Indies 2023: ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿರುವ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಅಭ್ಯಾಸ ಪಂದ್ಯದಲ್ಲಿ ನಿರಾಸೆ ಮೂಡಿಸಿದರು.

ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ರುತುರಾಜ್, ಕಿಶನ್​; ಭಾರತ ತಂಡದಲ್ಲಿ ಸಿಗುತ್ತಾ ಅವಕಾಶ?
ರುತುರಾಜ್ ಗಾಯಕ್ವಾಡ್, ಇಶನ್ ಕಿಶನ್
Follow us
TV9 Web
| Updated By: ಪೃಥ್ವಿಶಂಕರ

Updated on:Jul 08, 2023 | 11:01 AM

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ (ndia tour of West Indies 2023) ಡೊಮಿನಿಕಾಗೆ ತೆರಳಿದೆ. ಆದರೆ ಅದಕ್ಕೂ ಮುನ್ನ ಬಾರ್ಬಡೋಸ್​ನಲ್ಲಿ ವಾರದಿಂದ ಅಭ್ಯಾಸ ನಡೆಸಿದ್ದ ಭಾರತ, ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ತನ್ನದೇ ತಂಡದ ಆಟಗಾರರನ್ನು ಎರಡು ತಂಡಗಳಾಗಿ ಮಾಡಿ ಎರಡು ದಿನಗಳ ಅಭ್ಯಾಸ ಪಂದ್ಯ (warm-up match) ಆಡಿತ್ತು. ಇದರೊಂದಿಗೆ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸಿದ್ದ ಟೀಂ ಇಂಡಿಯಾ ಪರ ಹಲವರು ಉತ್ತಮ ಪ್ರದರ್ಶನ ನೀಡಿದರು. ಇದರಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಅರ್ಧಶತಕ ಇನ್ನಿಂಗ್ಸ್ ಆಡಿ ತಮ್ಮ ಹಳೆಯ ಲಯ ಕಂಡುಕೊಂಡಿದ್ದರು. ಆದರೆ ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli) ತಮ್ಮ ಹಳೆಯ ತಪ್ಪನ್ನು ಪುನಾರವರ್ತಿಸಿ ಬೇಗನೇ ಪೆವಿಲಿಯನ್​ಗೆ ಸೇರಿಕೊಂಡರೆ, ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿರುವ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ (Ruturaj Gaikwad, Ishan Kishan ) ಕೂಡ ನಿರಾಸೆ ಮೂಡಿಸಿದರು.

ಯುವ ಬ್ಯಾಟರ್​ಗಳಾದ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಂಡಿದ್ದು, ಇಶಾನ್ ಕಿಶನ್ ಕೂಡ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಸರತಿಯಲ್ಲಿದ್ದಾರೆ. ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಲು ಈ ಮೂವರಿಗೆ ಅಭ್ಯಾಸ ಪಂದ್ಯದಲ್ಲಿ ಮ್ಯಾನೇಜ್‌ಮೆಂಟ್‌ ಅವಕಾಶ ನೀಡಿತ್ತು. ಆದರೆ ಯಶಸ್ವಿ ಜೈಸ್ವಾಲ್ ಹೊರತುಪಡಿಸಿ, ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಆಯ್ಕೆ ಮಂಡಳಿಯಲ್ಲಿ ಮೆಚ್ಚಿಸುವಲ್ಲಿ ವಿಫಲರಾದರು.

IND vs WI 1st Test: ಮೊದಲ ಟೆಸ್ಟ್​ಗೆ ಭಾರತ ಸಜ್ಜು: 5 ದಿನಗಳ ಅಭ್ಯಾಸ ಮುಗಿಸಿ ಡೊಮಿನಿಕಾಗೆ ತೆರಳಿದ ಟೀಮ್ ಇಂಡಿಯಾ

ಯಶಸ್ವಿ ಅರ್ಧಶತಕ

ಜುಲೈ 7 ರಿಂದ ಆರಂಭವಾದ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದ ಯಶಸ್ವಿ ಅರ್ಧಶತಕ ಸಿಡಿಸಿ ಮಿಂಚಿದರು. ಪರಿಣಾಮವಾಗಿ ರೋಹಿತ್ ಬಳಗ 64 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 191 ರನ್ ಕಲೆ ಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಪ್ರತ್ಯುತ್ತರವಾಗಿ ರವಿಚಂದ್ರನ್ ಅಶ್ವಿನ್ ನೇತೃತ್ವದ ತಂಡ ಪಂದ್ಯ ನಿಲ್ಲುವ ವೇಳೆಗೆ 55 ಓವರ್‌ಗಳ ಬ್ಯಾಟಿಂಗ್ ಮಾಡಿ 6 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.

ರುತುರಾಜ್- ಕಿಶನ್ ವಿಫಲ

ಅಶ್ವಿನ್ ತಂಡದ ಪರ ಬಾರ್ಬಡೋಸ್ ಬ್ಯಾಟರ್ ಜಕಾರಿ ಮೆಕ್‌ಕಾಸ್ಕಿ ಮತ್ತು ರುತುರಾಜ್ ಗಾಯಕ್‌ವಾಡ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ರುತುರಾಜ್ 9 ಎಸೆತಗಳಲ್ಲಿ ಕೇವಲ 14 ರನ್ ಗಳಿಸಿ ಇನ್ನಿಂಗ್ಸ್ ಮುಗಿಸಿದರು. ಆರಂಭಿಕರಾಗಿ ಕಣಕ್ಕಿಳಿದಿದ್ದ ಗಾಯಕ್‌ವಾಡ್ ಎರಡು ಬೌಂಡರಿಗಳನ್ನು ಸಿಡಿಸಿ ಉತ್ತಮ ಆರಂಭ ಪಡೆದರು. ಆದರೆ ನವದೀಪ್ ಸೈನಿ ಎಸೆತದಲ್ಲಿ ವಿಕೆಟ್ ಕೀಪರ್ ಕೆಎಸ್ ಭರತ್​ಗೆ ಸುಲಭ ಕ್ಯಾಚ್ ನೀಡಿ ತಮ್ಮ ವಿಕೆಟ್ ಕಳೆದುಕೊಂಡರು. ರವಿಚಂದ್ರನ್ ಅಶ್ವಿನ್ ಇಲೆವೆನ್ ತಂಡದ ಪರ ಜಕಾರಿ 46 ಮತ್ತು ರಾಶಾನ್ ವೊರೆಲ್ 69 ಎಸೆತಗಳಲ್ಲಿ 52 ರನ್ ಬಾರಿಸಿ ಮಿಂಚಿದರು.

ಅವರೊಂದಿಗೆ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 36 ಎಸೆತಗಳಲ್ಲಿ 38 ರನ್ ಕಲೆ ಹಾಕಿದರು. ಆದರೆ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಸ್ಥಾನಕ್ಕೆ ಕಸರತ್ತು ಮಾಡುತ್ತಿರುವ ಇಶಾನ್ ಕಿಶನ್ ಉತ್ತಮ ಆರಂಭದ ಹೊರತಾಗಿಯೂ ದೊಡ್ಡ ಮೊತ್ತ ಗಳಿಸಲು ವಿಫಲರಾದರು. ತಮ್ಮ ಇನ್ನಿಂಗ್ಸ್​ನಲ್ಲಿ ಇಶಾನ್ 50 ಎಸೆತಗಳನ್ನು ಎದುರಿಸಿ ಮೂರು ಬೌಂಡರಿಗಳ ಸಹಾಯದಿಂದ 26 ರನ್ ಗಳಿಸಿ, ಮುಖೇಶ್ ಕುಮಾರ್​ಗೆ ಬಲಿಯಾದರು.

ಮುಖೇಶ್​ಗೆ ತಂಡದಲ್ಲಿ ಸ್ಥಾನ

ರೋಹಿತ್ ಶರ್ಮಾ ಇಲೆವೆನ್ ಪರ ಅನ್‌ಕ್ಯಾಪ್ಡ್ ವೇಗಿ ಮುಖೇಶ್ ಕುಮಾರ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರೆ, ಜಯದೇವ್ ಉನದ್ಕಟ್ ಮತ್ತು ನವದೀಪ್ ಸೈನಿ ವಿಕೆಟ್‌ಗಾಗಿ ಪರದಾಡಿದರು. ಇನ್ನು ಕಿಶನ್ ವಿಕೆಟ್ ಉರುಳಿಸಿದ ಮುಖೇಶ್ ಮೊದಲ ಟೆಸ್ಟ್‌ಗೆ ವೇಗದ ದಾಳಿಯಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರೊಂದಿಗೆ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬ್ಯಾಟಿಂಗ್‌ನಲ್ಲಿ ಯಶಸ್ವಿ ಜೈಸ್ವಾಲ್, ಚೇತೇಶ್ವರ ಪೂಜಾರ ಅವರಿಂದ ತೆರವಾದ 3ನೇ ಕ್ರಮಾಂಕದಲ್ಲಿ ಆಡಲಿದ್ದಾರಾ? ಅಥವಾ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Sat, 8 July 23

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ