IND vs WI: ಟೀಮ್ ಇಂಡಿಯಾಗೆ ಮತ್ತಿಬ್ಬರು ಹೊಸ ಆಟಗಾರರ ಆಯ್ಕೆ..!
ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್.
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies ODI) ನಡುವಣ ಸರಣಿ ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ODI ಮತ್ತು 3 T20 ಪಂದ್ಯಗಳನ್ನು ಆಡಲಾಗುತ್ತದೆ. ಈ ಸರಣಿಗಾಗಿ ಈಗಾಗಲೇ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇದಾಗ್ಯೂ ಕೊರೊನಾ ಭೀತಿಯನ್ನು ಗಮನದಲ್ಲಿರಿಸಿ ತಂಡಕ್ಕೆ ಮತ್ತಿಬ್ಬರನ್ನು ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟೀಮ್ ಇಂಡಿಯಾ ಸ್ಟ್ಯಾಂಡ್ಬೈ ಆಟಗಾರರಾಗಿ ತಮಿಳುನಾಡಿನ ಸ್ಪೋಟಕ ಬ್ಯಾಟರ್ ಶಾರುಖ್ ಖಾನ್ ಮತ್ತು ಸ್ಪಿನ್ನರ್ ಆರ್ ಸಾಯಿ ಕಿಶೋರ್ ತಂಡದ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಸಾಯಿ ಕಿಶೋರ್ ಹಾಗೂ ಶಾರೂಖ್ ಖಾನ್ ಈ ಬಾರಿಯ ಸೈಯದ್ ಮುಷ್ತಾಕ್ ಅಲಿ ಟೂರ್ನಿ ಹಾಗೂ ವಿಜಯ್ ಹಜಾರೆ ಟೂರ್ನಿಯಲ್ಲಿ ತಮಿಳುನಾಡುವ ಪರ ಭರ್ಜರಿ ಪ್ರದರ್ಶನ ನೀಡಿದ್ದರು. ಅದರಲ್ಲೂ ಶಾರೂಖ್ ಖಾನ್ ದೇಶೀಯ ಅಂಗಳದಲ್ಲಿ ಹೊಸ ಫಿನಿಶರ್ ಆಗಿ ಕಾಣಿಸಿಕೊಂಡಿದ್ದರು. ಹೀಗಾಗಿಯೇ ಈ ಇಬ್ಬರು ಯುವ ಆಟಗಾರರನ್ನು ಟೀಮ್ ಇಂಡಿಯಾ ಮೀಸಲು ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಇನ್ನು ಈ ಇಬ್ಬರಿಗೂ ಇದೇ ಮೊದಲ ಬಾರಿ ಟೀಮ್ ಇಂಡಿಯಾದಿಂದ ಬುಲಾವ್ ಸಿಗುತ್ತಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದರೂ ಅಚ್ಚರಿಪಡಬೇಕಿಲ್ಲ.
ಏಕೆಂದರೆ ಕೆಲ ದಿನಗಳ ಹಿಂದೆ ಶಾರೂಖ್ ಖಾನ್ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಫಿನಿಶರ್ ಪಾತ್ರವನ್ನು ನಿರ್ವಹಿಸುವ ಸಾಮರ್ಥ್ಯವಿರುವ ಶಾರುಖ್ ಆಗಲೇ ಆಯ್ಕೆಗಾರರ ರಾಡಾರ್‌ನಲ್ಲಿದ್ದರು. ಆದರೆ ಆಯ್ಕೆ ಸಮಿತಿ ಅಂತಿಮವಾಗಿ ಟೀಮ್ ಆಲ್ರೌಂಡರ್ ದೀಪಕ್ ಹೂಡಾಗೆ ಮಣೆಹಾಕಿದ್ದರು. ಇನ್ನು ಸಾಯಿ ಕಿಶೋರ್ ಆಯ್ಕೆಯಿಂದ ಟೀಮ್ ಇಂಡಿಯಾದ ನೆಟ್ ಬೌಲರ್ಗಳ ಕೊರತೆಯನ್ನೂ ಕೂಡ ನೀಗಿಸಬಹುದು. ಹೀಗಾಗಿ ಸಾಯಿ ಕಿಶೋರ್ ಹಾಗೂ ಶಾರೂಖ್ ಖಾನ್ರನ್ನು ಮೀಸಲು ಆಟಗಾರರನ್ನಾಗಿ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:
ಫೆಬ್ರವರಿ 6 – 1 ನೇ ODI, ಅಹಮದಾಬಾದ್
ಫೆಬ್ರವರಿ 9 – 2 ನೇ ODI, ಅಹಮದಾಬಾದ್
ಫೆಬ್ರವರಿ 11 – 3 ನೇ ODI, ಅಹಮದಾಬಾದ್
ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.
ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:
ಫೆಬ್ರವರಿ 16 – 1 ನೇ T20, ಕೋಲ್ಕತ್ತಾ
ಫೆಬ್ರವರಿ 18 – 2 ನೇ T20, ಕೋಲ್ಕತ್ತಾ
ಫೆಬ್ರವರಿ 20 – 3 ನೇ T20, ಕೋಲ್ಕತ್ತಾ
ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್
ಇದನ್ನೂ ಓದಿ: IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!
ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ
ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್
(IND vs WI: Shahrukh Khan, R Sai Kishore Included in India’s Squad as Stand-by Players)