IND vs WI: 60ಕ್ಕೂ ಹೆಚ್ಚು ಸರಾಸರಿ ಇದ್ದರೂ ಸಂಜು ಸ್ಯಾಮ್ಸನ್‌ಗೆ ಏಕೆ ಅವಕಾಶ ನೀಡುತ್ತಿಲ್ಲ? ಇಲ್ಲಿದೆ ಕಾರಣ

Sanju Samson: ಏಕದಿನದಲ್ಲಿ 60ಕ್ಕೂ ಹೆಚ್ಚು ಸರಾಸರಿ ಹೊಂದಿರುವ ಸಂಜು ಸ್ಯಾಮ್ಸನ್‌ಗೆ ಏಕೆ ಅವಕಾಶ ನೀಡುತ್ತಿಲ್ಪ ಎಂಬುದು ಜನರ ಪ್ರಶ್ನೆಯಾಗಿದೆ.

IND vs WI: 60ಕ್ಕೂ ಹೆಚ್ಚು ಸರಾಸರಿ ಇದ್ದರೂ ಸಂಜು ಸ್ಯಾಮ್ಸನ್‌ಗೆ ಏಕೆ ಅವಕಾಶ ನೀಡುತ್ತಿಲ್ಲ? ಇಲ್ಲಿದೆ ಕಾರಣ
ಸಂಜು ಸ್ಯಾಮ್ಸನ್
Follow us
ಪೃಥ್ವಿಶಂಕರ
|

Updated on: Jul 28, 2023 | 12:27 PM

ಟೆಸ್ಟ್ ಬಳಿಕ ಟೀಂ ಇಂಡಿಯಾ (Team India) ಏಕದಿನ ಸರಣಿಯಲ್ಲೂ ಅಮೋಘ ಶುಭಾರಂಭ ಮಾಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು (India vs West Indies) ಸೋಲಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಾರ್ಬಡೋಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕೇವಲ 114 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ, ಆ ನಂತರ 22.5 ಓವರ್‌ಗಳಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ದಡ ಸೇರಿತು. ಅಂದಹಾಗೆ, ತಂಡವೇನೋ ಗೆದ್ದಿದೆ. ಆದರೆ ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಅದಕ್ಕೆ ಮುಖ್ಯಾ ಕಾರಣ ಮೊದಲ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ಗೆ (Sanju Samson) ಅವಕಾಶ ನೀಡದಿರುವುದು.

ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದಾಗ, ಸ್ಯಾಮ್ಸನ್ ಹೆಸರು ಇರಲಿಲ್ಲ. ಸ್ಯಾಮ್ಸನ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿಯನ್ನು ಸೂರ್ಯಕುಮಾರ್​ಗೆ ವಹಿಸಲಾಗಿತ್ತು. ಸಂಜು ತಂಡದಲ್ಲಿ ಇಲ್ಲದ ಕಾರಣ ಕೋಪಗೊಂಡ ಅಭಿಮಾನಿಗಳು ಪ್ಲೇಯಿಂಗ್ ಇಲೆವೆನ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಏಕದಿನದಲ್ಲಿ 60ಕ್ಕೂ ಹೆಚ್ಚು ಸರಾಸರಿ ಹೊಂದಿರುವ ಸಂಜು ಸ್ಯಾಮ್ಸನ್‌ಗೆ ಏಕೆ ಅವಕಾಶ ನೀಡುತ್ತಿಲ್ಪ ಎಂಬುದು ಜನರ ಪ್ರಶ್ನೆಯಾಗಿದೆ. ಅಲ್ಲದೆ ಸ್ಯಾಮ್ಸನ್‌ಗಿಂತ ಕಳಪೆ ಸರಾಸರಿ ಹೊಂದಿರುವ ಆಟಗಾರರು ಪದೇ ಪದೇ ಅವಕಾಶಗಳನ್ನು ಪಡೆಯುತ್ತಿರುವುದಕ್ಕೆ ಕಾರಣವೇನು? ಎಂಬುದು ಕೂಡ ಎಲ್ಲರ ಪ್ರಶ್ನೆಯಾಗಿದೆ. ಹಾಗಿದ್ದರೆ ಸಂಜು ಏಕೆ ತಂಡದಲ್ಲಿ ಅವಕಾಶ ಪಡೆಯುತ್ತಿಲ್ಲ? ಇಲ್ಲಿದೆ ಕಾರಣ.

Sanju Samson: ಸಂಜು ಸ್ಯಾಮ್ಸನ್ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜು: ಟಿ20ಗೆ ಮಾತ್ರವಲ್ಲ ಏಕದಿನಕ್ಕೂ ಆಯ್ಕೆ?

ಮೊದಲ ಕಾರಣ

ಸಂಜು ಸ್ಯಾಮ್ಸನ್ ಅತ್ಯುತ್ತಮ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಮಧ್ಯಮ ಕ್ರಮಾಂಕದ ವಿಷಯಕ್ಕೆ ಬಂದರೆ ಸೂರ್ಯಕುಮಾರ್ ಯಾದವ್ ಅವರಿಗಿಂತ ಸ್ವಲ್ಪ ಮುಂದಿದ್ದಾರೆ. ಕಾರಣ, ಸೂರ್ಯಕುಮಾರ್ ಯಾದವ್ ಸ್ಪಿನ್ ಬೌಲರ್‌ಗಳ ವಿರುದ್ಧ ಅದ್ಭುತವಾಗಿ ಆಡುತ್ತಾರೆ. ಅಲ್ಲದೆ ವೇಗದ ಬೌಲರ್‌ಗಳಿಗೆ ಕಾಟ ಕೊಡುವುದರಲ್ಲಿ ಸೂರ್ಯ ನಿಸ್ಸೀಮರು. ಮತ್ತೊಂದೆಡೆ, ಸಂಜು ಸ್ಯಾಮ್ಸನ್ ಸ್ಪಿನ್‌ ವಿರುದ್ಧ ರನ್ ಗಳಿಸಲು ಹೆಣಗಾಡುತ್ತಾರೆ. ಬಹುಶಃ ಇದೇ ಕಾರಣಕ್ಕೆ ಆಡಳಿತ ಮಂಡಳಿ ಸೂರ್ಯಕುಮಾರ್ ಯಾದವ್ ಅವರಿಗೆ ಹೆಚ್ಚು ಅವಕಾಶ ನೀಡುತ್ತಿದೆ.

ಎರಡನೇ ಕಾರಣ

ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗದಿರುವುದಕ್ಕೆ ಮತ್ತೊಂದು ಕಾರಣವೆಂದರೆ ತಂಡದಲ್ಲಿ ಖಾಯಂ ಜಾಗ ಇಲ್ಲದಿರುವುದು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಿಶನ್ ಮಿಂಚುತ್ತಿರುವುದು. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆ ಮಾಡಿತ್ತು. ಇದಕ್ಕೆ ಕಾರಣ ಕಿಶನ್ ಮೂರು ಫಾರ್ಮೆಟ್‌ಗಳಲ್ಲಿ ಟೀಂ ಇಂಡಿಯಾ ಪರ ಆಡುತ್ತಿರುವುದು. ಹೀಗಾಗಿಯೇ ಕಿಶನ್ ಏಕದಿನದಲ್ಲಿ ದ್ವಿಶತಕ ಬಾರಿಸುವುದರೊಂದಿಗೆ ಟಿ20-ಟೆಸ್ಟ್‌ಗಳಲ್ಲಿಯೂ ಪ್ರಭಾವ ಬೀರಿದ್ದಾರೆ. ಆದ್ದರಿಂದ ತಂಡದ ಮ್ಯಾನೇಜ್ಮೆಂಟ್ ಎಲ್ಲಾ ಮೂರು ಸ್ವರೂಪಗಳಲ್ಲಿ ಕಿಶನ್​ಗೆ ಅವಕಾಶ ನೀಡುತ್ತಿದೆ.

ಮ್ಯಾನೇಜ್‌ಮೆಂಟ್‌ನ ಕೃಪಾಕಟಾಕ್ಷ ಮುಖ್ಯ

ತಂಡದಲ್ಲಿ ಆಟಗಾರನ ಪ್ರದರ್ಶನ ಮಾತ್ರ ಮುಖ್ಯವಲ್ಲ. ಬದಲಿಗೆ ತಂಡದ ಮ್ಯಾನೇಜ್‌ಮೆಂಟ್‌ನ ಆಲೋಚನೆ ಮತ್ತು ಅದು ಯಾವ ಆಟಗಾರನ ಮೇಲೆ ನಂಬಿಕೆಯನ್ನು ಹೊಂದಿದೆ ಎಂಬುದೂ ಬಹಳ ಮುಖ್ಯವಾಗಿರುತ್ತದೆ. ಯಾವ ಆಟಗಾರ ಮ್ಯಾನೇಜ್‌ಮೆಂಟ್‌ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾನೋ ಅವನಿಗೆ ಸತತ ವೈಫಲ್ಯಗಳ ನಡುವೆಯೂ ಹೆಚ್ಚು ಅವಕಾಶಗಳು ದೊರೆಯುತ್ತವೆ. ಇದಕ್ಕೆ ಈಗಾಗಲೇ ನಾವು ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ರೂಪದಲ್ಲಿ ಸಾಕಷ್ಟು ಉದಾಹರಣೆ ನೋಡಿದ್ದೇವೆ. ಆದರೆ ಸಂಜು ವಿಚಾರದಲ್ಲಿ ಮಾತ್ರ ಇದು ತದ್ವಿರುದ್ಧವಾಗಿದೆ. ಈ ಹಿಂದೆ ಭಾರತದ ನಾಯಕರಾದ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಕೂಡ ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಮ್ಯಾನೇಜ್‌ಮೆಂಟ್‌ ಕೃಪಕಟಾಕ್ಷಕ್ಕೆ ಒಳಗಾಗಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ