Suryakumar Yadav: 5 ಇನಿಂಗ್ಸ್​ ಮೂಲಕ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

India vs West Indies: ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ಇದುವರೆಗೆ 5 ಪಂದ್ಯಗಳನ್ನಾಡಿದ್ದಾರೆ. ವಿಶೇಷ ಎಂದರೆ ಈ ಎಲ್ಲಾ 5 ಇನ್ನಿಂಗ್ಸ್‌ಗಳಲ್ಲಿ 30 ಪ್ಲಸ್ ಗಳಿಸಿದ್ದಾರೆ.

Suryakumar Yadav: 5 ಇನಿಂಗ್ಸ್​ ಮೂಲಕ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Suryakumar Yadav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 07, 2022 | 2:32 PM

ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಆಲ್ ರೌಂಡ್ ಆಟದ ಮುಂದೆ ವೆಸ್ಟ್ ಇಂಡೀಸ್ ತಂಡವು ಮುಗ್ಗರಿಸಿದೆ. ಅದರಂತೆ ಟೀಮ್ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾರತದ ಈ ಗೆಲುವಿಗೆ ಎಲ್ಲಾ ಆಟಗಾರರು ಕೊಡುಗೆ ನೀಡಿದ್ದಾರೆ. ಭಾರತದ ಸ್ಪಿನ್ನರ್‌ಗಳು ಚೆಂಡಿನೊಂದಿಗೆ ಕೊಡುಗೆ ನೀಡಿದರೆ, ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು . ಈ ಆರಂಭವನ್ನು ಸೂರ್ಯಕುಮಾರ್ ಯಾದವ್ ಅಂತ್ಯಗೊಳಿಸಿದರು. ಸೂರ್ಯಕುಮಾರ್ ಯಾದವ್ – ದೀಪಕ್ ಹೂಡಾ ಜೊತೆಗೂಡಿ 5ನೇ ವಿಕೆಟ್‌ಗೆ 62 ರನ್‌ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟ ಆಡಿದರು.

ಈ ವೇಳೆ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡಂತೆ 34 ರನ್ ಬಾರಿಸಿದರು. ಈ ಇನ್ನಿಂಗ್ಸ್​ನೊಂದಿಗೆ ಸೂರ್ಯಕುಮಾರ್ ಅವರ ಹೆಸರಿಗೆ ದಾಖಲೆಯೊಂದು ಸೇರ್ಪಡೆಯಾಗಿದೆ. ಇಂತಹ ಸಾಧನೆ ಮಾಡಿರುವುದು ಭಾರತದ ಏಕೈಕ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೂ ಸೂರ್ಯಕುಮಾರ್ ಪಾತ್ರರಾಗಿದ್ದಾರೆ.

ಇತ್ತೀಚೆಗಷ್ಟೇ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ಇದುವರೆಗೆ 5 ಪಂದ್ಯಗಳನ್ನಾಡಿದ್ದಾರೆ. ವಿಶೇಷ ಎಂದರೆ ಈ ಎಲ್ಲಾ 5 ಇನ್ನಿಂಗ್ಸ್‌ಗಳಲ್ಲಿ 30 ಪ್ಲಸ್ ಗಳಿಸಿದ್ದಾರೆ. ಹೀಗೆ ಆಡಿದ ಮೊದಲ ಐದು ಇನಿಂಗ್ಸ್​ನಲ್ಲಿ 30+ ರನ್​ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಬರೆದಿದ್ದಾತೆ.

ಶ್ರೀಲಂಕಾ​ ವಿರುದ್ದದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಇದುವರೆಗೆ 5 ಇನ್ನಿಂಗ್ಸ್‌ಗಳಲ್ಲಿ 31*, 53, 40, 39 ಮತ್ತು 34* ರನ್ ಗಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಹಾಗೂ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಈ ದಾಖಲೆ ಮಾಡಿದ ವಿಶ್ವದ 5ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಇದಕ್ಕೂ ಮುನ್ನ ಇಂಗ್ಲೆಂಡ್‌ನ ಜೋ ರೂಟ್, ಪಾಕಿಸ್ತಾನದ ಫಖರ್ ಜಮಾನ್, ನೆದರ್‌ಲ್ಯಾಂಡ್‌ನ ರಿಯಾನ್ ಡಸ್ ಕೇಟ್ ಮತ್ತು ಆಸ್ಟ್ರೇಲಿಯಾದ ಟಾಮ್ ಕೂಪರ್ ಈ ದಾಖಲೆ ಬರೆದಿದ್ದರು. ಹಾಗೆಯೇ ಮೊದಲ ಐದು ಇನಿಂಗ್ಸ್​ಗಳಲ್ಲಿ 30+ ರನ್​ಗಳಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಭಾರತದ ಮಾಜಿ ಆರಂಭಿಕ ಆಟಗಾರ ನವಜೋತ್ ಸಿಂಗ್ ಸಿಧು ಅವರ ದಾಖಲೆಯನ್ನು ಮುರಿದಿದ್ದಾರೆ. ಸಿಧು ಸತತ 4 ಇನ್ನಿಂಗ್ಸ್‌ಗಳಲ್ಲಿ 30 ಪ್ಲಸ್ ರನ್ ಗಳಿಸಿದ್ದರು. ಇದೀಗ ಸೂರ್ಯಕುಮಾರ್ ಮೊದಲ 5 ಇನಿಂಗ್ಸ್​ನಲ್ಲಿ 30+ ರನ್​ ಬಾರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(IND vs WI: Suryakumar Yadav became the first Indian to score five 30+ scores first five ODI innings)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್