IND vs WI, WWC 2022 LIVE Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ! ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

IND vs WI: ಭಾರತ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಭಾರತ ಮಹಿಳಾ ತಂಡ ವಿಶ್ವಕಪ್‌ನಲ್ಲಿ ಇದುವರೆಗೆ ಎರಡು ಪಂದ್ಯಗಳನ್ನು ಆಡಿದೆ. ಒಂದು ಪಂದ್ಯದಲ್ಲಿ ಗೆದ್ದು ಇನ್ನೊಂದು ಪಂದ್ಯದಲ್ಲಿ ಸೋತಿದ್ದಾರೆ.

IND vs WI, WWC 2022 LIVE Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ! ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮಹಿಳಾ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Mar 11, 2022 | 10:43 PM

ಐಸಿಸಿ ಮಹಿಳಾ ವಿಶ್ವಕಪ್ 2022 ರಲ್ಲಿ ಭಾರತ ಮಹಿಳಾ ತಂಡ ಶನಿವಾರ ತನ್ನ ಮೂರನೇ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಂತರ, ಟೀಮ್ ಇಂಡಿಯಾ ಈಗ ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದೆ (IND W vs WI W ). ಈ ಪಂದ್ಯ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯ ಸಾಧಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ಸೋತರು. ಈ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಭಾರತವನ್ನು 62 ರನ್‌ಗಳಿಂದ ಸೋಲಿಸಿತ್ತು. ಭಾರತ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಭಾರತ ಮಹಿಳಾ ತಂಡ ವಿಶ್ವಕಪ್‌ನಲ್ಲಿ ಇದುವರೆಗೆ ಎರಡು ಪಂದ್ಯಗಳನ್ನು ಆಡಿದೆ. ಒಂದು ಪಂದ್ಯದಲ್ಲಿ ಗೆದ್ದು ಇನ್ನೊಂದು ಪಂದ್ಯದಲ್ಲಿ ಸೋತಿದ್ದಾರೆ.

ವಿಶ್ವಕಪ್ ವಿಚಾರಕ್ಕೆ ಬಂದರೆ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಪ್ರಭುತ್ವ ಸಾಧಿಸಿದೆ. ಏಕೆಂದರೆ ಭಾರತ ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಎದುರು ಸೋತಿಲ್ಲ. ಉಭಯ ತಂಡಗಳು ಇದುವರೆಗೆ ಆರು ಪಂದ್ಯಗಳನ್ನು ಆಡಿವೆ. ಈ ಆರು ಪಂದ್ಯಗಳನ್ನು ಭಾರತ ಗೆದ್ದಿದೆ.

2022 ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಯಾವಾಗ ಮುಖಾಮುಖಿಯಾಗುತ್ತವೆ? ಭಾರತ ಮತ್ತು ವೆಸ್ಟ್ ಇಂಡೀಸ್ ಮಾರ್ಚ್ 12 ರಂದು (ಶನಿವಾರ) ಮುಖಾಮುಖಿಯಾಗಲಿವೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? 2022 ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವು ಹ್ಯಾಮಿಲ್ಟನ್‌ನ ಸೆಡಾನ್ ಪಾರ್ಕ್‌ನಲ್ಲಿ ನಡೆಯಲಿದೆ.

ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಮಹಿಳಾ ವಿಶ್ವಕಪ್ 2022 ರಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6.30 ಕ್ಕೆ ಪ್ರಾರಂಭವಾಗಲಿದೆ. 6 ಗಂಟೆಗೆ ಟಾಸ್ ನಡೆಯಲಿದೆ.

ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು? ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಪಂದ್ಯದ ಲೈವ್ ಸ್ಟ್ರೀಮಿಂಗ್ ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

ದನ್ನೂ ಓದಿ:IND vs SL: ಬೆಂಗಳೂರಿನಲ್ಲಿ 2ನೇ ಟೆಸ್ಟ್ ಪಂದ್ಯ; KSCA ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ