ಭಾರತ ಮತ್ತು ಜಿಂಬಾಬ್ವೆ (India and Zimbabwe) ನಡುವಿನ ಏಕದಿನ ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ಜಿಂಬಾಬ್ವೆಯನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಕೆಎಲ್ ರಾಹುಲ್ (KL Rahul) ನಾಯಕತ್ವದಲ್ಲಿ ಭಾರತ ಸುಲಭ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಜೊತೆಗೆ ರಾಹುಲ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಗೆದ್ದಿತ್ತು. ಇದೀಗ ರಾಹುಲ್ ನಾಯಕತ್ವದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಸರಣಿ ಗೆಲ್ಲುವ ಅವಕಾಶ ಪಡೆದಿದೆ.
ಸರಣಿ ಗೆಲ್ಲುವ ಅವಕಾಶ
ODI ಸರಣಿಯ ಎರಡನೇ ಪಂದ್ಯವು ಆಗಸ್ಟ್ 20 ಶನಿವಾರದಂದು ಉಭಯ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸರಣಿ ಗೆಲ್ಲಲು ಪ್ರಯತ್ನಿಸಲಿದ್ದು, ರೆಗಿಸ್ ಚಕಬ್ವಾ ತಂಡ ತವರು ನೆಲದಲ್ಲಿ ಹಾಗೂ ಅಭಿಮಾನಿಗಳ ಮುಂದೆ ಮೊದಲ ಪಂದ್ಯಕ್ಕಿಂತ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದೆ. ಈ ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ಆಡಲಾಗುತ್ತದೆ ಮತ್ತು ನೀವು ಅದನ್ನು ಹೇಗೆ ವೀಕ್ಷಿಸಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
That’s that from the 1st ODI.
An unbeaten 192 run stand between @SDhawan25 & @ShubmanGill as #TeamIndia win by 10 wickets.
Scorecard – https://t.co/P3fZPWilGM #ZIMvIND pic.twitter.com/jcuGMG0oIG
— BCCI (@BCCI) August 18, 2022
ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಏಕದಿನ ಪಂದ್ಯ ಆಗಸ್ಟ್ 20 ರಂದು (ಶನಿವಾರ) ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 2 ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 2ನೇ ಏಕದಿನ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
ಜಿಂಬಾಬ್ವೆ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12.45ಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 12:15ಕ್ಕೆ ಟಾಸ್ ನಡೆಯಲಿದೆ.
ಜಿಂಬಾಬ್ವೆ ಮತ್ತು ಟೀಂ ಇಂಡಿಯಾ ನಡುವಿನ ಎರಡನೇ ODI ಪಂದ್ಯವನ್ನು ಯಾವ ಚಾನಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ?
ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಅಭಿಮಾನಿಗಳು ವೀಕ್ಷಿಸಲು ಸಾಧ್ಯವಾಗುತ್ತದೆ.
ಭಾರತ-ಜಿಂಬಾಬ್ವೆ 2ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ODI ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಮಾಡಲಾಗುತ್ತದೆ.
Published On - 10:16 pm, Fri, 19 August 22