Suryakumar Yadav: 146 ಕಿ.ಮೀ ವೇಗದ ಎಸೆತಕ್ಕೆ ಭಯಂಕರ ಸಿಕ್ಸ್ ಸಿಡಿಸಿದ ಸೂರ್ಯ

Suryakumar Yadav: 31ರ ಹರೆಯದ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ದಾಖಲೆ ಅತ್ಯುತ್ತಮವಾಗಿದೆ. ಈ ಪಂದ್ಯಕ್ಕೂ ಮುನ್ನ ಅವರು 19 ಪಂದ್ಯಗಳ 17 ಇನ್ನಿಂಗ್ಸ್‌ಗಳಲ್ಲಿ 38ರ ಸರಾಸರಿಯಲ್ಲಿ 537 ರನ್ ಗಳಿಸಿದ್ದಾರೆ.

Suryakumar Yadav: 146 ಕಿ.ಮೀ ವೇಗದ ಎಸೆತಕ್ಕೆ ಭಯಂಕರ ಸಿಕ್ಸ್ ಸಿಡಿಸಿದ ಸೂರ್ಯ
Suryakumar Yadav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 30, 2022 | 1:23 PM

ಭಾರತ-ವೆಸ್ಟ್ ಇಂಡೀಸ್ (IND vs WI) ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾದಿತ್ತು. ಅದೇನೆಂದರೆ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (Suryakumar Yadav) ಆರಂಭಿಕರಾಗಿ ಕಾಣಿಸಿಕೊಂಡಿದ್ದರು. ತಂಡದಲ್ಲಿ ಹಲವು ಆರಂಭಿಕ ಆಟಗಾರರಿದ್ದರೂ ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವ ಮೂಲಕ ಗಮನ ಸೆಳೆದರು. ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ಯತ್ನಿಸಿದ ಸೂರ್ಯ ಕುಮಾರ್ ಯಾದವ್ ಅತ್ಯುತ್ತಮ ಶಾಟ್​ಗಳನ್ನು ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು.

ಅದರಲ್ಲೂ ಅಲ್ಝಾರಿ ಜೋಸೆಫ್ ಎಸೆದ ನಾಲ್ಕನೇ ಓವರ್​ನ 2ನೇ ಎಸೆತದಲ್ಲಿ ವಿಚಿತ್ರ ಶಾಟ್ ಮೂಲಕ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಅಲ್ಝಾರಿ ಎಸೆದ 146 ಕಿಮೀ ವೇಗದ ಬಾಲ್​ ಅನ್ನು ಸೂರ್ಯಕುಮಾರ್ ಯಾದವ್ ಲಾಂಗ್ ಲೆಗ್ ನಲ್ಲಿ ವಿಶಿಷ್ಟವಾಗಿ ಸಿಕ್ಸರ್ ಬಾರಿಸಿ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದರು. ಇದಾಗ್ಯೂ ದೀರ್ಘ ಇನಿಂಗ್ಸ್​ ಆಡುವಲ್ಲಿ ಸೂರ್ಯಕುಮಾರ್ ಯಾದವ್ ವಿಫಲರಾದರು. ಕೇವಲ 16 ಎಸೆತಗಳಲ್ಲಿ 3 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 24 ರನ್​ ಬಾರಿಸಿ ಸೂರ್ಯಕುಮಾರ್ ಯಾದವ್ ವಿಕೆಟ್ ಒಪ್ಪಿಸಿದ್ದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

31ರ ಹರೆಯದ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ದಾಖಲೆ ಅತ್ಯುತ್ತಮವಾಗಿದೆ. ಈ ಪಂದ್ಯಕ್ಕೂ ಮುನ್ನ ಅವರು 19 ಪಂದ್ಯಗಳ 17 ಇನ್ನಿಂಗ್ಸ್‌ಗಳಲ್ಲಿ 38ರ ಸರಾಸರಿಯಲ್ಲಿ 537 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 4 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು ಐಪಿಎಲ್‌ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅವರ ಒಟ್ಟಾರೆ T20 ವೃತ್ತಿಜೀವನದ ಅಂಕಿ ಅಂಶಗಳನ್ನು ನೋಡುವುದಾದರೆ, 213 ಪಂದ್ಯಗಳ 191 ಇನ್ನಿಂಗ್ಸ್‌ಗಳಲ್ಲಿ 32 ರ ಸರಾಸರಿಯಲ್ಲಿ 4760 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 28 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 490 ಕ್ಕೂ ಹೆಚ್ಚು ಬೌಂಡರಿಗಳು ಮತ್ತು 170 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿ ಸೂರ್ಯಕುಮಾರ್ ಯಾದವ್ ಮಿಂಚಿದ್ದಾರೆ. ಇದೀಗ ಆರಂಭಿಕನಾಗಿ ಕಣಕ್ಕಿಳಿಯುವ ಮೂಲಕ ಸೂರ್ಯಕುಮಾರ್ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್