IND vs WI: ಭಾರತ ಗೆದ್ದರೆ ಟಿ20 ಸರಣಿ ಜೀವಂತ; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ

India vs West Indies 4th T20I Live Streaming: ಭಾರತ ಮತ್ತು ವಿಂಡೀಸ್ ಇದುವರೆಗೆ ವೆಸ್ಟ್ ಇಂಡೀಸ್‌ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದವು. ಆದರೆ ಈಗ ಉಳಿದ ಎರಡು ಪಂದ್ಯಗಳು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಲಿವೆ. ಈ ಮೊದಲು ಉಭಯ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿನ ಅಂಕಿ-ಅಂಶಗಳಲ್ಲಿ ಭಾರತ ಪ್ರಾಬಲ್ಯ ಹೊಂದಿದೆ.

IND vs WI: ಭಾರತ ಗೆದ್ದರೆ ಟಿ20 ಸರಣಿ ಜೀವಂತ; ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ
ಭಾರತ- ವೆಸ್ಟ್ ಇಂಡೀಸ್Image Credit source: insidesport
Follow us
ಪೃಥ್ವಿಶಂಕರ
|

Updated on:Aug 11, 2023 | 2:14 PM

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ನಾಲ್ಕನೇ ಟಿ20 ಪಂದ್ಯ ಶನಿವಾರ ನಡೆಯಲಿದೆ. ಈ ಪಂದ್ಯದಲ್ಲಿ ಭಾರತಕ್ಕೆ ಸರಣಿ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ವೆಸ್ಟ್ ಇಂಡೀಸ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿತು. ತಂಡದ ಪರ ಸೂರ್ಯಕುಮಾರ್ ಯಾದವ್ (SuyraKumar Yadav) 44 ಎಸೆತಗಳಲ್ಲಿ 83 ರನ್ ಗಳಿಸಿದರೆ, ತಿಲಕ್ ವರ್ಮಾ (Tilak Varma) ಅಜೇಯ 49 ರನ್ ಗಳಿಸಿದರು. ಇದೀಗ ನಾಲ್ಕನೇ ಪಂದ್ಯವನ್ನು ಗೆಲ್ಲುವುದು ತಂಡಕ್ಕೆ ದೊಡ್ಡ ಸವಾಲಾಗಿದೆ.

ಭಾರತ ಮತ್ತು ವಿಂಡೀಸ್ ಇದುವರೆಗೆ ವೆಸ್ಟ್ ಇಂಡೀಸ್‌ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದವು. ಆದರೆ ಈಗ ಉಳಿದ ಎರಡು ಪಂದ್ಯಗಳು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಲಿವೆ. ಈ ಮೊದಲು ಉಭಯ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿನ ಅಂಕಿ-ಅಂಶಗಳಲ್ಲಿ ಭಾರತ ಪ್ರಾಬಲ್ಯ ಹೊಂದಿದೆ. ಇಲ್ಲಿಯವರೆಗೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಒಟ್ಟು ಆರು ಪಂದ್ಯಗಳು ಇಲ್ಲಿ ನಡೆದಿವೆ. ಈ ಆರು ಪಂದ್ಯಗಳ ಪೈಕಿ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ ತಂಡವು ಕೇವಲ ಒಂದು ಪಂದ್ಯವನ್ನು ಗೆದ್ದಿದೆ, ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IND vs WI: 4ನೇ ಟಿ20 ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ? ಇಲ್ಲಿದೆ ಸಂಭಾವ್ಯ ತಂಡ

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ರ ಶನಿವಾರದಂದು ನಡೆಯಲ್ಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್, ಲಾಡರ್ಹಿಲ್, ಫ್ಲೋರಿಡಾದಲ್ಲಿ ನಡೆಯಲ್ಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ವೆಸ್ಟ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಡಿಡಿ ಸ್ಪೋಟ್ರ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

ಉಭಯ ಸಂಭಾವ್ಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್/ ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೆಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆದ್ ಮೆಕಾಯ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Fri, 11 August 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು