Virat Kohli Century: ಸಚಿನ್ ದಾಖಲೆ ಉಡೀಸ್; 500ನೇ ಪಂದ್ಯದಲ್ಲಿ 76ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ..!

Virat Kohli 500th Match: ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್​ ಪಂದ್ಯ ಕೊಹ್ಲಿ ವೃತ್ತಿ ಜೀವನದ 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿದ್ದು, ಐತಿಹಾಸಿಕ ಪಂದ್ಯವನ್ನ ಸ್ಮರಣೀಯಗೊಳಿಸಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕ ಪೂರೈಸಿದರು.

Virat Kohli Century: ಸಚಿನ್ ದಾಖಲೆ ಉಡೀಸ್; 500ನೇ ಪಂದ್ಯದಲ್ಲಿ 76ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ..!
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on:Jul 22, 2023 | 5:39 AM

ಕೊನೆಗೂ 7 ವರ್ಷಗಳ ಕಾಯುವಿಕೆ ಅಂತ್ಯವಾಗಿದೆ. ಕೆರಿಬಿಯನ್ ನಾಡಿನಲ್ಲಿ ಮತ್ತೊಮ್ಮೆ ವಿರಾಟ್ ಕೊಹ್ಲಿಯ (Virat Kohli) ಬ್ಯಾಟ್ ಆಗಸದತ್ತ ಮುಖ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧ (India vs West Indies) ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನ ವಿರಾಟ್ ಕೊಹ್ಲಿ ಶತಕ ಪೂರೈಸಲು ಕೇವಲ13 ರನ್‌ಗಳ ಅಗತ್ಯವಿತ್ತು. ಮೊದಲ ದಿನದಾಟದಲ್ಲಿ ಅಜೇಯ 87 ರನ್ ಬಾರಿಸಿ, ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಕೊಹ್ಲಿ ಮೊದಲ ಸೆಷನ್​ನ ಅರ್ಧ ಗಂಟೆಯಲ್ಲೇ ತಮ್ಮ 29ನೇ ಟೆಸ್ಟ್ ಶತಕವನ್ನು (Test Century) ಪೂರ್ಣಗೊಳಿಸಿದರು. ವಾಸ್ತವವಾಗಿ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್​ ಪಂದ್ಯ ಕೊಹ್ಲಿ ವೃತ್ತಿ ಜೀವನದ 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿದ್ದು, ಐತಿಹಾಸಿಕ ಪಂದ್ಯವನ್ನ ಸ್ಮರಣೀಯಗೊಳಿಸಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕ ಪೂರೈಸಿದರು.

ನಾಲ್ಕು ತಿಂಗಳ ಹಿಂದೆ ಅಂದರೆ, ಮಾರ್ಚ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ 186 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಕೊಹ್ಲಿ ಆ ಶತಕದ ಜೊತೆಗೆ ಮೂರು ವರ್ಷಗಳಿಂದ ಎದುರಿಸುತ್ತಿದ್ದ ಶತಕದ ಬರವನ್ನು ನೀಗಿಸಿಕೊಂಡಿದ್ದರು. ಇದಾದ ಬಳಿಕ ವಿದೇಶಿ ನೆಲದಲ್ಲಿ ಕೊಹ್ಲಿ ಯಾವಾಗ ಟೆಸ್ಟ್ ಶತಕ ಬಾರಿಸುತ್ತಾರೆ ಎಂದು ಎಲ್ಲರೂ ಕಾದು ಕುಳಿತಿದ್ದರು. ಏಕೆಂದರೆ ಸುಮಾರು 5 ವರ್ಷಗಳ ಹಿಂದೆ ವಿದೇಶಿ ನೆಲದಲ್ಲಿ ಶತಕ ಬಾರಿಸಿದ್ದ ವಿರಾಟ್ ಆ ಬಳಿಕ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಎಡವುತ್ತಿದ್ದರು.

Virat Kohli: ಆಫ್ರಿಕನ್ ದಂತಕಥೆಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ರನ್ ಮೆಷಿನ್ ಕೊಹ್ಲಿ..!

76ನೇ ಅಂತಾರಾಷ್ಟ್ರೀಯ ಶತಕ

ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಪಂದ್ಯದ ಮೊದಲ ದಿನದಂದು ಸಂಪೂರ್ಣ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ ಕೊಹ್ಲಿ ದಿನದಾಟದಂತ್ಯಕ್ಕೆ 87 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಹೀಗಾಗಿ ಎರಡನೇ ದಿನ ಕೊಹ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸುತ್ತಾರೆ ಎಂಬ ಭರವಸೆ ಅಭಿಮಾನಿಗಳಲ್ಲಿ ಮೂಡಿತ್ತು. ಹಿಂದಿನ ಹಲವು ಸಂದರ್ಭಗಳಲ್ಲಿ ಶತಕದ ಹತ್ತಿರ ಬರುತ್ತಿದ್ದ ಕೊಹ್ಲಿ, ಕೊನೆಯ ಹಂತದಲ್ಲಿ ವಿಕೆಟ್ ಕೈಚೆಲ್ಲಿ ಶತಕ ವಂಚಿತರಾಗುತ್ತಿದ್ದರು. ಆದರೆ ಈ ಬಾರಿ ನಿರಾಸೆ ಮಾಡದ ಕೊಹ್ಲಿ, ವೇಗದ ಬೌಲರ್ ಶಾನನ್ ಗೇಬ್ರಿಯಲ್ ಅವರ ಚೆಂಡನ್ನು ಪಾಯಿಂಟ್​ ಕಡೆ ಬೌಂಡರಿಗಟ್ಟುವ ಮೂಲಕ ತಮ್ಮ ವೃತ್ತಿಜೀವನದ 76ನೇ ಶತಕವನ್ನು ಪೂರ್ಣಗೊಳಿಸಿದರು.

7 ವರ್ಷಗಳ ನಂತರ ಶತಕ

ಈ ಶತಕದ ಜೊತೆಗೆ ಕೆರಿಬಿಯನ್ ನೆಲದಲ್ಲಿ 7 ವರ್ಷಗಳಿಂದ ನಡೆಯುತ್ತಿದ್ದ ಟೆಸ್ಟ್ ಶತಕದ ಬರವನ್ನೂ ಕೊಹ್ಲಿ ಕೊನೆಗೊಳಿಸಿದರು. 2016 ರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶತಕ ಬಾರಿಸಿದ್ದ ಕೊಹ್ಲಿ ಅದನ್ನು ದ್ವಿಶತಕವಾಗಿ ಪರಿವರ್ತಿಸಿದ್ದರು. ಆ ಬಳಿಕ ಅರ್ಧಶತಕಗಳನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಕೊಹ್ಲಿ ವಿಫಲರಾಗಿದ್ದರು. ಅಷ್ಟೇ ಅಲ್ಲ, ಡಿಸೆಂಬರ್ 2018ರ ನಂತರ ವಿದೇಶಿ ನೆಲದಲ್ಲಿ ಕೊಹ್ಲಿಗೆ ಇದು ಮೊದಲ ಟೆಸ್ಟ್ ಶತಕವಾಗಿದೆ.

ಸಚಿನ್ ದಾಖಲೆ ಉಡೀಸ್

ತಮ್ಮ ವೃತ್ತಿ ಜೀವನದ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಕೊಹ್ಲಿ, ಈ ಪಂದ್ಯದಲ್ಲಿ ತಮ್ಮ 76ನೇ ಅಂತಾರಾಷ್ಟ್ರೀಯ ಶತಕವನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ 500ನೇ ಪಂದ್ಯದವರೆಗೂ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ಈಗ ಅವರ ಖಾತೆ ಸೇರಿದೆ. ಇದರೊಂದಿಗೆ ತಮ್ಮ 500ನೇ ಪಂದ್ಯದವರೆಗೂ 75 ಶತಕಗಳನ್ನು ಬಾರಿಸಿದ್ದ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 am, Sat, 22 July 23

‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ