IND vs WI: 6 ಆಟಗಾರರು ಔಟ್, ಐವರು ಇನ್; ಭಾರತ ಟಿ20 ತಂಡದಲ್ಲಾಗಿರುವ ಬದಲಾವಣೆಗಳಿವು

IND vs WI: ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ಆಡಿದ ಹಲವು ಆಟಗಾರರು ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಅವರಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ.

IND vs WI: 6 ಆಟಗಾರರು ಔಟ್, ಐವರು ಇನ್; ಭಾರತ ಟಿ20 ತಂಡದಲ್ಲಾಗಿರುವ ಬದಲಾವಣೆಗಳಿವು
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Aug 02, 2023 | 10:24 AM

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ (India vs West Indies) ಇದೀಗ, ಎರಡು ಬಾರಿಯ ಟಿ20 ವಿಶ್ವಕಪ್ (T20 World Cup) ವಿಜೇತರನ್ನು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಎದುರಿಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಆಗಸ್ಟ್ 3 ರ ಗುರುವಾರದಂದು ನಡೆಯಲ್ಲಿದೆ. ಮೊದಲ ಟಿ20 ಪಂದ್ಯ ಟ್ರಿನಿಡಾಡ್‌ನ ತರೋಬಾದಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ (Brian Lara Stadium in Tarouba, Trinidad) ನಡೆಯಲಿದ್ದು, ಸರಣಿಯ ಎರಡನೇ ಮತ್ತು ಮೂರನೇ ಪಂದ್ಯ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಹಾಗೆಯೇ ಅಂತಿಮ ಎರಡು ಪಂದ್ಯಗಳಿಗಾಗಿ, ಎರಡೂ ತಂಡಗಳು ಫ್ಲೋರಿಡಾಕ್ಕೆ ಪ್ರಯಾಣಿಸಲಿವೆ. ಅಲ್ಲಿ ಲಾಡರ್‌ಹಿಲ್‌ನಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ ಉಭಯ ತಂಡಗಳ ಕೊನೆಯ ಎರಡು ಕದನಕ್ಕೆ ಆತಿಥ್ಯವಹಿಸಲಿದೆ.

ಟೆಸ್ಟ್ ಮತ್ತು ಏಕದಿನದಲ್ಲಿ ಬಲಹೀನ ತಂಡವೆಂದು ಕರೆಸಿಕೊಳ್ಳುವ ವೆಸ್ಟ್ ಇಂಡೀಸ್ ತಂಡ ಟಿ20 ಮಾದರಿಯಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಈ ಸರಣಿಗಾಗಿ ವಿಂಡೀಸ್ ಮಂಡಳಿ 15 ಸದಸ್ಯರ ತಂಡವನ್ನು ಸಹ ಪ್ರಕಟಿಸಿದೆ. ಟೀಂ ಇಂಡಿಯಾ ಕೂಡ ಈ ಸರಣಿಗಾಗಿ ಈಗಾಗಲೇ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಯುವ ಆಟಗಾರರ ದಂಡೆ ಇದೆ. ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ಆಡಿದ ಹಲವು ಆಟಗಾರರು ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಅವರಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ.

IND vs WI: ಭಾರತ- ವಿಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿ ಯಾವಾಗ ಆರಂಭ? ಇಲ್ಲಿದೆ ಪೂರ್ಣ ವಿವರ

ಹೀಗಾಗಿ ಟೀಂ ಇಂಡಿಯಾ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದೆ. ಏಕದಿನ ತಂಡದ ಭಾಗವಾಗಿದ್ದ ಆರು ಆಟಗಾರರು ಇದೀಗ ಭಾರತಕ್ಕೆ ಮರಳಲಿದ್ದು, ಐದು ಆಟಗಾರರು ಹೊಸದಾಗಿ ಟಿ20 ತಂಡ ಸೇರಿಕೊಳ್ಳಲಿದ್ದಾರೆ. ಅವರಲ್ಲಿ ಇಬ್ಬರು ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಟಿ20 ತಂಡಕ್ಕೆ ಆಯ್ಕೆಯಾಗಿದ್ದು, ಟ್ರಿನಿಡಾಡ್‌ನಲ್ಲಿ ಉಳಿದ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಟಿ20 ತಂಡಕ್ಕೆ ಹೊಸ ಎಂಟ್ರಿ

ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಮೊದಲ ಬಾರಿಗೆ ಟಿ20 ತಂಡದಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಟಿ20 ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಅವರಲ್ಲದೆ ತಿಲಕ್ ವರ್ಮಾ ಕೂಡ ಮೊದಲ ಬಾರಿಗೆ ಟಿ20 ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಇಬ್ಬರ ಜೊತೆಗೆ 2020 ರ ಅಂಡರ್19 ವಿಶ್ವಕಪ್‌ನಲ್ಲಿ ಆಡಿರುವ ರವಿ ಬಿಷ್ಣೋಯ್, ಸುದೀರ್ಘ ಸಮಯದ ನಂತರ ಟಿ20 ತಂಡಕ್ಕೆ ಮರಳಿದ್ದಾರೆ. ಹಾಗೆಯೇ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ಕೂಡ ಟಿ20 ತಂಡವನ್ನು ಸೇರಿಕೊಂಡಿದ್ದಾರೆ.

ಟಿ20 ತಂಡದಿಂದ ಯಾರ್ಯಾರಿಗೆ ಕೋಕ್?

ಕೆಲವು ತಿಂಗಳುಗಳಿಂದ ಭಾರತ ಟಿ20 ತಂಡದಿಂದ ಹೊರಗುಳಿದಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೊಮ್ಮೆ ಭಾರತ ಟಿ20 ತಂಡದಲ್ಲಿ ಆಯ್ಕೆಯಾಗಿಲ್ಲ. ಇವರಲ್ಲದೆ, ವೆಸ್ಟ್ ಇಂಡೀಸ್ ವಿರುದ್ಧದ ಎಲ್ಲಾ ಮೂರು ಏಕದಿನ ಪಂದ್ಯಗಳಲ್ಲಿ ಆಡಿದ ಸ್ಟಾರ್ ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್, ಅಗ್ರ ಕ್ರಮಾಂಕದ ಬ್ಯಾಟರ್ ರುತುರಾಜ್ ಗಾಯಕ್‌ವಾಡ್ ಮತ್ತು ವೇಗಿ ಜಯದೇವ್ ಉನದ್ಕಟ್ ಸಹ ಟಿ20 ತಂಡದ ಭಾಗವಾಗಿಲ್ಲ. ಗಾಯಕ್ವಾಡ್ ಮತ್ತು ಉನದ್ಕತ್ ಟೆಸ್ಟ್ ಮತ್ತು ಏಕದಿನ ತಂಡಗಳ ಭಾಗವಾಗಿದ್ದರು. ಆದರೆ ಅವರಿಗೆ ಎರಡೂ ಸರಣಿಗಳಲ್ಲೂ ಹೆಚ್ಚು ಅವಕಾಶ ಸಿಗಲಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ಸಂಭಾವ್ಯ ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಉಮ್ರಾನ್ ಮಲಿಕ್

ಟಿ20 ಸರಣಿಗೆ ಭಾರತ ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಾಲ್, ತಿಲಕ್ ವರ್ಮಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Wed, 2 August 23

ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್