IND vs WI: ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಿಂದ ಹೊರಗುಳಿದ ಕೆಎಲ್ ರಾಹುಲ್

| Updated By: ಝಾಹಿರ್ ಯೂಸುಫ್

Updated on: Jan 27, 2022 | 5:16 PM

India vs West Indies: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್.

IND vs WI: ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಿಂದ ಹೊರಗುಳಿದ ಕೆಎಲ್ ರಾಹುಲ್
KL Rahul
Follow us on

ಮುಂದಿನ ತಿಂಗಳು ಫೆಬ್ರವರಿ 6 ರಿಂದ ಶುರುವಾಗಲಿರುವ ವೆಸ್ಟ್ ಇಂಡೀಸ್​ ವಿರುದ್ದದ ಸರಣಿಗಾಗಿ ಈಗಾಗಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ತಂಡದ ಉಪನಾಯಕನ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದ್ದು, ಅದರಂತೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ. ಆದರೆ ಫೆಬ್ರವರಿ 6 ರಂದು ನಡೆಯಲಿರುವ ಮೊದಲ ಪಂದ್ಯದಿಂದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ಚೊಚ್ಚಲ ನಾಯಕತ್ವದಲ್ಲಿ ಹೀನಾಯ ಸೋಲಿನ ರುಚಿ ನೋಡಿದ್ದರು. ಆಡಿದ ಮೂರು ಪಂದ್ಯಗಳನ್ನು ಗೆಲ್ಲುವ ಸೌತ್ ಆಫ್ರಿಕಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇನ್ನು ಈ ಸರಣಿಯಲ್ಲಿ ಕೆಎಲ್ ರಾಹುಲ್ ಅವರ ಪ್ರದರ್ಶನ ಕೂಡ ಉತ್ತಮವಾಗಿರಲಿಲ್ಲ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾದ ಬಹುತೇಕ ಆಟಗಾರರು ಫಾರ್ಮ್​ ಕಂಡುಕೊಳ್ಳಬೇಕಿದೆ.

ಆದರೆ ವಿಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲು ಕೆಎಲ್ ರಾಹುಲ್ ನಿರ್ಧರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಕೆಎಲ್ ರಾಹುಲ್ ಅವರು ಈ ಪಂದ್ಯದ ವೇಳೆ ತಂಡದ ಜೊತೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಅದರಂತೆ 2ನೇ ಏಕದಿನ ಪಂದ್ಯದ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದಾಗ್ಯೂ ಅಷ್ಟೇ ಅಲ್ಲದೆ ಉಳಿದ ಎಲ್ಲಾ ಪಂದ್ಯಗಳಲ್ಲೂ ರಾಹುಲ್ ಆಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಸದ್ಯ ಟೀಮ್ ಇಂಡಿಯಾ ಉಪನಾಯಕರಾಗಿರುವ ಕೆಎಲ್ ರಾಹುಲ್ ಏಕದಿನ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ. ಏಕೆಂದರೆ ಆರಂಭಿಕನಾಗಿ ತಂಡಕ್ಕೆ ಶಿಖರ್ ಧವನ್ ಮರಳಿದ್ದು, ಹೀಗಾಗಿ ರಾಹುಲ್ ಮಿಡಲ್ ಆರ್ಡರ್​ನಲ್ಲಿ ಬ್ಯಾಟ್ ಬೀಸಬಹುದು. ಇದಾಗ್ಯೂ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನ್ನಬಹುದು.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ

6 ಫೆಬ್ರವರಿ: 1ನೇ ODI, ಅಹಮದಾಬಾದ್

ಫೆಬ್ರವರಿ 9: 2ನೇ ODI, ಅಹಮದಾಬಾದ್

ಫೆಬ್ರವರಿ 11: 3ನೇ ODI, ಅಹಮದಾಬಾದ್

ಟಿ20 ಸರಣಿ ವೇಳಾಪಟ್ಟಿ:

16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ

ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ

ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ

ಇದನ್ನೂ ಓದಿ:  IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(IND vs WI: Team India Vice-captain KL Rahul will miss the first ODI)