AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ಪಿಚ್‌ನಲ್ಲಿ ಮೈಮರೆತು ವಿಕೆಟ್ ಒಪ್ಪಿಸಿದ ತಿಲಕ್ ವರ್ಮಾ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 14 ರನ್‌ಗಳ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 223 ರನ್ ಕಲೆಹಾಕಿದರೆ, ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 209 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ.

ನಡು ಪಿಚ್‌ನಲ್ಲಿ ಮೈಮರೆತು ವಿಕೆಟ್ ಒಪ್ಪಿಸಿದ ತಿಲಕ್ ವರ್ಮಾ
Tilak VarmaImage Credit source: Starsports
ಝಾಹಿರ್ ಯೂಸುಫ್
|

Updated on: Oct 12, 2026 | 9:39 AM

Share

ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದ ಹೊರತಾಗಿಯೂ ಈ ಪಂದ್ಯ ಸುದ್ದಿಯಲ್ಲಿರುವುದು ಟೀಮ್ ಇಂಡಿಯಾದ ಉಪನಾಯಕ ತಿಲಕ್ ವರ್ಮಾ ಅವರ ಬೇಜವಾಬ್ದಾರಿತನದ ರನೌಟ್​ನಿಂದ. ಅಂದರೆ ಈ ಪಂದ್ಯದಲ್ಲಿ ತಿಲಕ್ ವರ್ಮಾ ಮೈಮರೆತು ವಿಕೆಟ್ ಒಪ್ಪಿಸುವ ಮೂಲಕ ಪೆವಿಲಿಯನ್ ಸೇರಿದ್ದರು.

ಈ ಪಂದ್ಯದಲ್ಲಿ ನಡೆದಿದ್ದೇನು?

ಭಾರತದ ಇನ್ನಿಂಗ್ಸ್‌ನ 17ನೇ ಓವರ್‌ನಲ್ಲಿ ವೆಸ್ಟ್ ಇಂಡೀಸ್ ಸ್ಪಿನ್ನರ್ ಗುಡಕೇಶ್ ಮೋಟಿ ಎಸೆದ ಲೋ-ಫುಲ್ ಟಾಸ್ ಚೆಂಡನ್ನು ಅಕ್ಷರ್ ಪಟೇಲ್ ಲೆಗ್ ಸೈಡ್‌ನತ್ತ ಬಲವಾಗಿ ಫ್ಲಿಕ್ ಮಾಡಿದರು.

ಚೆಂಡು ಬೌಂಡರಿ ಲೈನ್​ನತ್ತ ವೇಗವಾಗಿ ಹೋದದ್ದನ್ನು ನೋಡಿ, ಅದು ಬೌಂಡರಿ ಲೈನ್ ದಾಟಿದೆ ಎಂದು ಇಬ್ಬರೂ ಬ್ಯಾಟರ್‌ಗಳು ಭಾವಿಸಿದರು. ಆ ಬಳಿಕ ಚೆಂಡನ್ನು ಗಮನಿಸುವುದನ್ನು ಬಿಟ್ಟು ತಿಲಕ್ ವರ್ಮಾ ಮತ್ತು ಅಕ್ಷರ್ ಪಟೇಲ್ ಪಿಚ್‌ನ ಮಧ್ಯದಲ್ಲೇ ಭೇಟಿಯಾಗಿ, ಪರಸ್ಪರ ಗ್ಲೌಸ್ ಪಂಚ್ ಮಾಡಿ ಕ್ರೀಸ್​ಗೆ ಹಿಂತಿರುಗಿದರು.

ಆದರೆ ಅಲ್ಲಿ ನಡೆದಿದ್ದೇ ಬೇರೆ. ಬೌಂಡರಿ ಲೈನ್‌ ಬಳಿ ಇದ್ದ ಫೀಲ್ಡರ್ ಕಮಿಲ್ ಪೂರನ್ ಅದ್ಭುತವಾಗಿ ಡೈವ್ ಮಾಡಿ ಚೆಂಡನ್ನು ಬೌಂಡರಿ ಗೆರೆ ದಾಟದಂತೆ ತಡೆದಿದ್ದರು.

ಇದನ್ನು ತಡವಾಗಿ ಗಮನಿಸಿದ ಅಕ್ಷರ್ ಪಟೇಲ್ ಹೇಗೋ ಓಡಿ ಬಂದು ತಮ್ಮ ಕ್ರೀಸ್ ತಲುಪಿದರು. ಆದರೆ ತಿಲಕ್ ವರ್ಮಾಗೆ ತಾವು ಕ್ರೀಸ್‌ನಿಂದ ಹೊರಗಿದ್ದೇವೆ ಎಂಬ ಅರಿವೇ ಇರಲಿಲ್ಲ. ಅಷ್ಟರಲ್ಲೇ ಕೀಪರ್ ಶಾಯ್ ಹೋಪ್ ಕಳುಹಿಸಿದ ಥ್ರೋ ಅನ್ನು ಪಡೆದ ಬೌಲರ್ ಮೋಟಿ ಬೆಲ್ಸ್ ಹಾರಿಸಿದರು.

ಟಿವಿ ಅಂಪೈರ್ ಪರಿಶೀಲಿಸಿದಾಗ ಕಮಿಲ್ ಪೂರನ್ ಅವರ ಫೀಲ್ಡಿಂಗ್ ಕ್ಲೀನ್ ಆಗಿರುವುದು ಮತ್ತು ತಿಲಕ್ ವರ್ಮಾ ಕ್ರೀಸ್‌ನಿಂದ ಬಹಳ ದೂರ ಇರುವುದು ಸ್ಪಷ್ಟವಾಗಿ ಕಂಡುಬಂದಿದ್ದರಿಂದ ಅವರನ್ನು ಔಟ್ ಎಂದು ಘೋಷಿಸಲಾಯಿತು. ಇದೀಗ ಈ ರನೌಟ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ನಮ್ಮ ಸೋಲಿಗೆ ಹವಾಮಾನ ಕೂಡ ಒಂದು ಕಾರಣ: ಶಾಯ್ ಹೋಪ್!

ಗೆದ್ದು ಬೀಗಿದ ಟೀಮ್ ಇಂಡಿಯಾ:

ತಿಲಕ್ ವರ್ಮಾ ಅವರ ಈ ಎಡವಟ್ಟಿನ ಹೊರತಾಗಿಯೂ, ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟಕ 69 ರನ್ (30 ಎಸೆತ) ಗಳ ನೆರವಿನಿಂದ ಭಾರತ ತಂಡ 20 ಓವರ್‌ಗಳಲ್ಲಿ 223 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಬಳಿಕ ಶಿಸ್ತುಬದ್ಧ ದಾಳಿ ನಡೆಸಿದ ಭಾರತೀಯ ಬೌಲರ್‌ಗಳು, ವೆಸ್ಟ್ ಇಂಡೀಸ್ ತಂಡವನ್ನು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 209 ರನ್‌ಗಳಿಗೆ ನಿಯಂತ್ರಿಸಿದರು. ಈ ಮೂಲಕ ಟೀಮ್ ಇಂಡಿಯಾ 14 ರನ್‌ಗಳ ರೋಚಕ ಜಯ ಸಾಧಿಸಿತು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?