ಬುಧವಾರ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಟಿ20 ಸರಣಿಗೆ ಚಾಲನೆ ಸಿಗಲಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ನಾಳೆ (ಫೆ. 16) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮೊದಲ ಟಿ20 ಕದನ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ (Team India) ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಕೆಎಲ್ ರಾಹುಲ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಸರಣಿ ಆರಂಭಕ್ಕೂ ಮುನ್ನವೇ ಹೊರಬಿದ್ದಿರುವುದು ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ. ಆದರೆ, ರುತುರಾಜ್ ಗಾಯಕ್ವಾಡ್, ದೀಪಕ್ ಹೂಡ್ ಮತ್ತು ಕುಲ್ದೀಪ್ ಯಾದವ್ ಹೊಸದಾಗಿ ತಂಡ ಸೇರಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುದ್ದಿಗೊಷ್ಠಿ ನಡೆಸಲಿದ್ದಾರೆ. ಈ ಸಂದರ್ಭ ಮೊದಲ ಟಿ20 ಪಂದ್ಯದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಪತ್ರಿಕಾಗೋಷ್ಠಿಯಲ್ಲಿ ನಾಯಕನಿಗೆ ಎದುರಾಗಬಹುದಾದ ಕೆಲ ಪ್ರಶ್ನೆಗಳನ್ನು ನೋಡುವುದಾದರೆ…
ಹೀಗೆ ಇಂದಿನ ಸುದ್ದಿಗೋಷ್ಠಿಯಲ್ಲಿ ರೋಹಿತ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುವ ನಿರೀಕ್ಷೆಯಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎದ್ದರೂ ಅಚ್ಚರಿ ಪಡಬೇಕಿಲ್ಲ. ಇತ್ತೀಚೆಗಷ್ಟೆ ಹಿಟ್ಮ್ಯಾನ್ ಈ ಪ್ರಶ್ನೆಗೆ ಖಡಕ್ ಆಗಿ ಉತ್ತರ ನೀಡಿದ್ದರು. ಕೊಹ್ಲಿ ಸಾಲುಸಾಲು ಕಳಪೆ ಪ್ರದರ್ಶನವನ್ನು ನೀಡುತ್ತಿದ್ದು ಆತ್ಮ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆ ರೋಹಿತ್ಗೆ ಸುದ್ದಿಗೋಷ್ಠಿಯಲ್ಲಿ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಅವರು, “ವಿರಾಟ್ ಕೊಹ್ಲಿಗೆ ವಿಶ್ವಾಸ ಪಡೆದುಕೊಳ್ಳಬೇಕಾದ ಅಗತ್ಯವಿದೆ? ನೀವೇನು ಮಾತಾಡುತ್ತಿದ್ದೀರಿ, ಆತ ಶತಕ ಬಾರಿಸದೇ ಇರುವುದು ಸಮಸ್ಯೆಯಲ್ಲ ಎಂದು ನಾನು ಭಾವಿಸುತ್ತೇನೆ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸರಣಿಯಲ್ಲಿ 3 ಪಂದ್ಯಗಳ ಪೈಕಿ 2 ಅರ್ಧಶತಕಗಳನ್ನು ಕೊಹ್ಲಿ ಬಾರಿಸಿದ್ದಾರೆ. ಕೊಹ್ಲಿ ಫಾರ್ಮ್ ವಿಷಯದಲ್ಲಿ ನನಗೆ ಯಾವುದೇ ರೀತಿಯ ತಪ್ಪು ಕಾಣಿಸುತ್ತಿಲ್ಲ ಮತ್ತು ಟೀಮ್ ಮ್ಯಾನೇಜ್‌ಮೆಂಟ್ ಕೂಡ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ,” ಎಂದು ಉತ್ತರಿಸಿದ್ದರು.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ 3 ಪಂದ್ಯಗಳು ಸಹ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲನೇ ಫೆಬ್ರವರಿ 16 ಬುಧವಾರದಂದು ನಡೆದರೆ, ಎರಡನೇ ಟಿ20 ಫೆಬ್ರವರಿ 18 ಶುಕ್ರವಾರದಂದು ಆಯೋಜಿಸಲಾಗಿದೆ. ಅಂತೆಯೆ ಅಂತಿಮ ಮೂರನೇ ಟಿ20 ಫೆಬ್ರವರಿ 20 ಭಾನುವಾರದಂದು ಜರುಗಲಿದೆ. ಎಲ್ಲ ಪಂದ್ಯ ಸಂಜೆ 7 ಗಂಟೆಗೆ ಶುರುವಾಗಲಿದೆ.
IND vs WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಉಪ ನಾಯಕನ ಘೋಷಣೆ: ಯಾರು ಗೊತ್ತೇ?
Washington Sundar: ಸುಂದರ್ ಜಾಗಕ್ಕೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡ ಸ್ಟಾರ್ ಪ್ಲೇಯರ್