IND vs WI Series: ಕೊನೇ ಕ್ಷಣದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಸ್ಪೋಟಕ ಬ್ಯಾಟರ್

| Updated By: ಝಾಹಿರ್ ಯೂಸುಫ್

Updated on: Feb 05, 2022 | 10:23 PM

IND vs WI Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಈ ಸರಣಿಯ ಮೂಲಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಏಕದಿನ ತಂಡದ ನಾಯಕರಾಗಿ ಪದಾರ್ಪಣೆ ಮಾಡಲಿದ್ದಾರೆ.

IND vs WI Series: ಕೊನೇ ಕ್ಷಣದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಸ್ಪೋಟಕ ಬ್ಯಾಟರ್
IND vs WI Series
Follow us on

ವೆಸ್ಟ್​ ಇಂಡೀಸ್ ವಿರುದ್ದದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ತಂಡದಲ್ಲಿದ್ದ ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶಿಖರ್ ಧವನ್ ಹಾಗೂ ನವದೀಪ್ ಸೈನಿ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಈ ಆಟಗಾರರನ್ನು ಇದೀಗ ಐಸೊಲೇಟ್ ಮಾಡಲಾಗಿದೆ. ಇತ್ತ ಆರಂಭಿಕ ಆಟಗಾರ ಶಿಖರ್ ಧವನ್ ಕೊರೋನಾ ಸೋಂಕಿಗೆ ಒಳಗಾಗಿರುವ ಕಾರಣ ಬದಲಿ ಆರಂಭಿಕ ಆಟಗಾರರಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್​​ ಹಾಗೂ ಎಡಗೈ ದಾಂಡಿಗ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಇದೀಗ ಶ್ರೇಯಸ್ ಅಯ್ಯರ್ ಅವರ ಸ್ಥಾನದಲ್ಲಿ ಮಧ್ಯಮ ಕ್ರಮಾಂಕದಲ್ಲಿ ತಮಿಳುನಾಡಿನ ಯುವ ಸ್ಪೋಟಕ ಬ್ಯಾಟ್ಸ್​ಮನ್​ ಶಾರೂಖ್​ ಖಾನ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಶಾರೂಖ್ ಈ ಹಿಂದೆ ತಂಡಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಶಾರೂಖ್ ಅವರನ್ನು ಟೀಮ್ ಇಂಡಿಯಾ ಬಳಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಅದರಂತೆ ಇದೀಗ ರುತುರಾಜ್ ಗಾಯಕ್ವಾಡ್, ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಅವರ ಜಾಗದಲ್ಲಿ ಮಯಾಂಕ್ ಅಗರ್ವಾಲ್, ಇಶಾನ್ ಕಿಶನ್ ಹಾಗೂ ಶಾರೂಖ್ ಖಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಕೊರೋನಾ ಪಾಸಿಟಿವ್ ಬಂದಿರುವ ಆಟಗಾರರನ್ನು 7 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಲಾಗಿದ್ದು, ಆ ಬಳಿಕ ನಡೆಸಲಾಗುವ ಕೊರೋನಾ ಟೆಸ್ಟ್​ನಲ್ಲಿ ನೆಗೆಟಿವ್ ಬಂದರೆ ಮಾತ್ರ ತಂಡವನ್ನು ಕೂಡಿಕೊಳ್ಳಬಹುದು. ಹೀಗಾಗಿ ಮೊದಲ ಏಕದಿನ ಮತ್ತು ಎರಡನೇ ಏಕದಿನ ಪಂದ್ಯದ ವೇಳೆಗೆ ರುತುರಾಜ್ ಗಾಯಕ್ವಾಡ್, ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಕಂಬ್ಯಾಕ್ ಮಾಡುವುದು ಅನುಮಾನ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಮೂವರು ಬದಲಿ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದಾಗ್ಯೂ ಸದ್ಯ ಮಯಾಂಕ್ ಅಗರ್ವಾಲ್ ಕ್ವಾರಂಟೈನ್​ನಲ್ಲಿದ್ದು, 2ನೇ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಈ ಸರಣಿಯ ಮೂಲಕ ರೋಹಿತ್ ಶರ್ಮಾ ಟೀಮ್ ಇಂಡಿಯಾ ಏಕದಿನ ತಂಡದ ನಾಯಕರಾಗಿ ಪದಾರ್ಪಣೆ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯವು ಟೀಮ್ ಇಂಡಿಯಾದ 1000ನೇ ಏಕದಿನ ಪಂದ್ಯ ಎಂಬುದು ವಿಶೇಷ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶೇಷ ಜಯವನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ ರೋಹಿತ್ ಪಡೆ.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 6 – 1 ನೇ ODI, ಅಹಮದಾಬಾದ್

ಫೆಬ್ರವರಿ 9 – 2 ನೇ ODI, ಅಹಮದಾಬಾದ್

ಫೆಬ್ರವರಿ 11 – 3 ನೇ ODI, ಅಹಮದಾಬಾದ್

ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶಾರೂಖ್ ಖಾನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.

ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.

ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:

ಫೆಬ್ರವರಿ 16 – 1 ನೇ T20, ಕೋಲ್ಕತ್ತಾ

ಫೆಬ್ರವರಿ 18 – 2 ನೇ T20, ಕೋಲ್ಕತ್ತಾ

ಫೆಬ್ರವರಿ 20 – 3 ನೇ T20, ಕೋಲ್ಕತ್ತಾ

ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.

ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(IND vs WI Series: After Ishan Kishan, Shahrukh Khan added to squad for 1st ODI)