AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 4ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ? ಇಲ್ಲಿದೆ ಸಂಭಾವ್ಯ ತಂಡ

IND vs WI: ಯಾವುದೇ ತಂಡ ಸತತ ಎರಡು ಪಂದ್ಯಗಳಲ್ಲಿ ಸೋತ ನಂತರ ಸತತ ಮೂರು ಪಂದ್ಯಗಳನ್ನು ಗೆಲ್ಲುವುದು ಸುಲಭವಲ್ಲದಿದ್ದರೂ, ಮೂರನೇ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಈ ಹಿಂದೆಯೂ ಈ ರೀತಿಯ ಪ್ರದರ್ಶನ ನೀಡಿದೆ. ಇತ್ತ ಟೆಸ್ಟ್ ಹಾಗೂ ಏಕದಿನ ಸರಣಿ ಸೋತಿರುವ ವೆಸ್ಟ್ ಇಂಡೀಸ್ ಕೂಡ ಟಿ20 ಸರಣಿಯನ್ನಾದರೂ ತನ್ನ ಬುಟ್ಟಿಗೆ ಹಾಕಿಕೊಳ್ಳಲು ಪ್ರಯತ್ನಿಸಲಿದೆ.

IND vs WI: 4ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ? ಇಲ್ಲಿದೆ ಸಂಭಾವ್ಯ ತಂಡ
ಟೀಂ ಇಂಡಿಯಾImage Credit source: insidesport
ಪೃಥ್ವಿಶಂಕರ
|

Updated on:Aug 11, 2023 | 12:51 PM

Share

ಭಾರತ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ (India vs West Indies) ಪ್ರವಾಸದಲ್ಲಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗವಹಿಸುತ್ತಿದೆ. ಈ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತ ಟೀಂ ಇಂಡಿಯಾ (Team India) ಸರಣಿ ಕಳೆದುಕೊಳ್ಳುವ ಭೀತಿಯಲ್ಲಿತ್ತು. ಆದರೆ ಮೂರನೇ ಪಂದ್ಯದಲ್ಲಿ ಭಾರತ ಗೆದ್ದು ಸರಣಿಯನ್ನು ಜೀವಂತವಾಗಿರಿಸಿದೆ. ಇದೀಗ ಟೀಂ ಇಂಡಿಯಾದ ಕಣ್ಣು ಸರಣಿಯ ಉಳಿದೆರಡು ಪಂದ್ಯಗಳನ್ನು ಗೆಲ್ಲುವತ್ತ ನೆಟ್ಟಿದೆ. ಯಾವುದೇ ತಂಡ ಸತತ ಎರಡು ಪಂದ್ಯಗಳಲ್ಲಿ ಸೋತ ನಂತರ ಸತತ ಮೂರು ಪಂದ್ಯಗಳನ್ನು ಗೆಲ್ಲುವುದು ಸುಲಭವಲ್ಲದಿದ್ದರೂ, ಮೂರನೇ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಈ ಹಿಂದೆಯೂ ಈ ರೀತಿಯ ಪ್ರದರ್ಶನ ನೀಡಿದೆ. ಇತ್ತ ಟೆಸ್ಟ್ ಹಾಗೂ ಏಕದಿನ ಸರಣಿ ಸೋತಿರುವ ವೆಸ್ಟ್ ಇಂಡೀಸ್ ಕೂಡ ಟಿ20 ಸರಣಿಯನ್ನಾದರೂ ತನ್ನ ಬುಟ್ಟಿಗೆ ಹಾಕಿಕೊಳ್ಳಲು ಪ್ರಯತ್ನಿಸಲಿದೆ.

ಗಿಲ್ ಮೇಲೆ ತೂಗುಗತ್ತಿ

ಭಾರತದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿರುವುದರಿಂದ ನಾಲ್ಕನೇ ಪಂದ್ಯಕ್ಕೆ ಗೆಲುವಿನ ಸಂಯೋಜನೆಯನ್ನು ಬದಲಿಸುವ ಗೋಜಿಗೆ ಹಾರ್ದಿಕ್ ಹೋಗುವ ಸಾಧ್ಯತೆ ತೀರ ಕಡಿಮೆ ಇದೆ. ಆದರೆ ಆರಂಭಿಕರಾಗಿ ವೈಫಲ್ಯ ಕಾಣುತ್ತಿರುವ ಶುಭ್​ಮನ್ ಗಿಲ್​ಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ ಆಡಿರುವ ಮೂರು ಸರಣಿಯಲ್ಲೂ ಗಿಲ್ ಪ್ರದರ್ಶನ ಅಷ್ಟಕಷ್ಟೆ. ಹೀಗಾಗಿ ಗಿಲ್​ಗೆ ಕೋಕ್ ನೀಡಲು ಮಂಡಳಿ ಚಿಂತಿಸಿದರೆ, ಜೈಸ್ವಾಲ್ ಜೊತೆಗೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

IND vs WI: ಉಳಿದಿರುವ 2 ಟಿ20 ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ ದಾಖಲೆ ಮುರಿಯಲು ಸಜ್ಜಾದ ತಿಲಕ್ ವರ್ಮಾ!

ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆ ಇಲ್ಲ

ಇನ್ನುಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಹಳೆಯ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಕೊಂಚ ಸಮಾಧಾನ ತಂದಿದೆ. ಯುವ ಬ್ಯಾಟರ್ ತಿಲಕ್ ವರ್ಮಾ ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹಾಗೆಯೇ ವಿಕೆಟ್ ಕೀಪಿಂಗ್ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿರುವ ಸಂಜುಗೆ ಈ ಪಂದ್ಯದಲ್ಲೂ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಗಳಿವೆ.

3ನೇ ಟಿ20 ಪಂದ್ಯದಲ್ಲಿ ಆಲ್​​ರೌಂಡರ್ ಅಕ್ಷರ್ ಉತ್ತಮವಾಗಿ ಬೌಲಿಂಗ್ ಮಾಡಿದರೆ, ಹಾರ್ದಿಕ್ ಕೂಡ ಸ್ವತಃ 3ನೇ ಸೀಮರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಮುಖೇಶ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ತಂಡದಲ್ಲಿ ಮುಂದುವರೆಯುವುದು ಖಚಿತ. ಇವರಿಬ್ಬರು ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವುದಕ್ಕಾಗಿ ಪೈಪೋಟಿಯಲ್ಲಿರುವುದರಿಂದ ಅವಕಾಶ ಸಿಗುವ ಸಾಧ್ಯತೆಯಿದೆ. ಹೀಗಾಗಿ ಉಮ್ರಾನ್ ಮತ್ತು ಅವೇಶ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ.

ಭಾರತ ಸಂಭಾವ್ಯ ಭಾರತ ತಂಡ

ಇಶಾನ್ ಕಿಶನ್ / ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್ / ಅವೇಶ್ ಖಾನ್

ಭಾರತ ತಂಡ

ಇಶಾನ್ ಕಿಶನ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಉಮ್ರಾನ್ ಮಲಿಕ್ , ಅವೇಶ್ ಖಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Fri, 11 August 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು