IND vs WI: ‘ರಣಜಿಯನ್ನು ನಿಲ್ಲಿಸಿ’; ಬಿಸಿಸಿಐ ವಿರುದ್ಧ ಅಸಮಾಧಾನ ಹೊರಹಾಕಿದ ಗವಾಸ್ಕರ್

IND vs WI: ದೇಶೀಯ ಕ್ರಿಕೆಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸರ್ಫ್ರಾಜ್ ಖಾನ್ ಅವರಿಗೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸ್ಥಾನ ನೀಡಲಾಗಿಲ್ಲ. ಆಯ್ಕೆ ಮಂಡಳಿಯ ಈ ನಡೆ ಹಲವು ಮಾಜಿ ಕ್ರಿಕೆಟಿಗರ ಕಣ್ಣನ್ನು ಕೆಂಪಾಗಾಗಿಸಿದೆ.

IND vs WI: ‘ರಣಜಿಯನ್ನು ನಿಲ್ಲಿಸಿ’; ಬಿಸಿಸಿಐ ವಿರುದ್ಧ ಅಸಮಾಧಾನ ಹೊರಹಾಕಿದ ಗವಾಸ್ಕರ್
ಸುನಿಲ್ ಗವಾಸ್ಕರ್- ಸರ್ಫರಾಜ್ ಖಾನ್
Follow us
ಪೃಥ್ವಿಶಂಕರ
|

Updated on:Jun 24, 2023 | 10:28 AM

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾವನ್ನು (India Vs West Indies) ಪ್ರಕಟಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ (WTC Final 2023) ಪಂದ್ಯದಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ 3ನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಆರಂಭಿಸಲಿದೆ. ಇದರೊಂದಿಗೆ ಭವಿಷ್ಯದ ಭಾರತ ಟೆಸ್ಟ್ ತಂಡವನ್ನು ಕಟ್ಟುವ ಸಲುವಾಗಿ ಮೊದಲ ಹೆಜ್ಜೆ ಇಟ್ಟಿರುವ ಬಿಸಿಸಿಐ  (BCCI) ತಂಡದಲ್ಲಿ ಅನೇಕ ಯುವ ಆಟಗಾರರಿಗೆ ಅವಕಾಶ ನೀಡಿದೆ. ಹಾಗೆಯೇ ಫಾರ್ಮ್​ನಲ್ಲಿರದ ಅನುಭವಿ ಆಟಗಾರರಿಗೆ ತಂಡದಿಂದ ಗೇಟ್ ಪಾಸ್ ನೀಡಿದೆ. ಆದರೆ ದೇಶೀ ಸೀಸನ್​ನಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಅನೇಕ ಆಟಗಾರರಿಗೆ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಅಂತಹವರಲ್ಲಿ ಸರ್ಫರಾಜ್ ಖಾನ್ (Sarfaraz Khan), ಕನ್ನಡಿಗ ಮಯಾಂಕ್ ಅಗರ್ವಾಲ್, ಅಭಿಮನ್ಯು ಈಶ್ವರನ್​ನಂತಹ ಹಲವು ಆಟಗಾರರು ಸೇರಿದ್ದಾರೆ. ಮೊದಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ತಂಡದ ಆಯ್ಕೆಯಲ್ಲಿ ಎಡವಿದ್ದ ಆಯ್ಕೆ ಮಂಡಳಿ, ದೇಶೀ ಪ್ರತಿಭೆಗಳಿಗೆ ಅವಕಾಶ ನೀಡದಿರುವುದು ಟೀಂ ಇಂಡಿಯಾದ ಅಭಿಮಾನಿಗಳು ಹಾಗೂ ಮಾಜಿ ಕ್ರಿಕೆಟಿಗರನ್ನು ಕೆರಳಿಸಿದೆ.

ಯುವ ಟೆಸ್ಟ್ ತಂಡವನ್ನು ಕಟ್ಟುವ ಸಲುವಾಗಿ ಬಿಸಿಸಿಐ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್​ರಂತಹ ಪ್ರತಿಭಾವಂತ ಕ್ರಿಕೆಟಿಗರಿಗೆ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿದೆ. ಆದರೆ, ದೇಶೀಯ ಕ್ರಿಕೆಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸರ್ಫ್ರಾಜ್ ಖಾನ್ ಅವರಿಗೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸ್ಥಾನ ನೀಡಲಾಗಿಲ್ಲ. ಆಯ್ಕೆ ಮಂಡಳಿಯ ಈ ನಡೆ ಹಲವು ಮಾಜಿ ಕ್ರಿಕೆಟಿಗರ ಕಣ್ಣನ್ನು ಕೆಂಪಾಗಾಗಿಸಿದೆ. ಸರ್ಫರಾಜ್ ಖಾನ್​ಗೆ ತಂಡದಲ್ಲಿ ಸ್ಥಾನ ನೀಡದಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಸುನಿಲ್ ಗವಾಸ್ಕರ್, ಬಿಸಿಸಿಐ ಹಾಗೂ ಆಯ್ಕೆ ಸಮಿತಿಯನ್ನು ನೇರವಾಗಿ ಟೀಕಿಸಿದ್ದಾರೆ.

IND vs WI: ‘ಅಪ್ಪ ಕಣ್ಣೀರಿಟ್ಟರು’; ತಂಡಕ್ಕೆ ಆಯ್ಕೆಯಾದ ಬಗ್ಗೆ ಯಶಸ್ವಿ ಜೈಸ್ವಾಲ್ ಹೇಳಿದ್ದಿದು

ರಣಜಿಯನ್ನು ರದ್ದುಗೊಳಿಸಿ

ನೇರವಾಗಿ ಆಯ್ಕೆ ಸಮಿತಿಯ ಮಾನದಂಡದ ಮೇಲೆ ಅಸಮಾಧಾನ ಹೊರಹಾಕಿರುವ ಸುನಿಲ್ ಗವಾಸ್ಕರ್, ಐಪಿಎಲ್‌ನಲ್ಲಿನ ಪ್ರದರ್ಶನದ ಆಧಾರದ ಮೇಲೆ ಟೆಸ್ಟ್ ತಂಡವನ್ನು ಆಯ್ಕೆ ಮಾಡುವುದಾದರೆ, ರಣಜಿ ಟ್ರೋಫಿಯನ್ನು ನಿಲ್ಲಿಸಿ. ಐಪಿಎಲ್ ಒಂದೇ ಮಾನದಂಡವಾದರೆ, ಮೂರು ರಣಜಿ ಸೀಸನ್​ಗಳಲ್ಲಿ 100ರ ಸರಾಸರಿಯಲ್ಲಿ ರನ್ ಕಲೆಹಾಕಿರುವ ಸರ್ಫ್ರಾಜ್ ಖಾನ್ ಎಲ್ಲಿಗೆ ಹೋಗಬೇಕು. ಈಗ ಅವರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಏನು ಮಾಡಬೇಕು?. ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗದಿದ್ದರೂ ಪರವಾಗಿಲ್ಲ. ಕನಿಷ್ಠ ಪಕ್ಷ ಅವರನ್ನು ತಂಡಕ್ಕಾದರು ಆಯ್ಕೆ ಮಾಡಬೇಕು ಅಲ್ಲವೇ? ಎಂದಿದ್ದಾರೆ.

ಸರ್ಫರಾಜ್​ಗೆ ಸ್ಪಷ್ಟವಾಗಿ ಹೇಳಿಬಿಡಿ

ಪ್ರತಿ ರಣಜಿ ಸೀಸನ್​ಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗುವ ಕನಸು ಕಾಣುತ್ತಿರುವ ಸರ್ಫರಾಜ್​ಗೆ ನಾವು ನಿನ್ನ ರಣಜಿ ಪ್ರದರ್ಶನವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿಬಿಡಿ. ಇಲ್ಲದಿದ್ದರೆ, ರಣಜಿ ಟ್ರೋಫಿಯನ್ನು ಆಡಿಸುವುದನ್ನು ನಿಲ್ಲಿಸಿ. ನೀವು ಐಪಿಎಲ್ ಪ್ರದರ್ಶನವನ್ನು ಮಾತ್ರ ನೋಡುತ್ತೀರಿ. ಚುಟುಕು ಮಾದಿಯಲ್ಲಿ ನೀಡಿದ ಪ್ರದರ್ಶನ ರೆಡ್ ಬಾಲ್ ಕ್ರಿಕೆಟ್‌ ಆಯ್ಕೆಗೆ ಸೂಕ್ತ ಎಂದು ನೀವು ಭಾವಿಸುತ್ತಿದ್ದೀರಿ ಎಂದು ಗವಾಸ್ಕರ್ ಬಿಸಿಸಿಐ ವಿರುದ್ಧ ಗುಡುಗಿದ್ದಾರೆ.

ದೇಶೀ ಕ್ರಿಕೆಟ್​ನಲ್ಲಿ ಸರ್ಫರಾಜ್ ಸೂಪರ್ ಬ್ಯಾಟಿಂಗ್

ಸರ್ಫರಾಜ್ ಖಾನ್ ಇದುವರೆಗೆ 37 ಪ್ರಥಮ ದರ್ಜೆ ಪಂದ್ಯಗಳಲ್ಲಿ 3505 ರನ್ ಗಳಿಸಿದ್ದಾರೆ. ಇದರಲ್ಲಿ 13 ಶತಕ ಮತ್ತು 9 ಅರ್ಧಶತಕಗಳು ಸೇರಿವೆ. 79.65 ಸರಾಸರಿಯಲ್ಲಿ ರನ್ ಕಲೆ ಹಾಕಿರುವ ಸರ್ಫರಾಜ್, ವೈಯಕ್ತಿಕವಾಗಿ 301 ರನ್​ಗಳ ಅತ್ಯಧಿಕ ರನ್ ಕೂಡ ಬಾರಿಸಿದ್ದಾರೆ. ಇಷ್ಟೊಂದು ಉತ್ತಮ ದಾಖಲೆ ಇದ್ದರೂ ಸರ್ಫರಾಜ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಿಲ್ಲ.

ಟೆಸ್ಟ್ ಸರಣಿ ವೇಳಾಪಟ್ಟಿ

ಮೊದಲ ಟೆಸ್ಟ್ – ಜುಲೈ 12 ರಿಂದ 16, ಡೊಮಿನಿಕಾ

ಎರಡನೇ ಟೆಸ್ಟ್ – ಜುಲೈ 20 ರಿಂದ 24, ಪೋರ್ಟ್ ಆಫ್ ಸ್ಪೇನ್

ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Sat, 24 June 23

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM