IND vs WI: ಇಂದೇ ಕೊನೆಯ ಟಿ20 ಪಂದ್ಯ, ಗೆದ್ದವರಿಗೆ ಸರಣಿ; ನಿರ್ಣಾಯಕ ಪಂದ್ಯ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ

IND vs WI: ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತ್ತು. ಈ ಮೂಲಕ 2016 ರ ನಂತರ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ಸತತ ಎರಡು ಟಿ20 ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದ ದಾಖಲೆ ಬರೆದಿತ್ತು. ಇದೀಗ 2-2 ರಿಂದ ಸರಣಿ ಸಮಬಲಗೊಂಡಿದ್ದು, ಉಭಯ ತಂಡಗಳಿಗೂ ಕೊನೆಯ ಟಿ20 ಪಂದ್ಯ ನಿರ್ಣಾಯಕ ವಾಗಿದೆ.

IND vs WI: ಇಂದೇ ಕೊನೆಯ ಟಿ20 ಪಂದ್ಯ, ಗೆದ್ದವರಿಗೆ ಸರಣಿ; ನಿರ್ಣಾಯಕ ಪಂದ್ಯ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ
ಭಾರತ- ವೆಸ್ಟ್ ಇಂಡೀಸ್
Follow us
ಪೃಥ್ವಿಶಂಕರ
|

Updated on:Aug 13, 2023 | 7:50 AM

ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ಸತತ ಸೋಲು ಕಂಡಿದ್ದ ಭಾರತ (India vs West Indies), ಕಳೆದೆರಡು ಪಂದ್ಯಗಳಲ್ಲಿ ಗೆಲುವಿನತ್ತ ಮುಖಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತ್ತು. ಈ ಮೂಲಕ 2016 ರ ನಂತರ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ಸತತ ಎರಡು ಟಿ20 ಪಂದ್ಯಗಳಲ್ಲಿ ಭಾರತವನ್ನು (Team India) ಸೋಲಿಸಿದ ದಾಖಲೆ ಬರೆದಿತ್ತು. ಇದೀಗ 2-2 ರಿಂದ ಸರಣಿ ಸಮಬಲಗೊಂಡಿದ್ದು, ಉಭಯ ತಂಡಗಳಿಗೂ ಕೊನೆಯ ಟಿ20 ಪಂದ್ಯ ನಿರ್ಣಾಯಕವಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಈಗಾಗಲೇ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಗೆದ್ದು ಬೀಗಿದ್ದ ಭಾರತ, ಇದೀಗ ಟಿ20 ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ಮೊದಲೆರಡು ಸರಣಿಗಳನ್ನು ಕಳೆದುಕೊಂಡು ಮುಜುಗರಕ್ಕೊಳಗಾಗಿರುವ ವಿಂಡೀಸ್ ಪಡೆ ತನ್ನ ನೆಚ್ಚಿನ ಮಾದರಿಯಾದ ಟಿ20 ಸರಣಿಯನ್ನಾದರೂ ತನ್ನದಾಗಿಸಿಕೊಳ್ಳುವ ಪ್ರಯತ್ನದಲ್ಲಿದೆ. ಹೀಗಾಗಿ ಅಂತಿಮ ಟಿ20 ಪಂದ್ಯದ ರೋಚಕತೆ ಮತ್ತಷ್ಟು ಹೆಚ್ಚಿದೆ.

IND vs WI: ಯಶಸ್ವಿ- ಗಿಲ್ ಜೊತೆಯಾಟಕ್ಕೆ ರೋಹಿತ್- ರಾಹುಲ್ ದಾಖಲೆ ಉಡೀಸ್..!

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ಆಗಸ್ಟ್ 13 ರ ಭಾನುವಾರದಂದು ನಡೆಯಲ್ಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್, ಲಾಡರ್ಹಿಲ್, ಫ್ಲೋರಿಡಾದಲ್ಲಿ ನಡೆಯಲ್ಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ವೆಸ್ಟ್ ನಡುವಿನ ಐದನೇ ಟಿ20 ಪಂದ್ಯವನ್ನು ಡಿಡಿ ಸ್ಪೋಟ್ರ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

ಉಭಯ ಸಂಭಾವ್ಯ ತಂಡಗಳು

ಭಾರತ ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ತಂಡ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೊಸೈನ್, ಒಬೆದ್ ಮೆಕಾಯ್, ಅಲ್ಜಾರಿ ಜೋಸೆಫ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sun, 13 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ